ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿಕ್ಷಣವೇ ಸಮಾನತೆಯ ಮಹಾ ಅಸ್ತ್ರ; ವೈಚಾರಿಕ ಕ್ರಾಂತಿಗೆ ‘ಶೂದ್ರ ಬಂಡಾಯ’ ಪ್ರೇರಣೆ: ಸಚಿವ ಮಧು ಬಂಗಾರಪ್ಪ

On: May 11, 2026 12:24 PM
Follow Us:

ಬೆಂಗಳೂರು: “ಸಮಾಜದಲ್ಲಿ ಸಮಾನತೆಯನ್ನು ಪ್ರತಿಷ್ಠಾಪಿಸಲು ಶಿಕ್ಷಣವೇ ಅತ್ಯಂತ ಪ್ರಬಲವಾದ ಅಸ್ತ್ರ. ಸಮಗ್ರ ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ದೊರೆಯಲು ಸಾಧ್ಯ,” ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು.

​ನಗರದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಸೋಮವಾರ ಜೀರುಂಡೆ ಪುಸ್ತಕ ಪ್ರಕಾಶನ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ, ಖ್ಯಾತ ಚಿಂತಕ ಕಂಚ ಐಲಯ್ಯ ಶೆಫರ್ಡ್ ಅವರ ‘ಶೂದ್ರ ಬಂಡಾಯ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವರು, “ಶೂದ್ರ ಬಂಡಾಯದಂತಹ ಕೃತಿಗಳು ಓದುಗರಲ್ಲಿ ಕೇವಲ ಜ್ಞಾನವನ್ನಷ್ಟೇ ಅಲ್ಲದೆ, ವೈಚಾರಿಕ ಕ್ರಾಂತಿಯನ್ನುಂಟು ಮಾಡುತ್ತವೆ. ಇಂತಹ ಸಾಮಾಜಿಕ ಕಳಕಳಿಯ ಸಾಹಿತ್ಯವು ಸರ್ಕಾರದ ಆಲೋಚನೆಗಳಿಗೆ ಮತ್ತು ನೀತಿಗಳಿಗೆ ಬಲ ತುಂಬುತ್ತದೆ. ಸರ್ವರಿಗೂ ಸಮಾನ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ,” ಎಂದರು.

ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಆಡಳಿತ ಅವಧಿಯನ್ನು ಸ್ಮರಿಸಿದ ಸಚಿವರು, “ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಅಂದು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳಿಗೆ ಪ್ರತಿದಿನ ಒಂದು ರೂಪಾಯಿ ಕೊಡುವ ಪದ್ಧತಿಯನ್ನು ಜಾರಿಗೆ ತರಲಾಗಿತ್ತು. ಅಂದು ಹಾಕಿಕೊಟ್ಟ ಆ ಭದ್ರ ಬುನಾದಿಯೇ ಇಂದು ಲಕ್ಷಾಂತರ ಗ್ರಾಮೀಣ ಬಡ ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡಿದೆ,” ಎಂದು ಭಾವನಾತ್ಮಕವಾಗಿ ನುಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ತರಲಿರುವ ಬದಲಾವಣೆಗಳ ಬಗ್ಗೆ ಮಾತನಾಡಿದ ಅವರು, “ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ (Bilingual) ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಸರ್ಕಾರಿ ಶಾಲೆಗಳ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಅನುವಾಗುವಂತೆ ಎಲ್ಲಾ ರೀತಿಯ ಸವಲತ್ತು ಮತ್ತು ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಒಂದು ಹೊಸ ಯುಗ ಪ್ರಾರಂಭವಾಗಲಿದೆ,” ಎಂದು ಭರವಸೆ ನೀಡಿದರು.

ಭಾರತದ ಖ್ಯಾತ ಚಿಂತಕ ಕಂಚ ಐಲಯ್ಯ ಶೆಫರ್ಡ್ ಅವರು ಮೂಲತಃ ಬರೆದಿರುವ ಈ ಕೃತಿಯು ಭಾರತೀಯ ಸಮಾಜದಲ್ಲಿ ಶೂದ್ರ ಸಮುದಾಯಗಳ ಐತಿಹಾಸಿಕ ಹಿನ್ನೆಲೆ, ಅವರ ಶ್ರಮದ ಸಂಸ್ಕೃತಿ ಮತ್ತು ಅವರು ಎದುರಿಸುತ್ತಿರುವ ಸಾಮಾಜಿಕ ಸವಾಲುಗಳನ್ನು ಆಳವಾಗಿ ವಿಶ್ಲೇಷಿಸುತ್ತದೆ. ಜಾತಿ ಪದ್ಧತಿಯ ಬೇರುಗಳನ್ನು ಗುರುತಿಸುತ್ತಾ, ಸಾಮಾಜಿಕ ಸಮಾನತೆಯನ್ನು ಸಾಧಿಸಲು ಶೂದ್ರ ಸಮುದಾಯಗಳು ಒಗ್ಗೂಡಿ ನಡೆಸಬೇಕಾದ ಬೌದ್ಧಿಕ ಮತ್ತು ಸಾಂಸ್ಕೃತಿಕ ಹೋರಾಟದ ಅನಿವಾರ್ಯತೆಯನ್ನು ಲೇಖಕರು ಇಲ್ಲಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಖ್ಯಾತ ರಾಜಕೀಯ ವಿಶ್ಲೇಷಕ ಹಾಗೂ ಪ್ರಾಧ್ಯಾಪಕ ಎ. ನಾರಾಯಣ, ಕವಯಿತ್ರಿ ಶ್ರೀಮತಿ ಭಾರತಿ ದೇವಿ, ಕೃತಿಯನ್ನು ಕನ್ನಡಕ್ಕೆ ಸೊಗಸಾಗಿ ಅನುವಾದಿಸಿದ ಶ್ರೀಮತಿ ಜಯಲಕ್ಷ್ಮಿ ಮತ್ತು ಜೀರುಂಡೆ ಪ್ರಕಾಶನದ ಧನಂಜಯ ಎನ್ ಅವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ನೂರಾರು ಸಾಹಿತ್ಯಾಭಿಮಾನಿಗಳು, ಚಿಂತಕರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment