ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಾಸಕರ ಮೇಲೆಯೇ ಹಲ್ಲೆಗೆ ಇಳಿದ ‘ಕೊತ್ವಾಲ್ ಶಿಷ್ಯರು’; ​ಕಾಂಗ್ರೆಸ್‌ನದ್ದು ‘ನಾಲಾಯಕ್ ಸರ್ಕಾರ’, ರಾಜ್ಯದಲ್ಲಿ ಗೂಂಡಾ ದರ್ಬಾರ್: ಬಿ.ವೈ. ವಿಜಯೇಂದ್ರ ಆಕ್ರೋಶ!

On: July 23, 2026 3:16 PM
Follow Us:

ಬೆಂಗಳೂರು: ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆಗೆ ತೆರಳಿದ್ದ ಬಿಜೆಪಿ ಶಾಸಕರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಶಾಸಕರ ಮೇಲೆಯೇ ಹಲ್ಲೆ ನಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ” ಎಂದು ಆರೋಪಿಸಿದರು.

ಬಿಜೆಪಿ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಆಯೋಜಿಸಿದ್ದ ಪ್ರತಿಭಟನೆ ಹಾಗೂ ಧರಣಿಯಲ್ಲಿ ಮಾತನಾಡಿದ ಅವರು, “ನೀಟ್ ಪರೀಕ್ಷೆ ವಿಷಯದಲ್ಲಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧವಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಈಗಾಗಲೇ ಸ್ಪಷ್ಟಪಡಿಸಿದ್ದರೂ, ಕಾಂಗ್ರೆಸ್ ಪಕ್ಷ ಜನರ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಬದಲು ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳು ಮತ್ತು ಯುವಕರನ್ನು ಬೀದಿಗಿಳಿಸುವ ಪ್ರಯತ್ನ ನಡೆಸುತ್ತಿದೆ” ಎಂದು ಟೀಕಿಸಿದರು.

ಶಾಸಕರ ಮೇಲಿನ ಹಲ್ಲೆ ಖಂಡನೀಯ; ವಿರೋಧ ಪಕ್ಷದ ಧ್ವನಿ ಹತ್ತಿಕ್ಕುವ ಪ್ರಯತ್ನ: ಬಿ.ವೈ. ವಿಜಯೇಂದ್ರ

ಪ್ರಜಾಪ್ರಭುತ್ವ ಮತ್ತು ಕಾಂಗ್ರೆಸ್‌ ನಡವಳಿಕೆ
“ಪ್ರಜಾಪ್ರಭುತ್ವದಲ್ಲಿ ಚರ್ಚೆ ಮತ್ತು ಸಂವಾದವೇ ಸಮಸ್ಯೆಗಳಿಗೆ ಪರಿಹಾರ. ಆದರೆ ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಚರ್ಚೆಗೆ ಬರುವ ಬದಲು ದೇಶದಲ್ಲಿ ಗೊಂದಲ ಮತ್ತು ಅರಾಜಕತೆ ಸೃಷ್ಟಿಸಲು ಸಂಚು ರೂಪಿಸುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಇಂತಹ ಪ್ರಯತ್ನಗಳನ್ನು ದೇಶದ ಜನರು ಎಂದಿಗೂ ಒಪ್ಪುವುದಿಲ್ಲ” ಎಂದು ಹೇಳಿದರು.
ಶಾಸಕರ ಮೇಲಿನ ಹಲ್ಲೆ ಹಾಗೂ ಆಡಳಿತ ವೈಫಲ್ಯ
ನಿನ್ನೆ ಬಿಜೆಪಿ ಶಾಸಕರ ಮೇಲೆ ನಡೆದ ಹಲ್ಲೆಯನ್ನು ಉಲ್ಲೇಖಿಸಿದ ವಿಜಯೇಂದ್ರ, “ಜನಪ್ರತಿನಿಧಿಗಳ ಮೇಲೆಯೇ ಹಲ್ಲೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಖಂಡನೀಯ. ಇದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಬಯಲಿಗೆಳೆದಿದೆ. ಜನರ ರಕ್ಷಣೆ ಮಾಡಬೇಕಾದ ಸರ್ಕಾರವೇ ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದರು.
ಹಿಂಬಾಗಿಲಿನ ರಾಜಕೀಯ ಹಾಗೂ ಗೊಂದಲ ಸೃಷ್ಟಿ
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ಹಿಂಬಾಗಿಲಿನಿಂದ ಅಧಿಕಾರ ಪಡೆಯುವ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಗೊಂದಲ, ಪ್ರತಿಭಟನೆ ಹಾಗೂ ಅರಾಜಕತೆ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ. ಆದರೆ ಇಂತಹ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ” ಎಂದು ಹೇಳಿದರು.

ಕೊತ್ವಾಲ್ ರಾಮಚಂದ್ರನ ಗೂಂಡಾ ಸಂಸ್ಕೃತಿಯ ಮರುಜೀವ!

ಕಾನೂನು ಸುವ್ಯವಸ್ಥೆ ಕುಸಿತ & ಗೂಂಡಾಗಿರಿ ಆರೋಪ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದುಬಿದ್ದಿದ್ದು, ಕಾಂಗ್ರೆಸ್‌ನ ನಾಯಕರು ಗೂಂಡಾ ಸಂಸ್ಕೃತಿಯನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡರು ಶಾಪಹಾಕಿದರು.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪ್ರಸಿದ್ಧ ರೌಡಿ ಕೊತ್ವಾಲ್ ರಾಮಚಂದ್ರನ ಶಿಷ್ಯರಂತೆ ವರ್ತಿಸುತ್ತಾ, ರಾಜ್ಯದಲ್ಲಿ ಗೂಂಡಾಗಿರಿಯನ್ನು ಮರುಸ್ಥಾಪಿಸಲು ಯತ್ನಿಸುತ್ತಿದ್ದಾರೆ ಎಂದು ಕಟುವಾಗಿ ಆರೋಪಿಸಿದರು.
ಜಂಟಿ ನಾಯಕತ್ವದ ಧರಣಿ ಪ್ರತಿಭಟನೆ
ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಜಂಟಿ ನೇತೃತ್ವದಲ್ಲಿ ನಡೆದ ಈ ಧರಣಿಯಲ್ಲಿ, ಕಾಂಗ್ರೆಸ್ ಸರ್ಕಾರದ ಈ ಪುಂಡಾಟಿಕೆಯನ್ನು ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವ ವಿರೋಧಿ ಎಂದರು.
ಭವಿಷ್ಯದ ಹೋರಾಟದ ಎಚ್ಚರಿಕೆ
ವಿಧಾನಸೌಧದ ಅಂಗಳದಲ್ಲಿ ನಡೆದ ಈ ಪ್ರತಿಭಟನಾ ಧರಣಿಯಲ್ಲಿ ಬಿಜೆಪಿಯ ಹಲವಾರು ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಮಟ್ಟದ ಪ್ರಮುಖ ಮುಖಂಡರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇಂತಹ ಗೂಂಡಾ ವರ್ತನೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ, ಕಾಂಗ್ರೆಸ್‌ನ ಈ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಯ ವಿರುದ್ಧ ಬೀದಿಗಿಳಿದು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment