ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಹೈಕೋರ್ಟ್ ಸಂಚಾರಿ ಪೀಠ ಹೋರಾಟಕ್ಕೆ ಸಿಕ್ಕಿತು ‘ರೈತ ಶಕ್ತಿ’: ವಕೀಲರ ಬೆಂಬಲಕ್ಕೆ ನಿಂತ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ

On: May 19, 2026 1:23 PM
Follow Us:

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಪ್ರಸ್ತಾಪಕ್ಕೆ ವಿರೋಧ: ಮಧ್ಯ ಕರ್ನಾಟಕದ ಕೇಂದ್ರಬಿಂದು ಶಿವಮೊಗ್ಗದಲ್ಲೇ ಪೀಠ ಸ್ಥಾಪಿಸಲು ರೈತ ಸಂಘ ಹಾಗೂ ವಕೀಲರ ಒಕ್ಕೂಟ ಆಗ್ರಹ

ಶಿವಮೊಗ್ಗ: ಕರಾವಳಿ ಜಿಲ್ಲೆಗಳ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ಹೈಕೋರ್ಟ್‌ ಸಂಚಾರಿ ಪೀಠ (Circuit Bench) ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ಮಧ್ಯ ಕರ್ನಾಟಕದ ಕೇಂದ್ರಬಿಂದುವಾಗಿರುವ ಶಿವಮೊಗ್ಗದಲ್ಲೇ ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕು ಎಂದು ಆಗ್ರಹಿಸಿ ಜಿಲ್ಲಾ ವಕೀಲರ ಸಂಘ ಆರಂಭಿಸಿರುವ ಅನಿರ್ದಿಷ್ಟಾವಧಿ ಬೃಹತ್ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ವಕೀಲರ ಭವನದ ಮುಂಭಾಗ ನಡೆಯುತ್ತಿರುವ ಈ ಪ್ರತಿಭಟನೆಗೆ ಜಿಲ್ಲೆಯ ವಿವಿಧ ನಾಗರಿಕ ಮತ್ತು ಪ್ರಗತಿಪರ ಸಂಘಟನೆಗಳು ಸಾಥ್ ನೀಡಿದ್ದು, ಇಂದು ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ ಅವರು ಭಾಗವಹಿಸಿ ರೈತ ಸಮುದಾಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.

​ಪ್ರತಿಭಟನಾ ನಿರತ ವಕೀಲರನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಹೆಚ್.ಆರ್. ಬಸವರಾಜಪ್ಪ ಅವರು ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

​”ನ್ಯಾಯಕ್ಕಾಗಿ ಅಲೆಯುವ ಸಾಮಾನ್ಯ ಜನರಿಗೆ, ಅದರಲ್ಲೂ ಮುಖ್ಯವಾಗಿ ಹಗಲಿರುಳು ದುಡಿಯುವ ರೈತರಿಗೆ ನ್ಯಾಯಾಲಯದ ಕಲಾಪಗಳು ಕೈಗೆಟುಕುವ ದೂರದಲ್ಲಿರಬೇಕು. ಶಿವಮೊಗ್ಗದಿಂದ ಮಂಗಳೂರಿಗೆ ಇರುವ ಭೌಗೋಳಿಕ ಪರಿಸ್ಥಿತಿ ಮತ್ತು ಘಾಟಿ ರಸ್ತೆಗಳ ಸಂಚಾರ ಅತ್ಯಂತ ಕಠಿಣವಾಗಿದೆ. ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಜಿಲ್ಲೆಗಳನ್ನು ಕರಾವಳಿಯ ಮಂಗಳೂರು ಪೀಠಕ್ಕೆ ಜೋಡಿಸಲು ಹೊರಟಿರುವುದು ತೀರಾ ಅವೈಜ್ಞಾನಿಕ ಕ್ರಮ. ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಈ ನ್ಯಾಯಸಮ್ಮತ ಹೋರಾಟಕ್ಕೆ ನಮ್ಮ ಸಂಘಟನೆಯ ಸಂಪೂರ್ಣ ಬೆಂಬಲವಿದೆ” ಎಂದು ಅವರು ಸ್ಪಷ್ಟಪಡಿಸಿದರು.

​ಇತ್ತೀಚೆಗಷ್ಟೇ ಮಂಗಳೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಅನುಮತಿ ಕೋರಿ ಮುಖ್ಯಮಂತ್ರಿಗಳು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿರುವುದು ಈ ಇಡೀ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ನಡೆಗೆ ಶಿವಮೊಗ್ಗದ ವಕೀಲರು ತೀವ್ರ ಆಕ್ಷೇಪ ಎತ್ತಿದ್ದಾರೆ.

​ಒಂದು ವೇಳೆ ಮಂಗಳೂರಿನಲ್ಲಿ ಪೀಠ ಸ್ಥಾಪನೆಯಾದರೂ, ಯಾವುದೇ ಕಾರಣಕ್ಕೂ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪ್ರಕರಣಗಳನ್ನು ಮಂಗಳೂರು ಪೀಠದ ವ್ಯಾಪ್ತಿಗೆ ಸೇರಿಸಬಾರದು. ಮಧ್ಯ ಕರ್ನಾಟಕದ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರಿನ ಜನರಿಗೆ ಅನುಕೂಲವಾಗುವಂತೆ ಶಿವಮೊಗ್ಗ ನಗರದಲ್ಲೇ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕು ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಹಿರಿಯ ವಕೀಲ ಕೆ. ಬಸಪ್ಪಗೌಡ ಹಾಗೂ ವಕೀಲರ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ ಒತ್ತಾಯಿಸಿದ್ದಾರೆ.

​ಈ ಬೃಹತ್ ಧರಣಿಯಲ್ಲಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು, ಪ್ರಮುಖ ಪದಾಧಿಕಾರಿಗಳು, ಹಿರಿಯ ನ್ಯಾಯವಾದಿಗಳು ಹಾಗೂ ರೈತ ಸಂಘದ ಪ್ರಮುಖ ಮುಖಂಡರು, ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್, ನಾಗರಿಕ ಹಿತರಕ್ಷಣಾ ವೇದಿಕೆ ಸೇರಿದಂತೆ ನೂರಾರು ಜನ ಹೋರಾಟದಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment