ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಗುಡ್ಡೆಕಲ್ಲಿನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರಿಂದ ವಿಶೇಷ ಪೂಜೆ, ಸ್ವಾಮಿಯ ದರ್ಶನ

On: August 6, 2026 2:21 PM
Follow Us:

ಶಿವಮೊಗ್ಗ: ಶಿವಮೊಗ್ಗ ನಗರದ ಗುಡ್ಡೆಕಲ್ಲಿನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ ಆಡಿಕೃತಿಕೆ ಹಾಗೂ ಹರೋಹರ ಜಾತ್ರಾ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಾಲಯದ ಅರ್ಚಕರು ನೆರವೇರಿಸಿದ ವಿಶೇಷ ಪೂಜೆಯಲ್ಲಿ ಭಾಗವಹಿಸಿದ ಷಡಾಕ್ಷರಿ ಅವರು, ರಾಜ್ಯದ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಲಭಿಸಲಿ ಎಂದು ಪ್ರಾರ್ಥಿಸಿದರು. ಜಾತ್ರಾ ಮಹೋತ್ಸವವು ಯಾವುದೇ ಅಡೆತಡೆಗಳಿಲ್ಲದೆ ಭಕ್ತಿಭಾವದಿಂದ ಯಶಸ್ವಿಯಾಗಿ ನೆರವೇರಲಿ ಹಾಗೂ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಯ ಕೃಪಾಶೀರ್ವಾದ ನಾಡಿನ ಸಮಸ್ತ ಜನರ ಮೇಲೆ ಸದಾ ಇರಲಿ ಎಂದು ಹಾರೈಸಿದರು.

ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತಾದಿಗಳಿಗೆ ಆಯೋಜಿಸಲಾಗಿದ್ದ ಅನ್ನದಾಸೋಹ ಕಾರ್ಯಕ್ರಮದಲ್ಲೂ ಅವರು ಪಾಲ್ಗೊಂಡು, ಭಕ್ತರಿಗೆ ಅನ್ನಪ್ರಸಾದ ವಿತರಿಸಿದರು. ದೇವಾಲಯಕ್ಕೆ ಆಗಮಿಸಿದ್ದ ಭಕ್ತರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಅವರು, ಧಾರ್ಮಿಕ ಆಚರಣೆಗಳು ಸಮಾಜದಲ್ಲಿ ಸೌಹಾರ್ದತೆ, ಸೇವಾ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಮೋಹನ್ ಕುಮಾರ್, ಬಸವೇಶ್ವರ ಸೊಸೈಟಿ ಅಧ್ಯಕ್ಷ ಬಳ್ಳೇಕೆರೆ ಸಂತೋಷ್, ಸಿದ್ದಣ್ಣ, ಭರತ್, ಶಶಿ ಸೇರಿದಂತೆ ಸಂಘದ ಪದಾಧಿಕಾರಿಗಳು, ದೇವಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment