ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ; ಮುಖಂಡರು, ಕಾರ್ಯಕರ್ತರ ಬಂಧನ

On: August 20, 2026 6:01 PM
Follow Us:

ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆರಂಭಿಸಿರುವ ಅನಿರ್ದಿಷ್ಟಾವಧಿಯ ಹಗಲು-ರಾತ್ರಿ ಧರಣಿ ನಾಲ್ಕನೇ ದಿನವೂ ಮುಂದುವರಿಯಿತು.

ಧರಣಿಯ ನಾಲ್ಕನೇ ದಿನವಾದ ಇಂದು ಸಂಜೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಎನ್.ಕೆ. ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಹರಸಾಹಸಪಟ್ಟರು.

ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಮುಂದಾಗಿದ್ದು, ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಎನ್.ಕೆ. ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧಿಸಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು ಹಾಗೂ ಪ್ರಕರಣಕ್ಕೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವವರೆಗೆ ಹೋರಾಟವನ್ನು ಮುಂದುವರಿಸಲಾಗುವುದು ಎಂದು ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಘೋಷಣೆಗಳಿಂದ ಕೆಲಕಾಲ ರಾಜಕೀಯ ಚಟುವಟಿಕೆ ತೀವ್ರಗೊಂಡಿತ್ತು.

K.M.Sathish Gowda

Join WhatsApp

Join Now

Facebook

Join Now

Read more

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ನಾಗೇಂದ್ರರನ್ನು ಸಂಪುಟದಿಂದ ಕೈಬಿಡುವವರೆಗೆ ಹೋರಾಟ ನಿರಂತರ: ಚಂದ್ರಶೇಖರ್

ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಮೀಸಲಿಟ್ಟ ₹187 ಕೋಟಿ ಲೂಟಿ ಖಂಡನೀಯ; ನಾಗೇಂದ್ರ ವಜಾಗೊಳ್ಳುವವರೆಗೂ ಹೋರಾಟ ನಿಲ್ಲದು: ಎಸ್ಟಿ ಮೋರ್ಚಾ ಅಧ್ಯಕ್ಷ ಹರೀಶ್ ಘೋಷಣೆ

ಬ್ಯಾರಿಕೇಡ್‌ಗಳಿಗೆ ಹೆದರಲ್ಲ, ಹೋರಾಟದಿಂದ ಹಿಂದೆ ಸರಿಯಲ್ಲ: ₹187 ಕೋಟಿ ದೀನದಲಿತರ ಅಭಿವೃದ್ಧಿಗೆ ಬಳಕೆಯಾಗಬೇಕಿತ್ತು ಎಂದು ಕಾಂಗ್ರೆಸ್ ವಿರುದ್ಧ ಶಾಂತ ಸುರೇಂದ್ರ ವಾಗ್ದಾಳಿ

ಸಚಿವ ನಾಗೇಂದ್ರ ವಜಾ ಆಗುವವರೆಗೆ ಹೋರಾಟ ನಿಲ್ಲಲ್ಲ; ಬಿಜೆಪಿ ಕಾರ್ಯಕರ್ತರ ಶಕ್ತಿ ಏನೆಂದು ಸರ್ಕಾರಕ್ಕೆ ತೋರಿಸುತ್ತೇವೆ: ಸುರೇಖಾ ಮುರುಳಿಧರ್

ನಾಳೆ ವಾಲ್ಮೀಕಿ ಪ್ರತಿಮೆ ಬಳಿಯಿಂದ ಹೋರಾಟ ಆರಂಭ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ವಿದ್ಯಾರ್ಥಿಗಳಿಗೆ ಸಮುದಾಯದ ಅರಿವು ಮೂಡಿಸುವಲ್ಲಿ ರೋಟರಿ ಸಂಸ್ಥೆಯ ಕಾರ್ಯ ಶ್ಲಾಘನೀಯ: ಶೇಷಗಿರಿ ಡಿ.ಕೆ.

Leave a Comment