ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗದ ಮಾಜಿ ಶಾಸಕ, ಕರ್ನಾಟಕ ಮಾಜಿ ಶಾಸಕರ ವೇದಿಕೆ ರಾಜ್ಯಾಧ್ಯಕ್ಷರಾದ ಹೆಚ್.ಎಂ. ಚಂದ್ರಶೇಖರಪ್ಪ ನಿಧನ

On: July 26, 2026 8:29 PM
Follow Us:

ಶಿವಮೊಗ್ಗ / ಬೆಂಗಳೂರು: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರು, ಕರ್ನಾಟಕ ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಇಂದು ಸಂಜೆ 6:15ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

​ಕಳೆದ ಕೆಲವು ದಿನಗಳಿಂದ ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೃತರು ಇಬ್ಬರು ಪುತ್ರರಾದ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್ ಹಾಗೂ ಹೆಚ್.ಸಿ. ಶರಣ್ ಸೇರಿದಂತೆ ಅಪಾರ ಬಂಧು-ಬಳಗ, ಬೆಂಬಲಿಗರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. (ಅವರ ಪತ್ನಿ ಶ್ರೀಮತಿ ಶಾರದಾ ಅವರು ಈಗಾಗಲೇ ದೈವಾಧೀನರಾಗಿದ್ದಾರೆ.)

​ಮೃತರ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ನಾಳೆ ಬೆಳಿಗ್ಗೆ 9:30 ಗಂಟೆಯಿಂದ ಬಸವನಗುಡಿ ಮುಖ್ಯ ರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಸಂಜೆ 4:00 ಗಂಟೆಗೆ ಶಿವಮೊಗ್ಗ ಸಮೀಪದ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ ಲಿಂಗಾಯತ ಸಮಾಜದ ಧಾರ್ಮಿಕ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಶಿವಮೊಗ್ಗ ಅಭಿವೃದ್ಧಿಯ ಹರಿಕಾರ ‘ಹೆಚ್‌.ಎಂ.ಸಿ’

ಶಿವಮೊಗ್ಗ ರಾಜಕಾರಣದಲ್ಲಿ ‘ಹೆಚ್.ಎಂ.ಸಿ’ ಎಂದೇ ಜನಪ್ರಿಯರಾಗಿದ್ದ ಹೆಚ್.ಎಂ. ಚಂದ್ರಶೇಖರಪ್ಪನವರು, ತಮ್ಮ ಸರಳತೆ, ದಕ್ಷತೆ ಮತ್ತು ಜನಪರ ಕಾಳಜಿಯಿಂದ ಗುರುತಿಸಿಕೊಂಡವರು.

ರಾಜಕೀಯ ರಂಗದಲ್ಲಿ ಸಾಧನೆ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಯಶಸ್ವಿ ಸೇವೆ ಸಲ್ಲಿಸಿದ್ದ ಅವರು, 1999ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಅಭಿವೃದ್ಧಿ ಕಾರ್ಯಗಳು: ತಮ್ಮ ಶಾಸಕಾವಧಿಯಲ್ಲಿ ಶಿವಮೊಗ್ಗ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದರು. ಮುಖ್ಯವಾಗಿ ಬಡವರಿಗಾಗಿ ‘ಬೊಮ್ಮನಕಟ್ಟೆ ಆಶ್ರಯ ಬಡಾವಣೆ’ ನಿರ್ಮಾಣ ಹಾಗೂ ಶಿವಮೊಗ್ಗದ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ‘ಗಾಜನೂರು ತುಂಗಾ ಜಲಾಶಯ’ (ಡ್ಯಾಂ) ನವೀಕರಣ/ಹೊಸ ನಿರ್ಮಾಣ ಯೋಜನೆಗಳು ಇವರ ಪ್ರಮುಖ ಸಾಧನೆಗಳಲ್ಲಿ ಒಂದಾಗಿವೆ.

​ರಾಜಕೀಯ ಮಾತ್ರವಲ್ಲದೆ ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಹೆಚ್.ಎಂ.ಸಿ ಅವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿ ಸಮಾಜದ ಏಳಿಗೆಗೆ ಶ್ರಮಿಸಿದ್ದರು. ಪ್ರಸ್ತುತ ಅವರು ಕರ್ನಾಟಕ ಮಾಜಿ ಶಾಸಕರ ವೇದಿಕೆಯ ರಾಜ್ಯಾಧ್ಯಕ್ಷರಾಗಿ ಮಾಜಿ ಶಾಸಕರ ಹಕ್ಕುಗಳು ಮತ್ತು ಕ್ಷೇಮಾಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದರು.

​ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲೆಯ ಪ್ರಮುಖ ರಾಜಕೀಯ ನಾಯಕರು, ಸಮಾಜದ ಗಣ್ಯರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment