ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ನೀಟ್ ಅಕ್ರಮಕ್ಕೆ ಬಲಿಯಾಯ್ತು ಬಡ ರೈತನ ಡಾಕ್ಟರ್ ಆಗುವ ಕನಸು: ಕೇಂದ್ರ ಸರ್ಕಾರದ ಬೇಜವಾಬ್ದಾರಿಗೆ ಶಿಕಾರಿಪುರದ ಪ್ರತಿಭಾವಂತ ವಿದ್ಯಾರ್ಥಿ ಬಲಿ!

On: August 5, 2026 3:45 PM
Follow Us:

ಶಿಕಾರಿಪುರ: ಕೇಂದ್ರ ಸರ್ಕಾರದ ಅಡಿಯಲ್ಲಿ ನಡೆಯುವ ನೀಟ್ (NEET) ಪರೀಕ್ಷೆಯ ಸಾಲು ಸಾಲು ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ಸಂಪೂರ್ಣ ವೈಫಲ್ಯಕ್ಕೆ ರಾಜ್ಯದ ಮತ್ತೊಬ್ಬ ಪ್ರತಿಭಾವಂತ ವಿದ್ಯಾರ್ಥಿ ಬಲಿಯಾಗಿದ್ದಾನೆ. ಡಾಕ್ಟರ್ ಆಗಿ ಸಮಾಜ ಸೇವೆ ಮಾಡುವ ಕನಸು ಕಂಡಿದ್ದ ಬಡ ರೈತನ ಮಗ, ನೀಟ್ ಪರೀಕ್ಷೆಯ ಗೊಂದಲ ಮತ್ತು ಮರುಪರೀಕ್ಷೆಯ ಆಘಾತ ತಾಳಲಾರದೆ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ವಿನಾಯಕ ನಗರದಲ್ಲಿ ನಡೆದಿದೆ.

​ಶಿಕಾರಿಪುರ ಟೌನ್ ವಿನಾಯಕ ನಗರದ ನಿವಾಸಿ, ಕೇವಲ ಒಂದು ಎಕರೆ ಜಮೀನು ಹೊಂದಿರುವ ಸಾಮಾನ್ಯ ಬಡ ರೈತ ಡಿ.ಎಚ್. ಹಾಲೇಶಪ್ಪ ಎಂಬುವರ ಹಿರಿಯ ಮಗ ಝೇಂಕಾರ ಮೂರ್ತಿ ಡಿ.ಎಚ್. ಈ ದುರಂತಕ್ಕೆ ಬಲಿಯಾದ ದುರದೃಷ್ಟಕರ ವಿದ್ಯಾರ್ಥಿ.

​ಸಾಕಷ್ಟು ಕಷ್ಟಪಟ್ಟು ಲಕ್ಷಾಂತರ ರೂಪಾಯಿ ಸಾಲ ಮಾಡಿ ಮಗನನ್ನು ಓದಿಸಿದ್ದ ತಂದೆಯ ಕನಸಿಗೆ ನೀಟ್ ಅಕ್ರಮ ಕೊಳ್ಳಿ ಇಟ್ಟಿದೆ. ಕಳೆದ ಮೇ 3, 2026 ರಂದು ನಡೆದ ನೀಟ್ ಪರೀಕ್ಷೆಯನ್ನು ಝೇಂಕಾರ ಮೂರ್ತಿ ಅತ್ಯಂತ ಉತ್ಸಾಹದಿಂದ ಬರೆದಿದ್ದನು. ಆದರೆ, ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ, ತದನಂತರ ಮರುಪರೀಕ್ಷೆ ಘೋಷಣೆಯಾಯಿತು. ಹಗಲಿರುಳು ಕಷ್ಟಪಟ್ಟು ಓದಿದ್ದ ಪರೀಕ್ಷೆ ರದ್ದಾಗಿ, ಮತ್ತೆ ಪರೀಕ್ಷೆ ಎದುರಿಸಬೇಕಾದ ಮಾನಸಿಕ ಒತ್ತಡ ಹಾಗೂ ವ್ಯವಸ್ಥೆಯ ಮೇಲಿನ ಭ್ರಮನಿರಸನದಿಂದ ನೊಂದು, ಜೂನ್ 7, 2026 ರಂದು ಬೆಳಿಗ್ಗೆ 10 ಗಂಟೆಗೆ ತನ್ನ ನಿವಾಸದಲ್ಲಿ ವಿಷ ಸೇವಿಸಿದ್ದನು.

​ವಿಷ ಸೇವಿಸಿದ ತಕ್ಷಣ ಮನೆಯವರು ಹಾಗೂ ನೆರೆಹೊರೆಯವರು ಆತನನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದರು. ನಂತರ ವೈದ್ಯರ ಸಲಹೆಯಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ವಿಷವು ರಕ್ತವನ್ನು ಸೇರಿ, ಶ್ವಾಸಕೋಶದ ತೀವ್ರ ಉಸಿರಾಟದ ಸಮಸ್ಯೆ ಎದುರಾದಾಗ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಯಿತು. ಸಾಲ ಸೋಲ ಮಾಡಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ ಜೂನ್ 27, 2026 ರಂದು ಝೇಂಕಾರ ಮೂರ್ತಿ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಶಿಕಾರಿಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ನನ್ನ ಮಗನ ಸಾವಿಗೆ ನೀಟ್ ಅವ್ಯವಸ್ಥೆಯೇ ಕಾರಣ”
“ನನ್ನ ಮಗ ಚೆನ್ನಾಗಿ ಓದಿ ಡಾಕ್ಟರ್ ಆಗಬೇಕು ಅಂತ ಸಾವಿರ ಕನಸು ಕಂಡಿದ್ದ. ಕೇವಲ ಒಂದು ಎಕರೆ ಜಮೀನಿದ್ದರೂ ಸಾಲ ಮಾಡಿ ಆತನನ್ನು ಓದಿಸಿದ್ದೆ. ಕೇಂದ್ರ ಸರ್ಕಾರದ ನೀಟ್ ಪರೀಕ್ಷೆಯ ಅವ್ಯವಸ್ಥೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಯೇ ನನ್ನ ಮಗನ ಸಾವಿಗೆ ನೇರ ಕಾರಣ. ಇಡೀ ಕುಟುಂಬ ಇಂದು ಬೀದಿಗೆ ಬಿದ್ದಿದೆ. ನಮಗೆ ನ್ಯಾಯ ಸಿಗಬೇಕು.”
— ಡಿ.ಎಚ್. ಹಾಲೇಶಪ್ಪ (ಮೃತ ವಿದ್ಯಾರ್ಥಿಯ ತಂದೆ)

ನೀಟ್ ಪರೀಕ್ಷೆಯಂತಹ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಅತ್ಯಂತ ಖಂಡನೀಯ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಒಂದು ಪ್ರಶ್ನೆಪತ್ರಿಕೆ ಸೋರಿಕೆಯ ಪರಿಣಾಮವಾಗಿ ಅನೇಕ ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೆಲವರ ಜೀವನವೇ ದುರ್ಘಟನೆಯತ್ತ ತಳ್ಳಲ್ಪಟ್ಟಿದೆ. ಇಂತಹ ಅವ್ಯವಸ್ಥೆಗೆ ಹೊಣೆಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕೆಂದು ಶಿಕ್ಷಣ ತಜ್ಞರು ಒತ್ತಾಯಿಸಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕುಟುಂಬದ ಮನವಿ

ಮೃತ ವಿದ್ಯಾರ್ಥಿಯ ಕುಟುಂಬವು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಈ ಕೆಳಗಿನ ಬೇಡಿಕೆಗಳನ್ನು ಮುಂದಿಟ್ಟಿದೆ:

  • ವಿದ್ಯಾರ್ಥಿಯ ಸಾವಿನ ಕುರಿತು ಉನ್ನತ ಮಟ್ಟದ ನ್ಯಾಯಾಂಗ ಅಥವಾ ಸ್ವತಂತ್ರ ತನಿಖೆ ನಡೆಸಬೇಕು.
  • ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ಸತ್ಯಾಂಶ ಬಹಿರಂಗಪಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು.
  • ಬಡ ರೈತ ಕುಟುಂಬಕ್ಕೆ ಸಮರ್ಪಕ ಪರಿಹಾರ ಹಾಗೂ ವಿಶೇಷ ಆರ್ಥಿಕ ನೆರವು ನೀಡಬೇಕು.
  • ಕುಟುಂಬದ ಮೇಲಿರುವ ಚಿಕಿತ್ಸಾ ಸಾಲವನ್ನು ಸರ್ಕಾರವೇ ಭರಿಸಬೇಕು.
  • ಕುಟುಂಬದ ಇನ್ನೊಬ್ಬ ಮಗನ ವಿದ್ಯಾಭ್ಯಾಸಕ್ಕೆ ಸರ್ಕಾರ ವಿಶೇಷ ನೆರವು ನೀಡಬೇಕು.
  • ಇಂತಹ ಘಟನೆಗಳು ಮರುಕಳಿಸದಂತೆ ರಾಷ್ಟ್ರಮಟ್ಟದ ಪರೀಕ್ಷಾ ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆಗಳನ್ನು ಜಾರಿಗೆ ತರಬೇಕು.

“ನಮ್ಮ ಮಗನನ್ನು ಮರಳಿ ಪಡೆಯಲು ಸಾಧ್ಯವಿಲ್ಲ. ಆದರೆ ಇನ್ನೊಬ್ಬ ವಿದ್ಯಾರ್ಥಿಯ ಬದುಕು ಹಾಳಾಗಬಾರದು. ನಮ್ಮ ಮಗನ ಸಾವಿಗೆ ನ್ಯಾಯ ಸಿಗಬೇಕು. ಸರ್ಕಾರಗಳು ಮಾನವೀಯತೆ ತೋರಬೇಕು,” ಎಂದು ಮೃತ ವಿದ್ಯಾರ್ಥಿಯ ತಂದೆ ಡಿ.ಎಚ್. ಹಾಲೇಶಪ್ಪ ಅವರು ಆಗ್ರಹಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment