ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​ಪಂಚಪೀಠಾಧೀಶ್ವರರ ಆಶೀರ್ವಾದದೊಂದಿಗೆ ರಾಜ್ಯ ಪ್ರವಾಸ: ಸ್ವಚ್ಛ, ಪ್ರಾಮಾಣಿಕ ಸರ್ಕಾರ ತರುವುದೇ ನನ್ನ ಗುರಿ- ಬಿ.ಎಸ್. ಯಡಿಯೂರಪ್ಪ ಶಪಥ

On: May 18, 2026 1:19 AM
Follow Us:

ಶಿವಮೊಗ್ಗ: ನಗರದ ಅಲ್ಲಮಪ್ರಭು ಮೈದಾನದಲ್ಲಿ ಭಾನುವಾರದಂದು ಭಕ್ತಿ, ಜನಾಂದೋಲನ ಹಾಗೂ ಕೃತಜ್ಞತೆಯ ತ್ರಿವೇಣಿ ಸಂಗಮವೇ ಸೃಷ್ಟಿಯಾಗಿತ್ತು. ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಪಾವನ ಸಾನ್ನಿಧ್ಯದಲ್ಲಿ ನಡೆದ ಭವ್ಯ ಅಡ್ಡಪಲ್ಲಕ್ಕಿ ಮಹೋತ್ಸವ, ಬೃಹತ್ ಧರ್ಮಜಾಗೃತಿ ಸಮಾವೇಶ ಹಾಗೂ ರೈತರ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸನ್ಮಾನ ಮತ್ತು ಕೃತಜ್ಞತಾ ಸಮರ್ಪಣಾ ಸಮಾರಂಭವು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತೆ ಯಶಸ್ವಿಯಾಯಿತು. ಅಪಾರ ಜನಸ್ತೋಮದ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪನವರು ಅತ್ಯಂತ ಭಾವುಕರಾಗಿ ತಮ್ಮ ಮುಂದಿನ ರಾಜಕೀಯ ಹಾಗೂ ಸಾಮಾಜಿಕ ಸಂಕಲ್ಪವನ್ನು ಮಾಡಿದರು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪನವರು, “ಪಂಚಪೀಠಾಧೀಶ್ವರರು ಶಿವಮೊಗ್ಗದ ಮಣ್ಣಿಗೆ ಹೆಜ್ಜೆ ಇಡುತ್ತಿದ್ದಂತೆ ಪ್ರಕೃತಿಯೂ ಭಕ್ತಿಯಿಂದ ತಲೆಬಾಗಿದೆ. ನಾವೆಲ್ಲರೂ ಈ ವೇದಿಕೆಯನ್ನು ತಲುಪುವವರೆಗೂ ಶಾಂತವಾಗಿದ್ದ ವರುಣದೇವನು, ಜಗದ್ಗುರುಗಳ ಆಗಮನದ ಭವ್ಯತೆಯನ್ನು ಕಂಡು ಸಂತೋಷಗೊಂಡು ಮಳೆಯ ರೂಪದಲ್ಲಿ ಆಶೀರ್ವಾದದ ಮಂತ್ರಾಕ್ಷತೆಯನ್ನು ಸುರಿಸಿದ್ದಾನೆ. ಜಗದ್ಗುರುಗಳ ಸಮಕ್ಷಮದಲ್ಲಿ ನನಗೆ ಸಿಕ್ಕಿರುವ ಈ ಗೌರವ, ಆಶೀರ್ವಾದ ಮತ್ತು ಅಭಿನಂದನೆಗಳು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾಗದ ಅತ್ಯಂತ ಶ್ರೇಷ್ಠ ‘ಸುದಿನ’ ಹೌದು” ಎಂದು ಕೃತಜ್ಞತೆ ಸಲ್ಲಿಸಿದರು.

ವೇದಿಕೆಯ ಮುಂಭಾಗದಲ್ಲಿದ್ದ ಹತ್ತಾರು ಸಾವಿರ ಅಭಿಮಾನಿಗಳು ಮತ್ತು ಸಾರ್ವಜನಿಕರ ಹರ್ಷೋದ್ಗಾರ ಹಾಗೂ ಪ್ರೀತಿಯನ್ನು ಕಂಡು ಯಡಿಯೂರಪ್ಪನವರು ಕೆಲಕಾಲ ಭಾವುಕರಾದರು. “ನಿಮ್ಮ ಈ ಅಪ್ರತಿಮ ಪ್ರೀತಿ ಮತ್ತು ವಿಶ್ವಾಸವನ್ನು ನೋಡಿದಾಗ ನನಗೆ ಮಾತನಾಡಲು ಶಬ್ದಗಳೇ ಸಿಗುತ್ತಿಲ್ಲ. ನನ್ನ ಜನನ, ಬಾಲ್ಯ ಹಾಗೂ ಉದ್ಯೋಗದ ಪಯಣ ಬೇರೆ ಬೇರೆ ಜಿಲ್ಲೆಗಳಲ್ಲಾಗಿದ್ದರೂ, ನನಗೆ ರಾಜಕೀಯ ಮರುಜೀವ ನೀಡಿ ಇಷ್ಟು ಎತ್ತರಕ್ಕೆ ಬೆಳೆಸಿದ್ದು ಇದೇ ಶಿಕಾರಿಪುರ ಮತ್ತು ಶಿವಮೊಗ್ಗದ ಜನತೆ. ಈ ಮಣ್ಣಿನ ಋಣವನ್ನು ನಾನು ಯಾವುದೇ ಜನ್ಮದಲ್ಲೂ ತೀರಿಸಲು ಸಾಧ್ಯವಿಲ್ಲ” ಎಂದು ಗದ್ಗದಿತರಾದರು.

ತಮ್ಮ ಮುಂದಿನ ಧಾವಲತ್ತನ್ನು ಸ್ಪಷ್ಟಪಡಿಸಿದ ಅವರು, ಮುಂಬರುವ ದಿನಗಳಲ್ಲಿ ಯಾವುದೇ ಭೇದ-ಭಾವವಿಲ್ಲದ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದಾಗಿ ಪ್ರತಿಜ್ಞೆ ಮಾಡಿದರು:

  • ಸಮಪಾಲು-ಸಮಬಾಳು: “ನನ್ನ ಜೀವನದ ಕೊನೆಯ ಉಸಿರಿರುವವರೆಗೂ ಯಾವುದೇ ಪಕ್ಷ ಭೇದವಾಗಲಿ, ಜಾತಿ ಭೇದವಾಗಲಿ ಮಾಡದೆ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆ.”
  • ದೀನದಲಿತರ ರಕ್ಷಣೆ: “ದೀನದಲಿತರಿಗೆ ಮತ್ತು ಹಿಂದುಳಿದ ವರ್ಗಗಳಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ರಕ್ಷಿಸುವುದು ನನ್ನ ಕರ್ತವ್ಯ.”
  • ಸಹೋದರತ್ವದ ಸಂದೇಶ: “ನಾವೆಲ್ಲರೂ ಒಂದೇ ತಾಯಿಯ ಮಕ್ಕಳಂತೆ ಬಾಳಿ ಬದುಕಲು ಏನೆಲ್ಲಾ ಶ್ರಮ ಹಾಕಬೇಕೋ, ಆ ಎಲ್ಲಾ ಪ್ರಾಮಾಣಿಕ ಪ್ರಯತ್ನವನ್ನು ನಾನು ಮಾಡುತ್ತೇನೆ.”

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಚುರುಕಿನ ಸಂಚಲನ ಮೂಡಿಸುವ ಮುನ್ಸೂಚನೆ ನೀಡಿದ ಯಡಿಯೂರಪ್ಪನವರು, “ನಾನು ವಿಶ್ರಮಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಹಗಲಿರುಳು ಪ್ರವಾಸ ಮಾಡುತ್ತೇನೆ. ಜನರ ಮನೆಬಾಗಿಲಿಗೆ ತೆರಳಿ ಅವರ ಪ್ರೀತಿ-ವಿಶ್ವಾಸವನ್ನು ಗಳಿಸುತ್ತೇನೆ. ಆ ಮೂಲಕ ಮುಂಬರುವ ದಿನಗಳಲ್ಲಿ ಪಂಚಪೀಠಾಧೀಶ್ವರರ ಆಶೀರ್ವಾದದೊಂದಿಗೆ ರಾಜ್ಯದಲ್ಲಿ ಅತ್ಯಂತ ಸ್ವಚ್ಛ, ದಕ್ಷ ಮತ್ತು ಪ್ರಾಮಾಣಿಕ ಸರ್ಕಾರವನ್ನು ಅಧಿಕಾರಕ್ಕೆ ತರಲು ನನ್ನ ಕಡೆಯಿಂದ ಶಕ್ತಿಮೀರಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಜನತೆಗೆ ಭರವಸೆ ನೀಡಿದರು.

ವೇದಿಕೆಯಲ್ಲಿದ್ದ ಪೂಜ್ಯ ಪಂಚಪೀಠಗಳ ಜಗದ್ಗುರುಗಳ ಪಾದಪದ್ಮಗಳಿಗೆ ಶಿರಬಾಗಿ ನಮಸ್ಕರಿಸಿದ ಬಿ.ಎಸ್.ವೈ, ನೆರೆದಿದ್ದ ಸಹಸ್ರಾರು ತಾಯಂದಿರು, ಅಣ್ಣ-ತಮ್ಮಂದಿರು ಹಾಗೂ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನು ಸಮರ್ಪಿಸಿದರು. ಈ ಐತಿಹಾಸಿಕ ಸಮಾವೇಶವು ಶಿವಮೊಗ್ಗ ಜಿಲ್ಲೆಯ ಜನಮನದಲ್ಲಿ ಭಕ್ತಿಯ ಅಲೆಯ ಜೊತೆಗೆ ಹೊಸ ರಾಜಕೀಯ ಉತ್ಸಾಹವನ್ನು ತುಂಬಿದೆ.

ಈ ಐತಿಹಾಸಿಕ ಮಹೋತ್ಸವದಲ್ಲಿ ಪರಮಪೂಜ್ಯ ಪಂಚಪೀಠಾಧೀಶ್ವರರಾದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು (ಬಾಳೆಹೊನ್ನೂರು ಪೀಠ), ಶ್ರೀಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು (ಉಜ್ಜಯಿನಿ ಪೀಠ), ಶ್ರೀಮದ್ ಗಿರಿರಾಜ ಸೂರ್ಯ ಸಿಂಹಾಸನಾಧೀಶ್ವರ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು (ಶ್ರೀಶೈಲ ಪೀಠ), ಹಾಗೂ ಶ್ರೀಮದ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರ ಜಗದ್ಗುರು ವಿದ್ಯಾಬಾಚಸ್ಪತಿ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು (ಕಾಶಿ ಪೀಠ) ಅವರ ದಿವ್ಯ ಸಾನಿಧ್ಯವು ಕಾರ್ಯಕ್ರಮದ ವೈಭವವನ್ನು ಮತ್ತಷ್ಟು ಹೆಚ್ಚಿಸಿತು.

ಈ ಐತಿಹಾಸಿಕ ಸಮಾವೇಶಕ್ಕೆ ಕೇವಲ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಮಠಾಧೀಶರು, ಪೂಜ್ಯ ಗುರುಗಳು ಆಗಮಿಸಿದ್ದರು. ಪಂಚಪೀಠಗಳ ಜಗದ್ಗುರುಗಳ ದಿವ್ಯ ಸಾನ್ನಿಧ್ಯದೊಂದಿಗೆ, ವಿವಿಧ ಮಠಗಳ ನೂರಾರು ಸಂತರ ಈ ಮಹಾಸಂಗಮವು ಇಡೀ ಫ್ರೀಡಂ ಪಾರ್ಕ್ ಮೈದಾನದಲ್ಲಿ ಅಭೂತಪೂರ್ವ ಆಧ್ಯಾತ್ಮಿಕ ಕಳೆಯನ್ನು ಉಂಟುಮಾಡಿತ್ತು.

ಈ ಧರ್ಮ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ,
ಶಾಸಕರಾದ ಚನ್ನಬಸಪ್ಪ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ್ರು, ಹೆಚ್.ಎಂ.ಚಂದ್ರಶೇಖರಪ್ಪ, ಹೆಚ್. ಹಾಲಪ್ಪ , ರೇಣುಕಾಚಾರ್ಯ, ಲಕ್ಷ್ಮೀನಾರಾಯಣ, ಮಡಾಳು ಮಲ್ಲಿಕಾರ್ಜುನ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ರುದ್ರುಮನಿ ಸಜ್ಜನ್, ಮಹೇಶ್ವರಯ್ಯ, ವಿರೂಪಾಕ್ಷಪ್ಪ, ಬಳ್ಳೇಕೆರೆ ಸಂತೋಷ್, ಎಸ್.ಎಸ್. ಜ್ಯೋತಿಪ್ರಕಾಶ್, ಎಸ್.ಪಿ. ದಿನೇಶ್, ಸಮಾಜದ ಮುಖಂಡರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment