ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​ತಮಿಳುನಾಡು ಪರ ಸಿಎಂ, ರೈತರಿಗೆ ದ್ರೋಹ: ಜು.31ಕ್ಕೆ ಮಂಡ್ಯದಲ್ಲಿ ಬೃಹತ್ ಹೋರಾಟಕ್ಕೆ ಬಿ.ವೈ. ವಿಜಯೇಂದ್ರ ಕರೆ

On: July 29, 2026 2:07 PM
Follow Us:

ಶಿವಮೊಗ್ಗ: ರಾಜ್ಯದ ರೈತರ ಹಿತ ಕಾಯಬೇಕಾದ ಮುಖ್ಯಮಂತ್ರಿಗಳು ತಮಿಳುನಾಡಿನ ಪರವಾಗಿ ಕೆಲಸ ಮಾಡುತ್ತಿರುವಂತೆ ಭಾಸವಾಗುತ್ತಿದೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ರೈತವಿರೋಧಿ ಧೋರಣೆಯನ್ನು ಖಂಡಿಸಿ ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಹೋರಾಟ ರೂಪಿಸಲಾಗುವುದು, ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಇಂದು ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಗುರುಪೂರ್ಣಿಮೆಯ ಶುಭಾಶಯ ಕೋರಿದರು. ಬಳಿಕ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ನಿರ್ಧಾರವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾವೇರಿ ಕೊಳ್ಳದ ರೈತರ ಪರವಾಗಿ ಬಿಜೆಪಿ ದೃಢವಾಗಿ ನಿಲ್ಲಲಿದೆ. ಹೋರಾಟದ ಸ್ವರೂಪವನ್ನು ನಮ್ಮ ಹಿರಿಯ ನಾಯಕರು ಸಭೆ ನಡೆಸಿ ಅಂತಿಮಗೊಳಿಸಲಿದ್ದಾರೆ. ಇತ್ತೀಚೆಗೆ ‘ರೈತರು ಬಿತ್ತನೆ ಮಾಡಬೇಡಿ’ ಎಂದು ಮುಖ್ಯಮಂತ್ರಿಗಳು ನೀಡಿದ್ದ ಹೇಳಿಕೆ ಅತ್ಯಂತ ವಿಷಾದಕರ. ರೈತರಲ್ಲಿ ಆತ್ಮಸ್ಥೈರ್ಯ ತುಂಬಬೇಕಾದ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳೇ ಅವರ ಧೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ, ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸದ್ಯ ಜಲಾಶಯದಲ್ಲಿ 17.39 ಟಿಎಂಸಿ ನೀರಿದ್ದು, ಅದರಲ್ಲಿ 5 ಟಿಎಂಸಿ ನೀರನ್ನು ‘ಡೆಡ್ ಸ್ಟೋರೇಜ್’ ಆಗಿ ಕಾಯ್ದಿರಿಸಲೇಬೇಕಾಗುತ್ತದೆ. ಉಳಿದಿರುವ ಕೇವಲ 13 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಿದರೆ ನಮ್ಮ ಭಾಗದ ರೈತರ ಮತ್ತು ಕುಡಿಯುವ ನೀರಿನ ಪರಿಸ್ಥಿತಿ ಏನಾಗಬೇಕು? ಎಂದು ಪ್ರಶ್ನಿಸಿದ ವಿಜಯೇಂದ್ರ, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮುಂದೆ ಸರ್ಕಾರ ತಕ್ಷಣವೇ ಮರುಅರ್ಜಿ ಸಲ್ಲಿಸಿ, ಸಮರ್ಥವಾಗಿ ವಾದ ಮಂಡಿಸಬೇಕು, ಎಂದು ಆಗ್ರಹಿಸಿದರು.

ಸಂಪುಟ ವಿಸ್ತರಣೆ ಮತ್ತು ರಾಜಕೀಯ ಚರ್ಚೆಗಳಿಗಾಗಿ ಪದೇಪದೇ ದೆಹಲಿಗೆ ತೆರಳುವ ಡಿ.ಕೆ. ಶಿವಕುಮಾರ್ ಅವರು, ಈ ಸೂಕ್ಷ್ಮ ವಿಚಾರದಲ್ಲಿ ಕಾನೂನು ತಜ್ಞರು ಹಾಗೂ ವಕೀಲರೊಂದಿಗೆ ಏಕೆ ಸಮಾಲೋಚನೆ ನಡೆಸುತ್ತಿಲ್ಲ? ಕಾವೇರಿ ಕೊಳ್ಳದ ರೈತರಿಗೆ ದ್ರೋಹ ಬಗೆಯುವುದನ್ನು ತಕ್ಷಣ ನಿಲ್ಲಿಸಬೇಕು, ಎಂದು ಎಚ್ಚರಿಸಿದರು.

ಬೆಂಗಳೂರಿನ ವೈದ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಟಿ. ನಾಗೇಂದ್ರಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಬಿ.ವೈ. ವಿಜಯೇಂದ್ರ ಕಟುವಾಗಿ ವಿರೋಧಿಸಿದರು. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ವಿರುದ್ಧ ದನಿ ಎತ್ತಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿರುವುದು ದೇಶದ್ರೋಹದ ಕೆಲಸಕ್ಕೆ ಸಮ. ಸರ್ಕಾರ ಯಾರನ್ನು ಓಲೈಸಲು ಈ ರೀತಿಯ ಕೀಳುಮಟ್ಟದ ನಿರ್ಧಾರಕ್ಕೆ ಕೈಹಾಕಿದೆ? ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಓಲೈಕೆಗಾಗಿ ಹೋರಾಟಗಾರರನ್ನು ಮತ್ತು ಸತ್ಯ ಹೇಳುವವರನ್ನು ದಮನ ಮಾಡುವ ಕೆಲಸ ಮಾಡುತ್ತಿದೆ. ಸರ್ಕಾರದ ಈ ನಡೆಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ, ಎಂದರು.

ಸಿಇಟಿ ಪರೀಕ್ಷೆ ಹಾಗೂ ಮುಲ್ಲಾ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, “ಎಂಎಲ್‌ಸಿ ಸಿ.ಟಿ. ರವಿ ಅವರು ಯಾವ ಸಂದರ್ಭ ಮತ್ತು ಅರ್ಥದಲ್ಲಿ ಮಾತನಾಡಿದ್ದಾರೆ ಎಂಬುದನ್ನು ಗಮನಿಸಬೇಕು. ಸಚಿವ ಪ್ರಿಯಾಂಕ್ ಖರ್ಗೆ ಅವರು ತಾವೇ ಗೃಹಮಂತ್ರಿ ಎನ್ನುವಂತೆ ವರ್ತಿಸುತ್ತಿದ್ದು, ತಮ್ಮ ಇಲಾಖೆಯ ಆದ್ಯತೆಗಳು ಏನೆಂಬುದನ್ನೇ ಮರೆತಂತಿದೆ. ಗೃಹ ಇಲಾಖೆಯ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದನ್ನು ಬಿಟ್ಟು ಬಿಜೆಪಿ ನಾಯಕರಿಗೆ ಬೆದರಿಕೆ ಹಾಕುವುದು ಸರಿಯಲ್ಲ,” ಎಂದು ತಿರುಗೇಟು ನೀಡಿದರು.

ಮಾಇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ವಿಚಾರವನ್ನು ಪ್ರಸ್ತಾಪಿಸಿದ ವಿಜಯೇಂದ್ರ, “2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 80 ಸ್ಥಾನಗಳನ್ನು ಗೆಲ್ಲುವ ಆಶಯವನ್ನು ಕಾಂಗ್ರೆಸ್ ಹೊಂದಿತ್ತು. ಆದರೆ, ಸಿದ್ಧರಾಮಯ್ಯನವರ ನಿವೃತ್ತಿ ನಿರ್ಧಾರ ಹಾಗೂ ಸರ್ಕಾರದ ವಿಫಲ ನೀತಿಗಳಿಂದಾಗಿ ಕಾಂಗ್ರೆಸ್ ಬಲ ಮುಂಬರುವ ಚುನಾವಣೆಯಲ್ಲಿ 50 ಸ್ಥಾನಗಳಿಗೆ ಇಳಿಯುವುದು ನಿಶ್ಚಿತ,” ಎಂದು ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment