ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ನಾಗೇಂದ್ರರನ್ನು ಸಂಪುಟದಿಂದ ಕೈಬಿಡುವವರೆಗೆ ಹೋರಾಟ ನಿರಂತರ: ಚಂದ್ರಶೇಖರ್

On: August 20, 2026 11:56 PM
Follow Us:

ನಾಲ್ಕು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಹೋರಾಟವನ್ನು ಅಚ್ಚುಕಟ್ಟಾಗಿ ಸಂಘಟಿಸಿ ಮುನ್ನಡೆಸುತ್ತಿರುವ ಪಕ್ಷದ ಮುಖಂಡರು, ಹೋರಾಟದ ರುವಾರಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಕಾರ್ಯವೈಖರಿಯನ್ನು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ್ ಶ್ಲಾಘಿಸಿದರು. ಧರಣಿಯ ಪ್ರತಿಯೊಂದು ಹಂತದಲ್ಲೂ ಮಾಧ್ಯಮದ ಮೂಲಕ ಹೋರಾಟದ ಉದ್ದೇಶವನ್ನು ಜನರಿಗೆ ತಲುಪಿಸುವ ಕಾರ್ಯ, ಹೋರಾಟಗಾರರ ಸಮನ್ವಯ ಹಾಗೂ ವ್ಯವಸ್ಥಿತ ನಿರ್ವಹಣೆ ಮಾದರಿಯಾಗಿದ್ದು, ಇದೇ ಸಂಘಟಿತ ಶಕ್ತಿಯೇ ಹೋರಾಟಕ್ಕೆ ಹೆಚ್ಚಿನ ಬಲ ನೀಡಿದೆ ಎಂದು ಅವರು ಹೇಳಿದರು.

ಧರಣಿ ಸ್ಥಳದಲ್ಲಿ ಮಾತನಾಡಿದ ಚಂದ್ರಶೇಖರ್ ಅವರು, ಅತ್ಯಂತ ಪವಿತ್ರವಾದ ನಾಗರ ಪಂಚಮಿಯ ದಿನದಂದೇ ಈ ಹೋರಾಟಕ್ಕೆ ಚಾಲನೆ ನೀಡಲಾಗಿದೆ. ನಾಗರ ಪಂಚಮಿಯ ದಿನ ನಾಗದೇವತೆಗೆ ಹಾಲೆರೆಯುವ ಸಂಪ್ರದಾಯವಿದೆ. ಆದರೆ, ಇದೇ ಸಂದರ್ಭದಲ್ಲಿ ಸಚಿವ ನಾಗೇಂದ್ರ ಎಂಬ ವ್ಯಕ್ತಿಗೆ ಸಂಬಂಧಿಸಿದ ಹಗರಣದ ಆರೋಪದಲ್ಲಿ ಶಿವಮೊಗ್ಗದ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಅವರ ಸಾವಿಗೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ನಾವು ಹೋರಾಟ ಆರಂಭಿಸಿದ್ದೇವೆ ಎಂದು ಹೇಳಿದರು.

ಇಂಗ್ಲಿಷ್‌ನಲ್ಲಿ Suicide is a permanent solution for a temporary problem” ಎಂಬ ಮಾತಿದೆ. ಅಂದರೆ, ತಾತ್ಕಾಲಿಕ ಸಮಸ್ಯೆಗೆ ಯಾರೂ ಶಾಶ್ವತ ಪರಿಹಾರವನ್ನು ಆಯ್ಕೆ ಮಾಡಬಾರದು. ಆದರೆ, ಇಲ್ಲಿ ಪ್ರಶ್ನೆ ಏನೆಂದರೆ, ಇನ್ನೊಬ್ಬರು ಮಾಡಿದ್ದ ಎನ್ನಲಾದ ಅಕ್ರಮದ ಹೊಣೆಗಾರಿಕೆಯನ್ನು ಒಬ್ಬ ಪ್ರಾಮಾಣಿಕ ಅಧಿಕಾರಿಯ ತಲೆಯ ಮೇಲೆ ಹಾಕುವಂತಹ ಪರಿಸ್ಥಿತಿ ಏಕೆ ನಿರ್ಮಾಣವಾಯಿತು? ಎಂದು ಅವರು ಪ್ರಶ್ನಿಸಿದರು.

₹187 ಕೋಟಿ ಎಂಬ ಬೃಹತ್ ಮೊತ್ತದ ಅಕ್ರಮ ವರ್ಗಾವಣೆ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಒಬ್ಬ ಅಧಿಕಾರಿ ಆತ್ಮಹತ್ಯೆಗೆ ಶರಣಾಗಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ದುಃಖಕರ ಸಂಗತಿ. ಇಂದು ಆ ಅಧಿಕಾರಿಯ ಕುಟುಂಬ ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಸರ್ಕಾರ ಅರಿಯಬೇಕಿದೆ. ನಾವು ಈ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಕುಟುಂಬದವರು ತಮ್ಮ ಅಳಲನ್ನು ವ್ಯಕ್ತಪಡಿಸುತ್ತಿದ್ದು, ಅವರಿಗೆ ಸರ್ಕಾರದಿಂದ ನಿರೀಕ್ಷಿತ ರೀತಿಯ ನೆರವು ದೊರೆತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು.

ಪ್ರಾಮಾಣಿಕ ಅಧಿಕಾರಿಯ ಸಾವಿನ ಹಿಂದಿನ ಸತ್ಯ ಹೊರಬರಬೇಕು. ಅವರ ಕುಟುಂಬಕ್ಕೆ ನ್ಯಾಯ ದೊರಕಬೇಕು ಹಾಗೂ ಅಗತ್ಯ ನೆರವು ನೀಡಬೇಕು ಎಂಬುದು ಈ ಹೋರಾಟದ ಪ್ರಮುಖ ಉದ್ದೇಶವಾಗಿದೆ. ಆದರೆ, ಹಗರಣಕ್ಕೆ ಸಂಬಂಧಿಸಿದಂತೆ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯೊಬ್ಬರು ಮತ್ತೆ ಸಚಿವ ಸ್ಥಾನಕ್ಕೆ ಬಂದಿರುವುದು ಜನರ ಮನಸ್ಸಿನಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಚಂದ್ರಶೇಖರ್ ಆಕ್ಷೇಪ ವ್ಯಕ್ತಪಡಿಸಿದರು.

2017ರಲ್ಲಿ ದೇಶದಲ್ಲಿ ಜಿಎಸ್‌ಟಿ ಜಾರಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ‘ನಮ್ಮ ತೆರಿಗೆ, ನಮ್ಮ ಹಕ್ಕು’ ಎಂಬ ಘೋಷಣೆಗಳನ್ನು ಬಳಸಿದ್ದರು. ಆದರೆ, ಈಗ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಸ್ಪಷ್ಟ ಉತ್ತರ ನೀಡುವ ಬದಲು ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಯಾವ ನೈತಿಕತೆಯ ಆಧಾರದಲ್ಲಿ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.

ಹಗರಣದ ಹಣದ ಕುರಿತು ಕೇಳಿಬರುತ್ತಿರುವ ಗಂಭೀರ ಆರೋಪಗಳಿಗೆ ಉತ್ತರಿಸುವ ಬದಲು ರಾಜಕೀಯ ರಕ್ಷಣೆಯ ವಾತಾವರಣ ಸೃಷ್ಟಿಸಲಾಗುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ಅವರು ಹೇಳಿದರು.

ನಾಗೇಂದ್ರ ಅವರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಿ ಮತ್ತೆ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ. ಹಗರಣದ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸುವ ಬೆದರಿಕೆ ಹಾಕಿದ ಕಾರಣಕ್ಕೆ ಅವರಿಗೆ ಸಚಿವ ಸ್ಥಾನ ನೀಡಲಾಗಿದೆಯೇ ಎಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕರು ಉತ್ತರಿಸಬೇಕು ಎಂದು ಚಂದ್ರಶೇಖರ್ ಸವಾಲು ಹಾಕಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿರಂತರವಾಗಿ ಟೀಕೆ ಮಾಡುವ ಕಾಂಗ್ರೆಸ್ ನಾಯಕರು ತಮ್ಮದೇ ಸರ್ಕಾರದ ಹಗರಣದ ಆರೋಪಗಳ ಬಗ್ಗೆ ಏಕೆ ಮೌನವಾಗಿದ್ದಾರೆ? ಜನರ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು ಕಾಂಗ್ರೆಸ್‌ನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಬಿಜೆಪಿಗೆ ಹೋರಾಟ ಹೊಸದಲ್ಲ. ಅದೇ ರೀತಿ ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಆರೋಪಗಳೂ ಹೊಸದಲ್ಲ ಎಂದು ವಾಗ್ದಾಳಿ ನಡೆಸಿದ ಅವರು, ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗ ಪ್ರತಿಭಟನೆಗಳು ನಡೆಯುತ್ತಿವೆ ಎಂದರು.

ಬೇರೆ ಯಾವುದೇ ಸರ್ಕಾರವಾಗಿದ್ದರೆ ಇಷ್ಟೊತ್ತಿಗಾಗಲೇ ಆರೋಪಿತ ಸಚಿವರ ವಿರುದ್ಧ ಕ್ರಮ ಕೈಗೊಳ್ಳುತ್ತಿತ್ತು. ಆದರೆ, ಈ ಸರ್ಕಾರ ಮಾತ್ರ ಆರೋಪಗಳನ್ನು ಗಂಭೀರವಾಗಿ ಪರಿಗಣಿಸುವ ಬದಲು ರಾಜಕೀಯ ರಕ್ಷಣೆಗೆ ಮುಂದಾಗಿದೆ ಎಂಬ ಆರೋಪವನ್ನು ಅವರು ಮಾಡಿದರು.

ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ ಎಂಬುದನ್ನು ಈ ಪ್ರಕರಣ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಚಂದ್ರಶೇಖರ್ ಟೀಕಿಸಿದರು. ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡುವವರೆಗೆ ಬಿಜೆಪಿ ತನ್ನ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯ ನಾಯಕರ ಸೂಚನೆ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಆಧಾರದ ಮೇಲೆ ಪ್ರತಿಭಟನೆಗೆ ಹೊಸ ಹೊಸ ತಿರುವುಗಳನ್ನು ನೀಡಲಾಗುವುದು. ಶಿವಮೊಗ್ಗದ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಅವರ ಸಾವಿಗೆ ನ್ಯಾಯ ದೊರಕಿಸುವ ತನಕ ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ತನಕ ಬಿಜೆಪಿ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದರು.

ಸವಾಲುಗಳು ನೂರಿರಲಿ, ಎಂತಹ ಅಡೆತಡೆಗಳು ಬಂದರೂ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಯಶಸ್ಸು ಸಾಧಿಸುವ ವಿಶ್ವಾಸ ನಮಗಿದೆ. ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಬೇಕು. ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕೈಬಿಡುವಲ್ಲಿ ನಮ್ಮೆಲ್ಲರ ಸಂಘಟಿತ ಹೋರಾಟ ದೊಡ್ಡ ಪಾತ್ರ ವಹಿಸಬೇಕು ಎಂದು ಅವರು ಕರೆ ನೀಡಿದರು.

ನಾಲ್ಕು ದಿನಗಳಿಂದ ಹಗಲು-ರಾತ್ರಿ ನಿರಂತರವಾಗಿ ನಡೆಯುತ್ತಿರುವ ಧರಣಿಯನ್ನು ಯಶಸ್ವಿಯಾಗಿ ಸಂಘಟಿಸಿರುವ ಹೋರಾಟದ ರುವಾರಿಗಳು, ಜಿಲ್ಲಾ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು ಹಾಗೂ ಹೋರಾಟದ ಯಶಸ್ಸಿಗೆ ಶ್ರಮಿಸುತ್ತಿರುವ ಮಾಧ್ಯಮ ತಂಡದ ಕಾರ್ಯವನ್ನು ಇದೇ ಸಂದರ್ಭದಲ್ಲಿ ಚಂದ್ರಶೇಖರ್ ಶ್ಲಾಘಿಸಿದರು.

ಎಲ್ಲರ ಸಂಘಟಿತ ಶಕ್ತಿ, ಅಚ್ಚುಕಟ್ಟಾದ ವ್ಯವಸ್ಥೆ ಮತ್ತು ನ್ಯಾಯಕ್ಕಾಗಿ ಇರುವ ಬದ್ಧತೆಯೇ ಈ ಹೋರಾಟವನ್ನು ಮತ್ತಷ್ಟು ಬಲಿಷ್ಠವಾಗಿಸಿದೆ. ಶಿವಮೊಗ್ಗದ ಪ್ರಾಮಾಣಿಕ ಅಧಿಕಾರಿಯ ಸಾವಿಗೆ ನ್ಯಾಯ ದೊರಕಿಸುವ ಸಂಕಲ್ಪದೊಂದಿಗೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸೋಣ ಎಂದು ಕರೆ ನೀಡಿದರು.

K.M.Sathish Gowda

Join WhatsApp

Join Now

Facebook

Join Now

Read more

ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಮೀಸಲಿಟ್ಟ ₹187 ಕೋಟಿ ಲೂಟಿ ಖಂಡನೀಯ; ನಾಗೇಂದ್ರ ವಜಾಗೊಳ್ಳುವವರೆಗೂ ಹೋರಾಟ ನಿಲ್ಲದು: ಎಸ್ಟಿ ಮೋರ್ಚಾ ಅಧ್ಯಕ್ಷ ಹರೀಶ್ ಘೋಷಣೆ

ಬ್ಯಾರಿಕೇಡ್‌ಗಳಿಗೆ ಹೆದರಲ್ಲ, ಹೋರಾಟದಿಂದ ಹಿಂದೆ ಸರಿಯಲ್ಲ: ₹187 ಕೋಟಿ ದೀನದಲಿತರ ಅಭಿವೃದ್ಧಿಗೆ ಬಳಕೆಯಾಗಬೇಕಿತ್ತು ಎಂದು ಕಾಂಗ್ರೆಸ್ ವಿರುದ್ಧ ಶಾಂತ ಸುರೇಂದ್ರ ವಾಗ್ದಾಳಿ

ಸಚಿವ ನಾಗೇಂದ್ರ ವಜಾ ಆಗುವವರೆಗೆ ಹೋರಾಟ ನಿಲ್ಲಲ್ಲ; ಬಿಜೆಪಿ ಕಾರ್ಯಕರ್ತರ ಶಕ್ತಿ ಏನೆಂದು ಸರ್ಕಾರಕ್ಕೆ ತೋರಿಸುತ್ತೇವೆ: ಸುರೇಖಾ ಮುರುಳಿಧರ್

ನಾಳೆ ವಾಲ್ಮೀಕಿ ಪ್ರತಿಮೆ ಬಳಿಯಿಂದ ಹೋರಾಟ ಆರಂಭ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ; ಮುಖಂಡರು, ಕಾರ್ಯಕರ್ತರ ಬಂಧನ

ವಿದ್ಯಾರ್ಥಿಗಳಿಗೆ ಸಮುದಾಯದ ಅರಿವು ಮೂಡಿಸುವಲ್ಲಿ ರೋಟರಿ ಸಂಸ್ಥೆಯ ಕಾರ್ಯ ಶ್ಲಾಘನೀಯ: ಶೇಷಗಿರಿ ಡಿ.ಕೆ.

Leave a Comment