ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಅಖಿಲ ಭಾರತ ವೀರಶೈವ ಮಹಾಸಭಾ ಶಿವಮೊಗ್ಗ ತಾಲೂಕು ಯುವ ಘಟಕದಿಂದ ಧಾರ್ಮಿಕ ಕಾರ್ಯಕ್ರಮ: ಬಸವೇಶ್ವರ ದೇವಸ್ಥಾನದಲ್ಲಿ ಗಣಪತಿಗೆ ವಿಶೇಷ ಪೂಜೆ, ಮಹಾಮಂಗಳಾರತಿ

On: September 20, 2026 12:07 PM
Follow Us:

ಶಿವಮೊಗ್ಗ: ನಗರದ ಗಾಂಧಿಬಜಾರ್‌ನ ಶ್ರೀ ಬಸವೇಶ್ವರ ದೇವಸ್ಥಾನದ ಆವರಣವು ಭಕ್ತಿ, ಭಜನೆ ಮತ್ತು ಧಾರ್ಮಿಕ ಸಂಭ್ರಮದಿಂದ ಕಂಗೊಳಿಸಿತು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಯುವ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಗಣಪತಿ ಪೂಜೆ, ಮಹಾಮಂಗಳಾರತಿ, ಮಾಲಾರ್ಪಣೆ ಹಾಗೂ ಪ್ರಸಾದ ವಿತರಣಾ ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.

ಗಣೇಶ ಚತುರ್ಥಿಯ ಪ್ರಯುಕ್ತ ಆಯೋಜಿಸಲಾಗಿದ್ದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ವೇದಘೋಷ, ಮಂತ್ರೋಚ್ಚಾರಣೆಯ ನಡುವೆ ನೆರವೇರಿದ ಮಹಾಮಂಗಳಾರತಿಯನ್ನು ಕಣ್ತುಂಬಿಕೊಳ್ಳಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಬಳಿಕ ಗಣಪತಿಗೆ ಮಾಲಾರ್ಪಣೆ ಮಾಡಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಭಕ್ತರಿಗೆ ಹಾಗೂ ಗಣ್ಯರಿಗೆ ಪ್ರಸಾದ ವಿತರಿಸಲಾಯಿತು.

ಯುವ ಸಮುದಾಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಉತ್ತಮ ಬೆಳವಣಿಗೆ. ಇಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಸಾಮಾಜಿಕ ಒಗ್ಗಟ್ಟನ್ನು ಬಲಪಡಿಸುವುದರ ಜೊತೆಗೆ ಯುವಕರಲ್ಲಿ ಸೇವಾ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ. ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕವು ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಮಾಜಿಕ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ತಿಳಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಯುವ ಘಟಕವು ಧಾರ್ಮಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತವಾಗದೆ, ಸಾಮಾಜಿಕ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಯುವ ಪೀಳಿಗೆಯಲ್ಲಿ ಧಾರ್ಮಿಕ ಚಟುವಟಿಕೆಗಳ ಮೂಲಕ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಬಲಪಡಿಸುವುದು ಮುಖ್ಯ ಉದ್ದೇಶ. ಯುವಕರನ್ನು ಧನಾತ್ಮಕ ಹಾಗೂ ಸಾಮರಸ್ಯದ ಹಾದಿಯಲ್ಲಿ ಸಂಘಟಿಸಲು ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುವುದು ಎಂದು ತಾಲೂಕು ಯುವ ಘಟಕದ ಅಧ್ಯಕ್ಷ ನವೀನ್ ವಾರದ್ ಹೇಳಿದರು.

ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಮುಖ ಮಾಧ್ಯಮ. ಯುವಕರು ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಧಾರ್ಮಿಕ ಪ್ರಜ್ಞೆಯ ಜತೆಗೆ ಸಾಮಾಜಿಕ ಜವಾಬ್ದಾರಿಯೂ ಬೆಳೆಯುತ್ತದೆ. ಯುವ ಘಟಕದ ವತಿಯಿಂದ ಆಯೋಜಿಸಿರುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸಲಿ ಎಂದು ಬಸವೇಶ್ವರ ಸೊಸೈಟಿ ಅಧ್ಯಕ್ಷರಾದ ಬಳ್ಳೇಕೆರೆ ಸಂತೋಷ್ ಹೇಳಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಭಕ್ತಾದಿಗಳು ಹಾಗೂ ಸಮಾಜದ ಮುಖಂಡರಿಗೆ ಮಹಾಮಂಗಳಾರತಿಯ ನಂತರ ಪ್ರಸಾದ ವಿತರಣೆ ಮಾಡಲಾಯಿತು. ಈ ಧಾರ್ಮಿಕ ಸಂಭ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ, ಬಸವೇಶ್ವರ ಸೊಸೈಟಿಯ ಅಧ್ಯಕ್ಷರಾದ ಬಳ್ಳೇಕೆರೆ ಸಂತೋಷ್, ಕರಿಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಹೆಚ್.ವಿ. ಮಹೇಶ್ವರಪ್ಪ, ಪತ್ರಕರ್ತ ಕೆ.ಎಂ. ಸತೀಶ್ ಗೌಡ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಹಾಗೂ ತಾಲೂಕು ಯುವ ಘಟಕದ ಅಧ್ಯಕ್ಷ ನವೀನ್ ವಾರದ್ ಸೇರಿದಂತೆ ಪ್ರಮುಖ ಗಣ್ಯರು ಭಾಗವಹಿಸಿ ಪೂಜೆಯಲ್ಲಿ ಪಾಲ್ಗೊಂಡರು.

ತಾಲೂಕು ಯುವ ಘಟಕದ ಪದಾಧಿಕಾರಿಗಳಾದ ತೇಜುಕುಮಾರ್, ಏಕಾಂತ್, ವಿನೋದ್ ರಾಜ್, ವೀರೇಶ್, ಸೃಜನ್, ಸುನಿಲ್ ಹಾಗೂ ಶಿವಶಂಕರ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಶಿಕಾರಿಪುರವನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ: ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಎಸ್.ಪಿ. ನಾಗರಾಜಗೌಡ ಮನವಿ: ಮಳೆ ಕೊರತೆ, ಬೆಳೆ ಹಾನಿ ಹಾಗೂ ಕುಡಿಯುವ ನೀರಿನ ಸಮಸ್ಯೆ: ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವಂತೆ ಒತ್ತಾಯ

ಶ್ರೀ ರಂಭಾಪುರಿ ಪೀಠಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಶ್ರೀ ವೀರಭದ್ರಸ್ವಾಮಿ, ಶ್ರೀ ಜಗದ್ಗುರು ರೇಣುಕಾಚಾರ್ಯರ ಸನ್ನಿಧಿಯಲ್ಲಿ ಪೂಜೆ: ಗುರುಮಠಕ್ಕೆ ಭೂಮಿಪೂಜೆ, ಶ್ರೀ ರಂಭಾಪುರಿ ಜಗದ್ಗುರುಗಳಿಂದ ಆಶೀರ್ವಾದ

ಹನಸವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ: ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 35ನೇ ಶ್ರದ್ಧಾಂಜಲಿ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಸೇವೆ

ಕಸ್ತೂರಿ ರಂಗನ್ ವರದಿ: ತೀರ್ಥಹಳ್ಳಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಜನಸಂವಾದ: ರೈತರಿಗೆ ಹೊಸ ನೋಟಿಸ್ ನೀಡದಂತೆ ಅರಣ್ಯ ಇಲಾಖೆಗೆ ಸೂಚನೆ: ಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆ ಆಲಿಸುವ ಭರವಸೆ

ಅಮಿತ್ ಶಾ ಭೇಟಿ: ಬಳ್ಳಾರಿ ಚಲೋ ಯಶಸ್ಸಿನ ವಿವರ ಸಲ್ಲಿಸಿದ ವಿಜಯೇಂದ್ರ: ರಾಜ್ಯದ ಪಕ್ಷ ಸಂಘಟನೆ, ಮುಂದಿನ ಹೋರಾಟಗಳ ಕುರಿತು ಸಮಾಲೋಚನೆ

4,500ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ಸಮಾಗಮ; 173 ಕಂಪನಿಗಳಿಂದ ಉದ್ಯೋಗಾವಕಾಶ: ಪದವಿ ಮಾತ್ರ ಸಾಲದು, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರಕ್ಕೆ ತಕ್ಕಂತೆ ಕೌಶಲ್ಯ ಬೆಳೆಸಿಕೊಳ್ಳಿ: ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ

Leave a Comment