ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪುಣ್ಯಸ್ಮರಣೆ: “ದೇಶದ ಪ್ರಗತಿಗೆ ಅಡಿಪಾಯ ಹಾಕಿದ ನಾಯಕ ರಾಜೀವ್ ಗಾಂಧಿ” – ನಗರದ ಮಹದೇವಪ್ಪ

On: May 21, 2026 9:09 PM
Follow Us:

​ಶಿವಮೊಗ್ಗ: ದೇಶದ ಧೀಮಂತ ನಾಯಕ, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಗೌರವ ಸಮರ್ಪಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಮುಖಂಡರು ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವಪೂರ್ವಕ ನಮನಗಳನ್ನು ಅರ್ಪಿಸಿದರು.

​ಪುಷ್ಪಾರ್ಚನೆ ಮಾಡಿ ಮಾತನಾಡಿದ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಕಾರ್ಯಾಧ್ಯಕ್ಷರಾದ ನಗರದ ಮಹದೇವಪ್ಪನವರು, “ದೇಶ ಕಂಡ ಮಹಾನ್ ನಾಯಕ ರಾಜೀವ್ ಗಾಂಧಿಯವರು ಪ್ರಧಾನಮಂತ್ರಿ ಆಗುವುದಕ್ಕಿಂತ ಮೊದಲು ವೃತ್ತಿಯಲ್ಲಿ ಪೈಲೆಟ್ ಆಗಿ ಇಡೀ ಪ್ರಪಂಚವನ್ನೇ ಸುತ್ತಿದ್ದವರು. ನನ್ನ ದೇಶವೂ ಮುಂದುವರಿದ ರಾಷ್ಟ್ರಗಳಂತೆ ಬೆಳೆಯಬೇಕು ಎನ್ನುವ ದೊಡ್ಡ ಕನಸನ್ನು ಇಟ್ಟುಕೊಂಡು, ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಭಾರತದ ಪ್ರಧಾನಿಯಾಗಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ,” ಎಂದು ಸ್ಮರಿಸಿದರು.

“ಇಂದು ಜನಸಾಮಾನ್ಯರ ಕೈಯಲ್ಲಿ ಇಡೀ ಪ್ರಪಂಚವೇ ಇರುವಂತೆ ಮಾಡಿರುವ ಮೊಬೈಲ್ ಕ್ರಾಂತಿ, ದೂರದರ್ಶನ (ಟೆಲಿವಿಷನ್) ಹಾಗೂ ಕಂಪ್ಯೂಟರ್‌ನಂತಹ ಆಧುನಿಕ ತಂತ್ರಜ್ಞಾನಗಳನ್ನು ದೇಶಕ್ಕೆ ಪರಿಚಯಿಸಿದ ಕೀರ್ತಿ ರಾಜೀವ್ ಗಾಂಧಿಯವರಿಗೆ ಸಲ್ಲುತ್ತದೆ. ಇದರೊಂದಿಗೆ ಗ್ರಾಮೀಣ ಅಭಿವೃದ್ಧಿಗಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದು, ಮೀಸಲಾತಿಯ ಮೂಲಕ ಸಮಾಜದ ಎಲ್ಲಾ ವರ್ಗದ ಜನರಿಗೂ ಅಧಿಕಾರ ಸಿಗುವಂತೆ ಮಾಡಿದ ಧೀಮಂತ ನಾಯಕ ಇಂದಿರಾ ಗಾಂಧಿಯವರ ಪುತ್ರ ರಾಜೀವ್ ಗಾಂಧಿ,” ಎಂದು ಬಣ್ಣಿಸಿದರು.

ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದ ಇಂತಹ ಮಹಾನ್ ನಾಯಕರ ಪುಣ್ಯಸ್ಮರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿಯೂ ಇಂತಹ ದೂರದೃಷ್ಟಿಯುಳ್ಳ ನಾಯಕರು ದೇಶದ ಚುಕ್ಕಾಣಿ ಹಿಡಿಯಲಿ ಎಂದು ನಗರದ ಮಹದೇವಪ್ಪನವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಆರ್. ಪ್ರಸನ್ನ ಕುಮಾರ್, ಕೆಪಿಸಿಸಿ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಹೆಚ್.ಎಸ್. ನಾಗರಾಜ್ ಮತ್ತು ಪತ್ರಕರ್ತರು ಹಾಗೂ ಕೃಷಿಕ ಸಮಾಜದ ನಿರ್ದೇಶಕರಾದ ಡಿ.ಡಿ. ಶಿವಕುಮಾರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಶಿವಮೊಗ್ಗ: ‘ಕ್ರಾಂತಿ ಕಿಡಿ’ ಪತ್ರಿಕೆಯ ಸಂಪಾದಕರು, ಗಣೇಶ್ ಗ್ರಾಫಿಕ್ಸ್ ಪ್ರಿಂಟಿಂಗ್ ಪ್ರೆಸ್‌ನ ಮಾಲೀಕರು ಹಾಗೂ ಹಾಲುಮತ ಮಹಾಸಭಾದ ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿಗಳಾದ ಮುಖಂಡ ಗಣೇಶ್ ಬಿಳಗಿ ಅವರು ನೂತನವಾಗಿ ‘ಶಿವಮೊಗ್ಗ ಜಿಲ್ಲಾ ಮಲೆನಾಡು ಮುದ್ರಕರ ಸಂಘ’ದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.

​ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಕಾರ್ಯಾಧ್ಯಕ್ಷರಾದ ನಗರದ ಮಹದೇವಪ್ಪನವರು, ಶಿವಮೊಗ್ಗ ಜಿಲ್ಲಾ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾದ ಹೆಚ್.ಎಸ್. ನಾಗರಾಜ್, ‘ಕ್ರಾಂತಿಕಿಡಿ’ ಪತ್ರಿಕೆಯ ವರದಿಗಾರರು, ಕೃಷಿಕ ಸಮಾಜದ ನಿರ್ದೇಶಕರು ಹಾಗೂ ಹಾಲುಮತ ಮಹಾಸಭಾದ ಜಿಲ್ಲಾ ಸಂಚಾಲಕರಾದ ಡಿ.ಡಿ. ಶಿವಕುಮಾರ್ ಮತ್ತು ಕುರುಬ ಸಮಾಜದ ಮುಖಂಡರಾದ ದೊಡ್ಡಪ್ಪನವರು ಸೇರಿದಂತೆ ಹಲವು ಗಣ್ಯರು ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಮುದ್ರಕರ ಸಂಘ ಹಾಗೂ ಸಮಾಜಕ್ಕೆ ಇವರಿಂದ ಇನ್ನು ಹೆಚ್ಚಿನ ಸೇವೆ ಲಭಿಸುವಂತಾಗಲಿ ಎಂದು ಶುಭ ಹಾರೈಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಎಸ್‌ಐಆರ್‌ ವಿರುದ್ಧ ಕಾಂಗ್ರೆಸ್ ಅಪಪ್ರಚಾರ: ಮೃತ, ನಕಲಿ ಹಾಗೂ ಅನರ್ಹ ಮತದಾರರ ಹೆಸರು ತೆಗೆಯುವುದು ಅನಿವಾರ್ಯ: ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಆರೋಪಕ್ಕೂ ಮುನ್ನ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ: ಡಾ. ಧನಂಜಯ ಸರ್ಜಿ

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

Leave a Comment