ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ನವುಲೆ ಗ್ರಾಮದ 5 ಎಕರೆ ಜಮೀನಿನಲ್ಲಿ 160 ಕುಟುಂಬಗಳಿಗೆ ವಸತಿ ನಿರ್ಮಾಣಕ್ಕೆ ಅನುದಾನ ನೀಡಿ: ಸಚಿವ ಜಮೀರ್ ಅಹಮದ್ ಖಾನ್‌ಗೆ ಮನವಿ

On: November 12, 2026 8:05 PM
Follow Us:

ಶಿವಮೊಗ್ಗ: ನಗರದ ಬರ್ಮಪ್ಪ ನಗರದಲ್ಲಿ ವಾಸಿಸುತ್ತಿರುವ 160 ಕುಟುಂಬಗಳಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಶಿವಮೊಗ್ಗದ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ವತಿಯಿಂದ ರಾಜ್ಯದ ವಸತಿ ಸಚಿವ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ನಗರದ ಸರ್ವೆ ನಂ.55, ಸಿ.ಎಂ.ಸಿ. ಖಾತೆ ನಂ.389ಕ್ಕೆ ಸಂಬಂಧಿಸಿದ ಜಾಗದಲ್ಲಿ 160 ಕುಟುಂಬಗಳು ಅನಧಿಕೃತವಾಗಿ ವಾಸಿಸುತ್ತಿದ್ದು, ಈ ಕುಟುಂಬಗಳಿಗೆ ಪರ್ಯಾಯವಾಗಿ ವಸತಿ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ತಾಲ್ಲೂಕಿನ ನವುಲೆ ಗ್ರಾಮದ ಸರ್ವೆ ನಂ.72ರಲ್ಲಿ 5 ಎಕರೆ ಜಮೀನನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಮಂಜೂರು ಮಾಡಲಾಗಿದೆ. ಆದರೆ ಜಮೀನು ಮಂಜೂರಾಗಿ ಹಲವು ವರ್ಷಗಳು ಕಳೆದಿದ್ದರೂ, ಈವರೆಗೆ ಸದರಿ ಜಾಗದಲ್ಲಿ ವಸತಿ ನಿರ್ಮಾಣ ಕಾರ್ಯ ಆರಂಭವಾಗಿಲ್ಲ. ಅಲ್ಲದೆ, ಅಗತ್ಯ ಮೂಲಸೌಕರ್ಯಗಳನ್ನೂ ಕಲ್ಪಿಸಿಲ್ಲ.

ಈ ಹಿನ್ನೆಲೆಯಲ್ಲಿ ಬರ್ಮಪ್ಪ ನಗರದ ನಿವಾಸಿಗಳಿಗೆ ನವುಲೆ ಪ್ರದೇಶದಲ್ಲಿ ಸುಸಜ್ಜಿತ ವಸತಿ ಸಮುಚ್ಚಯ ನಿರ್ಮಿಸಿ ಪುನರ್ವಸತಿ ಕಲ್ಪಿಸುವಂತೆ ಸಂಘದ ಪದಾಧಿಕಾರಿಗಳು ಸಚಿವರಲ್ಲಿ ಒತ್ತಾಯಿಸಿದರು.

ನವುಲೆ ಗ್ರಾಮದ ಸರ್ವೆ ನಂ.72ರಲ್ಲಿ ಮಂಜೂರಾಗಿರುವ 5 ಎಕರೆ ಜಮೀನಿನಲ್ಲಿ 160 ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ವಸತಿ ನಿರ್ಮಾಣದ ಜೊತೆಗೆ ರಸ್ತೆ, ಕುಡಿಯುವ ನೀರು, ಒಳಚರಂಡಿ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಅರ್ಹ ಕುಟುಂಬಗಳನ್ನು ಗುರುತಿಸಿ ಯಾವುದೇ ಕುಟುಂಬಕ್ಕೂ ಅನ್ಯಾಯವಾಗದಂತೆ ಪುನರ್ವಸತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ಉಪಸ್ಥಿತರಿದ್ದು, ಪುನರ್ವಸತಿ ಸಮಸ್ಯೆಯ ಗಂಭೀರತೆಯನ್ನು ಸಚಿವರ ಗಮನಕ್ಕೆ ತಂದರು. ಸಮಾಜದ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿಪ್ರಕಾಶ್, ಗೌರವ ಕಾರ್ಯದರ್ಶಿ ಎಸ್.ಪಿ. ದಿನೇಶ್, ಖಜಾಂಚಿ ತಾರಾನಾಥ ಹಾಗೂ ಸಹ ಕಾರ್ಯದರ್ಶಿ ಬಳ್ಳೆಕೆರೆ ಸಂತೋಷ್ ಅವರು ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಸಂಘದ ಪದಾಧಿಕಾರಿಗಳು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ವಸತಿ ಸಚಿವ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರು ಸಮಸ್ಯೆಯ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದರು. 160 ಕುಟುಂಬಗಳಿಗೆ ಪರ್ಯಾಯ ವಸತಿ ಕಲ್ಪಿಸುವ ಅಗತ್ಯವನ್ನು ಪರಿಗಣಿಸಿ, ನವುಲೆಯಲ್ಲಿ ಮಂಜೂರಾಗಿರುವ 5 ಎಕರೆ ಜಮೀನಿನಲ್ಲಿ ವಸತಿ ನಿರ್ಮಾಣ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ನಾಳೆಯೊಳಗೆ ಸೂಕ್ತ ರೂಪುರೇಷೆ ಸಿದ್ಧಪಡಿಸುವುದಾಗಿ ಭರವಸೆ ನೀಡಿದರು ಎಂದು ಸಂಘದ ವತಿಯಿಂದ ತಿಳಿಸಲಾಗಿದೆ.

ವಸತಿ ಎಂಬುದು ಪ್ರತಿಯೊಂದು ಕುಟುಂಬದ ಮೂಲಭೂತ ಅವಶ್ಯಕತೆಯಾಗಿದೆ. ಹಲವು ವರ್ಷಗಳಿಂದ ಅನಿಶ್ಚಿತತೆಯಲ್ಲಿ ಜೀವನ ಸಾಗಿಸುತ್ತಿರುವ ಬರ್ಮಪ್ಪ ನಗರದ 160 ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸುವುದು ಸಂಘದ ಪ್ರಮುಖ ಉದ್ದೇಶವಾಗಿದೆ. ಈಗಾಗಲೇ ಸರ್ಕಾರದಿಂದ 5 ಎಕರೆ ಜಮೀನು ಮಂಜೂರಾಗಿರುವುದರಿಂದ, ಅಗತ್ಯ ಅನುದಾನ ಬಿಡುಗಡೆ ಮಾಡಿ ವಸತಿ ನಿರ್ಮಾಣಕ್ಕೆ ಚಾಲನೆ ನೀಡಿದರೆ ನೂರಾರು ಜನರ ಬದುಕಿನಲ್ಲಿ ಹೊಸ ಭರವಸೆ ಮೂಡಲಿದೆ.

ಸಮಾಜದ ಜನರ ಹಿತದೃಷ್ಟಿಯಿಂದ ಸಲ್ಲಿಸಿದ ಮನವಿಗೆ ತಕ್ಷಣ ಸ್ಪಂದಿಸಿ, ಸಮಸ್ಯೆ ಪರಿಹಾರಕ್ಕೆ ಮುಂದಾಗಿರುವ ವಸತಿ ಸಚಿವ ಬಿ. ಝಡ್. ಜಮೀರ್ ಅಹಮದ್ ಖಾನ್ ಅವರಿಗೆ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇದೀಗ ಸಚಿವರು ನೀಡಿರುವ ಭರವಸೆ ಕಾರ್ಯರೂಪಕ್ಕೆ ಬಂದು, ನವುಲೆಯಲ್ಲಿ 160 ಕುಟುಂಬಗಳಿಗೆ ಸುಸಜ್ಜಿತ ಮನೆಗಳು ನಿರ್ಮಾಣವಾಗಿ, ಅವರ ಬಹುದಿನಗಳ ವಸತಿ ಕನಸು ನನಸಾಗಬೇಕೆಂಬುದು ಸಂಘದ ಆಶಯವಾಗಿದೆ.

K.M.Sathish Gowda

Join WhatsApp

Join Now

Facebook

Join Now

Read more

ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಸ್ತೂರಿರಂಗನ್ ವರದಿ ಹಿಂಪಡೆಯಿರಿ; ಪ್ರಧಾನಿ ಮೋದಿ ಮುಂದೆ ರಾಜ್ಯದ ಮೂರು ಪ್ರಮುಖ ಬೇಡಿಕೆಗಳನ್ನಿಟ್ಟ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿಗೆ ದೆಹಲಿಯಷ್ಟೇ ಆದ್ಯತೆ ನೀಡಿ; ಮೆಟ್ರೋ ಆರ್ಥಿಕ ಹೊರೆ ಕೇಂದ್ರ-ರಾಜ್ಯ ಸಮಾನವಾಗಿ ಹಂಚಿಕೊಳ್ಳಲಿ: ಪ್ರಧಾನಿ ಮೋದಿ ಎದುರು ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರಿಗೆ ಮೋದಿ ಅಭಿವೃದ್ಧಿ ಪರ್ವ; ₹15,000 ಕೋಟಿಗೂ ಅಧಿಕ ಯೋಜನೆಗಳಿಗೆ ಚಾಲನೆ, ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆ

ಯೋಗ, ಆಧ್ಯಾತ್ಮ ಮತ್ತು ಭಾರತೀಯ ಜ್ಞಾನ ಪರಂಪರೆಯ ಜಾಗತಿಕ ಶಕ್ತಿಗೆ ಕರ್ನಾಟಕ ಸಾಕ್ಷಿ: ಪ್ರಧಾನಿ ನರೇಂದ್ರ ಮೋದಿ

ವಿಮಾನ ನಿಲ್ದಾಣ ಮುಚ್ಚುವ ಮಾತು ಬಿಟ್ಟು ಉಳಿಸುವ ಪ್ರಯತ್ನ ಮಾಡಿ; ಮೊದಲು ನಿಮ್ಮ ಕ್ಷೇತ್ರದ ಅಭಿವೃದ್ಧಿಯ ಲೆಕ್ಕ ಕೊಡಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರೇ! ಅಭಿವೃದ್ಧಿ ಮಾಡಲು ಸಾಧ್ಯವಾಗದಿದ್ದರೆ ಕನಿಷ್ಠ ಅಭಿವೃದ್ಧಿಗೆ ಅಡ್ಡಿಯಾಗಬೇಡಿ: ಹೆಚ್.ಆರ್. ತೀರ್ಥೇಶ್ ವಾಗ್ದಾಳಿ

ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನದ 9ನೇ ಅನುಸೂಚಿಯ ರಕ್ಷಣೆ: ಪ್ರಧಾನಿಗೆ ಪತ್ರ ಬರೆಯಲು ಸಿಎಂ ಡಿ.ಕೆ. ಶಿವಕುಮಾರ್ ನಿರ್ಧಾರ

Leave a Comment