ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮತದಾರರ ಪಟ್ಟಿ ಪರಿಷ್ಕರಣೆ ದುರ್ಬಳಕೆ: ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗದಿಂದ ದೂರು

On: July 4, 2026 8:03 PM
Follow Us:

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ತೀವ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಆಗುತ್ತಿರುವ ವ್ಯಾಪಕ ಅವ್ಯವಸ್ಥೆಗಳನ್ನು ತಕ್ಷಣವೇ ಸರಿಪಡಿಸಬೇಕು ಮತ್ತು ನಿಯಮಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಬಿಜೆಪಿ ಉನ್ನತ ಮಟ್ಟದ ನಿಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ ಅಧಿಕೃತವಾಗಿ ದೂರು ಸಲ್ಲಿಸಿದೆ.

​ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ ಅವರು, ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದಾಗಿ ಇಡೀ ಚುನಾವಣಾ ವ್ಯವಸ್ಥೆಯೇ ಹಳಿತಪ್ಪುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

​ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಮನೆಗೆ ಭೇಟಿ ನೀಡಿ ಎನ್ಯೂಮರೇಷನ್ ಫಾರಂಗಳನ್ನು (ನಮೂನೆಗಳನ್ನು) ವಿತರಿಸಬೇಕು. ಆದರೆ, ರಾಜ್ಯದಲ್ಲಿ ಈ ನಿಯಮವನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದೆ ಎಂದು ವಿಜಯೇಂದ್ರ ದೂರಿದರು.

​”ಬಿಎಲ್‌ಒಗಳು ಮನೆಮನೆಗೆ ಹೋಗುವ ಬದಲು ಕಲ್ಯಾಣ ಮಂಟಪಗಳು, ಚೌಲ್ಟ್ರಿಗಳು ಹಾಗೂ ಮಸೀದಿಗಳಲ್ಲಿ ಕುಳಿತು ನಮೂನೆಗಳನ್ನು ಹಂಚುತ್ತಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ಆಡಳಿತ ಪಕ್ಷದ ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಅವರನ್ನು ತಮ್ಮ ವೈಯಕ್ತಿಕ ಕಚೇರಿಗಳಲ್ಲೇ ಕೂರಿಸಿಕೊಂಡು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಈ ಎಲ್ಲ ಅಕ್ರಮಗಳನ್ನು ನಾವು ಚುನಾವಣಾ ಆಯುಕ್ತರ ಗಮನಕ್ಕೆ ತಂದಿದ್ದೇವೆ” ಎಂದು ಅವರು ತಿಳಿಸಿದರು.

​ಅಧಿಕಾರಿಗಳ ಮೇಲೆ ರಾಜಕೀಯ ಒತ್ತಡ ಹೇರುತ್ತಿರುವ ಸರ್ಕಾರದ ನಡೆಗೆ ಆಯೋಗವು ಕಡಕ್ ಎಚ್ಚರಿಕೆ ನೀಡಬೇಕು ಮತ್ತು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪದೋಷಗಳಾಗಿರುವ ಕ್ಷೇತ್ರಗಳಲ್ಲಿ ತಕ್ಷಣವೇ ಹೊಸದಾಗಿ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

​ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆಗೆ ಸಮಾನಾಂತರವಾಗಿ ಬಿಬಿಎಂಪಿ (ಜಿಬಿಎ) ವ್ಯಾಪ್ತಿಯಲ್ಲಿ ರಾಜ್ಯ ಚುನಾವಣಾ ಆಯೋಗದಿಂದಲೂ ಎಸ್‌ಐಆರ್ ನಡೆಸಲಾಗುತ್ತಿರುವುದನ್ನು ಉಲ್ಲೇಖಿಸಿದ ಅವರು, ಇದರಿಂದ ಮತದಾರರಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದೆ ಎಂದರು.

​ಅಷ್ಟೇ ಅಲ್ಲದೆ, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಹಂಚಲಾಗುತ್ತಿರುವ ನಮೂನೆಗಳಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಭಾವಚಿತ್ರಗಳನ್ನು ಮುದ್ರಿಸಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಮೂಲಕ ಸರ್ಕಾರವು ಎಸ್‌ಐಆರ್‌ನ ಮೂಲ ಉದ್ದೇಶವನ್ನೇ ಹಾಳುಗೆಡವಿದೆ ಎಂದು ಅವರು ಆಪಾದಿಸಿದರು. ಈ ಹಿಂದೆ ಆಯೋಗವು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸರಿಯಾಗಿ ಕೆಲಸ ನಿರ್ವಹಿಸುವಂತೆ ತಾಕೀತು ಮಾಡಿದ್ದರೂ, ಸ್ಥಳೀಯ ಮಟ್ಟದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಆದರೆ, ಪ್ರಸ್ತುತ ನೀಡಿರುವ ದೂರಿಗೆ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಲೋಪಗಳನ್ನು ಸರಿಪಡಿಸುವ ಭರವಸೆ ನೀಡಿದೆ ಎಂದು ವಿಜಯೇಂದ್ರ ಆಶಾವಾದ ವ್ಯಕ್ತಪಡಿಸಿದರು.

​ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ವಿಜಯೇಂದ್ರ, “ಇಡೀ ಚುನಾವಣಾ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ. ಅವರ ಬೇಜವಾಬ್ದಾರಿತನದಿಂದಾಗಿ ವ್ಯವಸ್ಥೆ ಕಲುಷಿತಗೊಂಡಿದೆ. ಬೂತ್ ಮಟ್ಟದ ಏಜೆಂಟರ (ಬಿಎಲ್‌ಎ) ಗಮನಕ್ಕೆ ಬಾರದಂತೆ ಬಿಎಲ್‌ಒಗಳನ್ನು ಶಾಸಕರ ಕಚೇರಿಯಲ್ಲಿ ಕೂರಿಸಲಾಗುತ್ತಿದೆ. ಇನ್ನು ಕೆಲವು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಧಿಕಾರಿಗಳಿಂದ ನಮೂನೆಗಳನ್ನು ಬಲವಂತವಾಗಿ ಕಸಿದುಕೊಂಡು ತಾವೇ ಹಂಚುತ್ತಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

​ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ ಮಾತನಾಡಿ, ಜಯನಗರ ಕ್ಷೇತ್ರದಲ್ಲಿ ನಡೆದಿರುವ ಎಸ್‌ಐಆರ್ ಅಕ್ರಮಗಳ ಕುರಿತು ಈಗಾಗಲೇ ಚುನಾವಣಾ ಆಯೋಗ ಹಾಗೂ ಜಿಬಿಎ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದರು.

  • ​ಬಿಎಲ್‌ಒಗಳು ನಿಯಮಬಾಹಿರವಾಗಿ ತಮಗೆ ಇಷ್ಟಬಂದ ಕಡೆ ಅರ್ಜಿಗಳನ್ನು ಹಂಚುತ್ತಿದ್ದಾರೆ.
  • ​ಕರ್ತವ್ಯಲೋಪ ಎಸಗಿರುವ ಮತ್ತು ರಾಜಕೀಯ ಪ್ರೇರಿತರಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಬೇಕು.
  • ​ಅಕ್ರಮ ನಡೆದಿರುವ ಎಲ್ಲಾ ಬೂತ್‌ಗಳಲ್ಲಿ ಮರು-ಪರಿಷ್ಕರಣೆ ನಡೆಸಬೇಕು.

ನಿಯೋಗದಲ್ಲಿದ್ದ ಪ್ರಮುಖರು

ಈ ಸಂದರ್ಭದಲ್ಲಿ ಶಾಸಕ ಹಾಗೂ ಹಿರಿಯ ನಾಯಕ ಎಸ್. ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಅಂತರರಾಷ್ಟ್ರೀಯ ಸಹಕಾರಿ ದಿನಾಚರಣೆ: ಸಹಕಾರ ಕ್ಷೇತ್ರದ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಂತ ಮಹತ್ವದ್ದು: ಸಂಸದ ಬಿ.ವೈ. ರಾಘವೇಂದ್ರ

ರಾಜಕೀಯ ನಾಯಕರಿಗೆ ನಡುಕ: 30 ದಿನ ಜೈಲಿನಲ್ಲಿದ್ದರೆ ಮುಖ್ಯಮಂತ್ರಿ, ಸಚಿವರ ಹುದ್ದೆ ಸ್ವಯಂಚಾಲಿತ ರದ್ದು? ಮುಂಗಾರು ಕಲಾಪದಲ್ಲಿ 130ನೇ ತಿದ್ದುಪಡಿ ಅಸ್ತ್ರ!

ಜರ್ಮನಿ ಪ್ರವಾಸದಲ್ಲಿದ್ದೂ ಉಗಾಂಡಾದ ಭಕ್ತರ ಕಣ್ಣೀರು ಒರೆಸಿದ ಶ್ರೀ ತರಳಬಾಳು ಜಗದ್ಗುರುಗಳು; “ಮಗಳ ಕೊನೆ ಮುಖ ನೋಡಬೇಕೆಂಬ” ತಾಯಿಯ ಆಕ್ರಂದನಕ್ಕೆ ತಕ್ಷಣವೇ ಸ್ಪಂದಿಸಿದ ಕರುಣಾಮಯಿ ಜಗದ್ಗುರುಗಳು

ಸಾವಿನ ಬಲೆ ಹೆಣೆಯುತ್ತಿರುವ ಕೇಬಲ್‌ಗಳು: ವಿದ್ಯುತ್ ಇಲಾಖೆ–ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಕೋಟೆ ರಸ್ತೆಯಲ್ಲಿ ಹಸು ಬಲಿ; ನಗರದ ವಿದ್ಯುತ್ ಕಂಬಗಳಲ್ಲೇ ಸಾಕ್ಷಾತ್ ಯಮನ ದರ್ಶನ!

ಸಮಾಜಮುಖಿ ಸೇವೆಯಲ್ಲಿ ಶಿವಮೊಗ್ಗ ಸರ್ವೋದಯ ಮಂಡಳಿ ರಾಜ್ಯಕ್ಕೆ ಮಾದರಿ: ಡಾ. ಎಚ್.ಎಸ್. ಸುರೇಶ್

​ವಿದ್ಯೆಯ ಜೊತೆಗೆ ಸಂಸ್ಕಾರಯುತ ಶಿಕ್ಷಣ ಇಂದಿನ ತುರ್ತು ಅಗತ್ಯ; ಸಿದ್ಧಗಂಗಾ ಶ್ರೀಗಳ ದಾಸೋಹ ಪರಂಪರೆಯೇ ನಮಗೆ ಪ್ರೇರಣೆ: ಸಿ.ಎಸ್. ಷಡಾಕ್ಷರಿ

Leave a Comment