ಬೆಂಗಳೂರು, ಅ. 24: ರಾಜ್ಯದ ಪ್ರತಿಷ್ಠಿತ ಐಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್‌ನ 2026-27ನೇ ಸಾಲಿನ ಪ್ರವಾಸಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದರು.
ಕರ್ನಾಟಕದ ಶ್ರೀಮಂತ ಇತಿಹಾಸ, ವೈವಿಧ್ಯಮಯ ಸಂಸ್ಕೃತಿ, ವಾಸ್ತುಶಿಲ್ಪ, ನೈಸರ್ಗಿಕ ಸೌಂದರ್ಯ ಹಾಗೂ ಪ್ರವಾಸಿ ತಾಣಗಳನ್ನು ದೇಶ-ವಿದೇಶಗಳ ಪ್ರವಾಸಿಗರಿಗೆ ಪರಿಚಯಿಸುವ ಉದ್ದೇಶದಿಂದ ಗೋಲ್ಡನ್ ಚಾರಿಯಟ್ ಐಷಾರಾಮಿ ಪ್ರವಾಸಿ ರೈಲು ಸೇವೆ ಮಹತ್ವ ಪಡೆದಿದೆ. ರಾಜ್ಯದ ಪ್ರವಾಸೋದ್ಯಮಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಮನ್ನಣೆ ತಂದುಕೊಡುವುದರ ಜೊತೆಗೆ, ಕರ್ನಾಟಕದ ಪ್ರವಾಸಿ ತಾಣಗಳನ್ನು ಜಾಗತಿಕ ಪ್ರವಾಸಿಗರಿಗೆ ಪರಿಚಯಿಸಲು ಈ ರೈಲು ಪ್ರಮುಖ ವೇದಿಕೆಯಾಗಿದೆ.

ಈ ಸಂದರ್ಭದಲ್ಲಿ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.







