ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಅಂತರರಾಷ್ಟ್ರೀಯ ಸಹಕಾರಿ ದಿನಾಚರಣೆ: ಸಹಕಾರ ಕ್ಷೇತ್ರದ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದು: ಸಂಸದ ಬಿ.ವೈ. ರಾಘವೇಂದ್ರ

On: July 4, 2026 1:37 PM
Follow Us:

ಶಿಕಾರಿಪುರ: ಗ್ರಾಮೀಣ ಆರ್ಥಿಕತೆಯ ಹಾಗೂ ರೈತರ ಬೆನ್ನೆಲುಬಾಗಿ ಹಗಲಿರುಳು ಶ್ರಮಿಸುವ ಸಹಕಾರ ಕ್ಷೇತ್ರದ ಪ್ರತಿಯೊಬ್ಬ ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಸದಸ್ಯರ ಆರೋಗ್ಯ ರಕ್ಷಣೆ ಅತ್ಯಂತ ಪ್ರಮುಖವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

​ಅಂತರರಾಷ್ಟ್ರೀಯ ಸಹಕಾರಿ ದಿನ ಹಾಗೂ ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ 5 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಶಿಕಾರಿಪುರದ ಶಾಂತಿನಗರದ ಬನಸಿರಿ ಸಭಾಂಗಣದಲ್ಲಿ ತಾಲ್ಲೂಕಿನ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ನಿರ್ದೇಶಕರಿಗೆ ಮತ್ತು ಸಿಬ್ಬಂದಿ ವರ್ಗದವರಿಗಾಗಿ ಆಯೋಜಿಸಲಾಗಿದ್ದ “ಒಂದು ದಿನದ ವಿಶೇಷ ಆರೋಗ್ಯ ತಪಾಸಣೆ ಶಿಬಿರ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರಿಗಳ ಆರೋಗ್ಯ ರಕ್ಷಣೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಸದರು, “ದೇಶದ ಮತ್ತು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಸಹಕಾರ ರಂಗದ ಪಾತ್ರ ಹಿರಿದಾದುದು. ಗ್ರಾಮೀಣ ಮಟ್ಟದಲ್ಲಿ ಸಾಮಾನ್ಯ ಜನರಿಗೆ ಮತ್ತು ರೈತಾಪಿ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಸಹಕಾರ ಕ್ಷೇತ್ರದ ಬಲವರ್ಧನೆಗೆ ಶ್ರಮಿಸುತ್ತಿರುವ ನಮ್ಮ ಹೆಮ್ಮೆಯ ಸಿಬ್ಬಂದಿ ವರ್ಗದವರು ತಮ್ಮ ದೈನಂದಿನ ಕಾರ್ಯದೊತ್ತಡದ ನಡುವೆಯೂ ಆರೋಗ್ಯದ ಕಡೆಗೆ ಗಮನ ಹರಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಉಚಿತ ತಪಾಸಣೆ ಹಾಗೂ ಸೂಕ್ತ ಆರೋಗ್ಯದ ಮಾಹಿತಿ ಒದಗಿಸುತ್ತಿರುವ ಈ ಶಿಬಿರವು ಅತ್ಯಂತ ಶ್ಲಾಘನೀಯವಾಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಸಹಕಾರ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಮತ್ತು ಸುಖಿ ಜೀವನ ಲಭಿಸಲಿ” ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

​ಶಿಬಿರದಲ್ಲಿ ತಾಲ್ಲೂಕಿನ ನೂರಾರು ಸಹಕಾರ ಸಂಘಗಳ ಪದಾಧಿಕಾರಿಗಳು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡು ಉಚಿತ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಪಡೆದುಕೊಂಡರು. ತಜ್ಞ ವೈದ್ಯರ ತಂಡದಿಂದ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ, ಸೂಕ್ತ ಸಲಹೆ ಹಾಗೂ ಆರೋಗ್ಯ ಜಾಗೃತಿಯ ಮಾಹಿತಿಯನ್ನು ನೀಡಲಾಯಿತು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. (ಬೆಂಗಳೂರು), ಬಸವೇಶ್ವರ ಸಹಕಾರಿ ಒಕ್ಕೂಟ (ಶಿಕಾರಿಪುರ), ತಾಲ್ಲೂಕು ಸಹಕಾರ ಭಾರತಿ (ಶಿಕಾರಿಪುರ), ಸಹಕಾರ ಇಲಾಖೆ (ಶಿವಮೊಗ್ಗ) ಮತ್ತು ಉಪವಿಭಾಗ (ಸಾಗರ) ಹಾಗೂ ಶಿಕಾರಿಪುರ ತಾಲ್ಲೂಕಿನ ವಿವಿಧ ಎಲ್ಲಾ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಸಹಕಾರ ಸಂಘಗಳ ಪ್ರಮುಖರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಹಕಾರ ಪ್ರಮುಖರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment