ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ವ್ಯಾಪಾರಿಗಳಿಗೆ ಬಿಗ್​ ರಿಲೀಫ್​.. ಜಿಎಸ್‌ಟಿ ನೋಟೀಸ್ ಕೊಟ್ಟಿದ್ದರೂ, ಯಾರಿಂದಲೂ ತೆರಿಗೆ ಕಟ್ಟಿಸಿಕೊಳ್ಳಲ್ಲ: ಸಿಎಂ ಸಿದ್ದರಾಮಯ್ಯ

On: July 23, 2025 9:02 PM
Follow Us:

ಬೆಂಗಳೂರು: ಈಗ ಎಲ್ಲಿ ನೋಡಿದರೂ ಯುಪಿಐದ್ದೇ ಗೊಂದಲ ಶುರುವಾಗಿದೆ. ಅಂಗಡಿಯಲ್ಲಿ ಏನೇ ಖರೀದಿ ಮಾಡಿದ್ರೂ ಗ್ರಾಹಕರು ಪಾವತಿ ಮಾಡುವುದು ಯುಪಿಐ ಮೂಲಕವೇ. ಆದರೆ ಕಳೆದ ಕೆಲವು ದಿನಗಳಿಂದ ಯುಪಿಐ ಮೂಲಕ ಹಣ ಸ್ವೀಕರಿಸುತ್ತಿರುವ ವ್ಯಾಪಾರಿಗಳಿಗೆ ತೆರಿಗೆ ನೋಟೀಸ್ ಜಾರಿ ಮಾಡಲಾಗುತ್ತಿದೆ. ತಮಗೆ ಬಂದ ಲಕ್ಷ ಲಕ್ಷ ತೆರಿಗೆ ನೋಟೀಸ್ ನೋಡಿ ವ್ಯಾಪಾರಿಗಳು ಶಾಕ್​ ಆಗಿದ್ದಾರೆ. ಅಲ್ಲದೇ ಇದನ್ನೂ ಖಂಡಿಸಿ ಅಂಗಡಿ ಮಾಲೀಕರು ಹೋರಾಟಕ್ಕೆ ಸಜ್ಜಾಗಿದ್ದರು.

ಈ ಬೆನ್ನಲ್ಲೇ ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ತೆರಿಗೆ ಇಲಾಖೆ ನೀಡಿರುವ ಜಿಎಸ್​ಟಿ ನೋಟೀಸ್ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿಎಸ್​ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದರು. ಯುಪಿಐ ಅಡಿ ರೂ. 40 ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್​ಟಿ ನೋಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್​ಟಿ ನೊಂದಣಿ ಮಾಡುವಂತೆ ನೋಟೀಸ್ ನೀಡಲಾಗಿತ್ತು ಎಂದಿದ್ದಾರೆ.

ಮತ್ತೆ ಮಾತನ್ನು ಮುಂದುವರೆಸಿದ ಸಿಎಂ ಸಿದ್ದರಾಮಯ್ಯ, ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ನೋಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್​ಟಿ ನೋಂದಣಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದರು. ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ಜಿಎಸ್​ಟಿ ನೋಟೀಸ್ ಜಾರಿಗೊಳಿಸಲಾಗಿದೆ ಎಂದರು.

ಮತ್ತೆ, ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ. ಜಿಎಸ್​ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್​ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು ಎಂದರು.

ಅಲ್ಲದೇ, ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್​ಟಿ ನೋಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ. ಜಿಎಸ್​ಟಿ ನೋಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು.

K.M.Sathish Gowda

Join WhatsApp

Join Now

Facebook

Join Now

Leave a Comment