ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಭೀಕರ ಮಳೆಗಾಳಿಗೆ ತುತ್ತಾದ ಅಡಿಕೆ ತೋಟಗಳು: ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೃಷಿಕ ಸಮಾಜದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

On: May 21, 2026 9:14 PM
Follow Us:

ಶಿವಮೊಗ್ಗ: ಇತ್ತೀಚೆಗೆ ಏಪ್ರಿಲ್ 24, 2026 ಹಾಗೂ ಮೇ 17, 2026ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಯಿಂದ ತಾಲ್ಲೂಕಿನ 10ಕ್ಕೂ ಹೆಚ್ಚು ಹಳ್ಳಿಗಳಲ್ಲಿ ನೂರಾರು ಎಕರೆ ಪ್ರದೇಶದಲ್ಲಿದ್ದ ಅಡಿಕೆ ತೋಟಗಳು ಭಾರೀ ಹಾನಿಗೊಳಗಾಗಿವೆ. ಅದರಲ್ಲೂ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಹೋಬಳಿಯ ಸುಮಾರು 32 ಹಳ್ಳಿಗಳನ್ನು ಒಳಗೊಂಡಂತೆ ಒಟ್ಟು 8 ಸಾವಿರ ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ಸಂಪೂರ್ಣವಾಗಿ ನಾಶವಾಗಿವೆ.

ಈ ಭೀಕರ ಹಾನಿಯ ಕುರಿತು ಸಮಗ್ರ ವರದಿ ಸಿದ್ಧಪಡಿಸಿ, ಸಂಕಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರದೇಶ ಕೃಷಿಕ ಸಮಾಜದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ನಷ್ಟದ ತೀವ್ರತೆಯನ್ನು ಪರಿಗಣಿಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ವರದಿ ರವಾನಿಸಿ ಈ ಪ್ರಕೃತಿ ವಿಕೋಪವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಹಾಗೂ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ತಕ್ಷಣ ಗರಿಷ್ಠ ಪರಿಹಾರ ನೀಡುವಂತೆ ನಿಯೋಗವು ಒತ್ತಾಯಿಸಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರದೇಶ ಕೃಷಿಕ ಸಮಾಜದ ಕಾರ್ಯಾಧ್ಯಕ್ಷರಾದ ನಗರದ ಮಹದೇವಪ್ಪ, ಜಿಲ್ಲಾಧ್ಯಕ್ಷರಾದ ಹೆಚ್.ಎಸ್. ನಾಗರಾಜ್, ಶಿವಮೊಗ್ಗ ತಾಲ್ಲೂಕು ಅಧ್ಯಕ್ಷರಾದ ಕ್ಯಾತಿನಕೊಪ್ಪದ ಚಂದ್ರಶೇಖರ್, ಜಿಲ್ಲಾ ನಿರ್ದೇಶಕರಾದ ಲೋಕೇಶ್, ಶಿಕಾರಿಪುರ ನಿರ್ದೇಶಕರಾದ ಡಿ.ಡಿ. ಶಿವಕುಮಾರ್ ಹಾಗೂ ಷಣ್ಮುಖಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಎಸ್‌ಐಆರ್‌ ವಿರುದ್ಧ ಕಾಂಗ್ರೆಸ್ ಅಪಪ್ರಚಾರ: ಮೃತ, ನಕಲಿ ಹಾಗೂ ಅನರ್ಹ ಮತದಾರರ ಹೆಸರು ತೆಗೆಯುವುದು ಅನಿವಾರ್ಯ: ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಆರೋಪಕ್ಕೂ ಮುನ್ನ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ: ಡಾ. ಧನಂಜಯ ಸರ್ಜಿ

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

Leave a Comment