ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪದಗ್ರಹಣ: ಶ್ರೀ ತರಳಬಾಳು ಜಗದ್ಗುರುಗಳ ಆಶೀರ್ವಾದದೊಂದಿಗೆ ಹೊಸ ಅಧ್ಯಾಯದ ಆರಂಭ…!

On: June 3, 2026 8:09 PM
Follow Us:

ಮಾದರಿ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪಗೈಯಿರಿ: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶ್ರೀ ತರಳಬಾಳು ಜಗದ್ಗುರುಗಳ ದಿವ್ಯ ಮಾರ್ಗದರ್ಶನ

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಾದ ಹಾಗೂ ಶುಭ ಹಾರೈಕೆಗಳನ್ನು ಸಲ್ಲಿಸಿದರು.

ಬೆಂಗಳೂರಿನ ಲೋಕಭವನದಲ್ಲಿ ಇಂದು ನಡೆದ ಅಧಿಕಾರ ಸ್ವೀಕಾರ ಹಾಗೂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ತರಳಬಾಳು ಜಗದ್ಗುರುಗಳು ಭಾಗವಹಿಸಿ, ನೂತನ ಮುಖ್ಯಮಂತ್ರಿಗಳಿಗೆ ಶಾಲು ಹೊದಿಸಿ ಫಲಪುಷ್ಪ ನೀಡಿ ಅಭಿನಂದಿಸಿದರು. ಇದೇ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿ, ಜನಪರ ಆಡಳಿತ ಹಾಗೂ ಸಮಾಜದ ಎಲ್ಲ ವರ್ಗಗಳ ಹಿತಾಸಕ್ತಿಯನ್ನು ಕಾಪಾಡುವ ದಿಕ್ಕಿನಲ್ಲಿ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುವಂತೆ ಆಶೀರ್ವಚನ ನೀಡಿದರು.

✨ ಉತ್ತಮ ಹಾಗೂ ಜನಪರ ಆಡಳಿತಕ್ಕೆ ತರಳಬಾಳು ಶ್ರೀಗಳ ಕರೆ

ಕರ್ನಾಟಕದ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಶ್ರೀ ತರಳಬಾಳು ಜಗದ್ಗುರುಗಳು ಆಡಳಿತದ ದಿಕ್ಕಿನ ಬಗ್ಗೆ ಅಮೂಲ್ಯ ಮಾರ್ಗದರ್ಶನ ಮಾಡಿದರು.

“ಅಧಿಕಾರ ಎಂಬುದು ಜನಸೇವೆಯ ಪರಮೋಚ್ಚ ಸಾಧನ. ತಂತ್ರಜ್ಞಾನ, ನವೀನ ಆಲೋಚನೆಗಳು ಹಾಗೂ ಜನಸಹಭಾಗಿತ್ವವನ್ನು ಬಳಸಿಕೊಂಡು ಭ್ರಷ್ಟಾಚಾರ ರಹಿತ, ಪಾರದರ್ಶಕ ಮತ್ತು ಜನಪರ ಆಡಳಿತವನ್ನು ನೀಡುವುದು ಇಂದಿನ ತುರ್ತು ಅಗತ್ಯವಾಗಿದೆ. ಆ ಮೂಲಕ ಕರ್ನಾಟಕವನ್ನು ದೇಶದಲ್ಲೇ ಒಂದು ಮಾದರಿ ರಾಜ್ಯವನ್ನಾಗಿ ನಿರ್ಮಿಸಲು ಸಂಕಲ್ಪ ಮಾಡಿ,” ಎಂದು ಶ್ರೀಗಳು ಹೇಳಿದರು.

ಡಿ.ಕೆ. ಶಿವಕುಮಾರ್ ಅವರು ದೀರ್ಘ ರಾಜಕೀಯ ಅನುಭವ ಹೊಂದಿರುವ ನಾಯಕರು. ಜನಸಾಮಾನ್ಯರೊಂದಿಗೆ ನೇರ ಸಂಪರ್ಕ ಹೊಂದಿರುವ ಅವರು ರಾಜ್ಯದ ಅಭಿವೃದ್ಧಿಗೆ ಹೊಸ ಚೈತನ್ಯ ನೀಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಶ್ರೀ ಜಗದ್ಗುರುಗಳು ಶ್ಲಾಘಿಸಿದರು. ಜನರ ವಿಶ್ವಾಸವನ್ನು ಉಳಿಸಿಕೊಂಡು ಪಾರದರ್ಶಕ, ಪ್ರಾಮಾಣಿಕ ಹಾಗೂ ಸ್ಪಂದನಶೀಲ ಆಡಳಿತ ನೀಡುವ ಮೂಲಕ ರಾಜ್ಯವನ್ನು ಅಭಿವೃದ್ಧಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ಹೇಳಿದರು.

ಸಮಾಜದ ಎಲ್ಲಾ ವರ್ಗಗಳನ್ನು ಜೊತೆಯಲ್ಲಿ ತೆಗೆದುಕೊಂಡು ಸಮಾನತೆ, ಸೌಹಾರ್ದತೆ ಹಾಗೂ ಅಭಿವೃದ್ಧಿಯ ಮಾರ್ಗದಲ್ಲಿ ಸರ್ಕಾರ ಸಾಗಬೇಕು. ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನರ ಬದುಕಿನಲ್ಲಿ ಆಶಾಭರವಸೆಯನ್ನು ಮೂಡಿಸುವ ಆಡಳಿತ ನೀಡುವ ಮೂಲಕ ಕರ್ನಾಟಕವನ್ನು ದೇಶಕ್ಕೇ ಮಾದರಿಯಾಗಿಸುವ ಕಾರ್ಯ ನೂತನ ಮುಖ್ಯಮಂತ್ರಿಗಳಿಂದ ನಡೆಯಲಿ ಎಂದು ಶ್ರೀ ತರಳಬಾಳು ಜಗದ್ಗುರುಗಳು ಹಾರೈಸಿದರು.

K.M.Sathish Gowda

Join WhatsApp

Join Now

Facebook

Join Now

Read more

​ಸಿ.ಎಸ್. ಷಡಾಕ್ಷರಿ ನೇತೃತ್ವದಲ್ಲಿ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ

ಕನಕಪುರದ ಬಂಡೆಗೆ ವಿಧಾನಸೌಧದ ಗದ್ದುಗೆ: ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳ ಹೆಸರಲ್ಲಿ ಡಿ.ಕೆ. ಶಿವಕುಮಾರ್ ಸಾಮ್ರಾಜ್ಯ ಆರಂಭ!

“ರಾಜಕೀಯದಲ್ಲಿ ಧರ್ಮದ ಮೌಲ್ಯಗಳು ನೆಲೆಸಲಿ, ಭ್ರಷ್ಟಾಚಾರ ರಹಿತ ಆಡಳಿತ ರೂಪುಗೊಳ್ಳಲಿ; ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಲಿ”: ಶ್ರೀ ರಂಭಾಪುರಿ ಜಗದ್ಗುರುಗಳ ವಿಶೇಷ ಶುಭ ಹಾರೈಕೆ

​ಆರ್‌ಸಿಬಿ ಕಪ್ ಗೆದ್ದಿತು… ಆದರೆ ನೀವು ಏನನ್ನು ಗೆದ್ದಿರಿ?

​ದಾವಣಗೆರೆ ಜಿಲ್ಲೆಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಿ: ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಡಿಸಿಎಂ ಹಾಗೂ ಡಿ.ಜಿ. ಶಾಂತನಗೌಡ ಅವರಿಗೆ ಸಚಿವ ಸ್ಥಾನ ನೀಡಲು ಸಾಧು ಸದ್ಧರ್ಮ ವೀರಶೈವ ಸಮಾಜದ ಆಗ್ರಹ

ಚಿತ್ರದುರ್ಗದ ರೈತ ಹೋರಾಟಕ್ಕೆ ಹೊಸ ಆಶಾಕಿರಣ: ಎಸಿ ರೂಮ್‌ನಿಂದ ಅಂಗಳಕ್ಕೆ ಬಂದ ಲಕ್ಷ್ಮಣ್ ಹೂಗಾರ್

Leave a Comment