ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಪೆಗಾಸಸ್ ಗೂಢಚರ್ಯೆ ವಿವಾದಕ್ಕೆ ಹೊಸ ತಿರುವು: ಬಿಜೆಪಿ ನಾಯಕರ ಫೋನ್‌ಗಳನ್ನೂ ಕೇಂದ್ರ ಸರ್ಕಾರ ಕದ್ದಾಲಿಸಿತ್ತು – ಪ್ರಿಯಾಂಕ್ ಖರ್ಗೆ ಆರೋಪ

On: November 16, 2026 3:51 PM
Follow Us:

ವಿಪಕ್ಷ ನಾಯಕರು ಹಾಗೂ ರಾಜಕೀಯ ಮುಖಂಡರ ಫೋನ್ ಕದ್ದಾಲಿಕೆ ಆರೋಪದ ನಡುವೆ ಇದೀಗ ಹೊಸ ರಾಜಕೀಯ ವಿವಾದ ಸೃಷ್ಟಿಯಾಗಿದೆ. ವಿಪಕ್ಷ ನಾಯಕರ ಮೇಲೆ ಪೆಗಾಸಸ್ (Pegasus) ತಂತ್ರಾಂಶ ಬಳಸಿ ನಿಗಾ ಇರಿಸುವುದಕ್ಕೂ ಮುನ್ನ ಬಿಜೆಪಿ ನಾಯಕರ ಫೋನ್‌ಗಳನ್ನೇ ಕೇಂದ್ರ ಸರ್ಕಾರ ಕದ್ದಾಲಿಸಿತ್ತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ರಾಹುಲ್ ಗಾಂಧಿ ಫೋನ್ ಕದ್ದಾಲಿಕೆ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಬೆಂಬಲ

ಬೆಂಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲ ವ್ಯಕ್ತಪಡಿಸಿದ್ದು, ಪೆಗಾಸಸ್ ವಿವಾದವನ್ನು ಪ್ರಸ್ತಾಪಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅವರು ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುವುದಿಲ್ಲ. ಅವರು ಆರೋಪ ಮಾಡಿದ್ದರೆ ಅದಕ್ಕೆ ಆಧಾರವಿರುತ್ತದೆ. ಈ ಹಿಂದೆಯೂ ಪೆಗಾಸಸ್ ವಿಚಾರ ದೇಶಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆಗ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಸಹೋದ್ಯೋಗಿಗಳ ಫೋನ್‌ಗಳ ಮೇಲೆಯೇ ಪೆಗಾಸಸ್ ಬಳಕೆಯಾಗಿತ್ತು ಎಂಬ ವರದಿಗಳು ಪ್ರಕಟವಾಗಿದ್ದವು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ತಮ್ಮದೇ ಸಂಪುಟದ ಸಹೋದ್ಯೋಗಿಗಳ ಮೇಲೆ ನಿಗಾ ಇಡಲು ಇಂತಹ ತಂತ್ರಾಂಶವನ್ನು ಬಳಸಿದ್ದರೆ, ವಿರೋಧ ಪಕ್ಷದ ನಾಯಕರ ಫೋನ್‌ಗಳ ಮೇಲೂ ನಿಗಾ ಇಡಲಾಗುತ್ತಿದೆಯೇ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ರಾಹುಲ್ ಗಾಂಧಿ ಅವರು ತಮ್ಮ ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿದಿದೆ ಎಂದು ಹೇಳಿದ್ದ ಅವರು, ತಮ್ಮೊಂದಿಗೆ ನೇರ ಚರ್ಚೆಗೆ ಬರುವಂತೆ ಪ್ರಧಾನಿಗೆ ಸವಾಲು ಹಾಕಿದ್ದರು.

ಇದಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿ ಅವರ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿಹಾಕಿದ್ದಾರೆ. ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

ಪೆಗಾಸಸ್ ಗೂಢಚರ್ಯೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಬೇಕೆಂಬ ಆಗ್ರಹವೂ ಕಾಂಗ್ರೆಸ್ ವಲಯದಿಂದ ಕೇಳಿಬಂದಿದೆ.

K.M.Sathish Gowda

Join WhatsApp

Join Now

Facebook

Join Now

Read more

ವೀರಶೈವ–ಲಿಂಗಾಯತ ಒಂದೇ ಧರ್ಮ, ಸಮಾಜವನ್ನು ಒಡೆಯುವುದಲ್ಲ; ಒಗ್ಗೂಡಿಸುವುದೇ ನಮ್ಮೆಲ್ಲರ ಸಂಕಲ್ಪವಾಗಲಿ: ಶಂಕರ್ ಮಹಾದೇವ ಬಿದರಿ

ಶಾಲಾ ಮಕ್ಕಳ ಮುಂದೆ ದ್ವೇಷದ ಭಾಷಣ: ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಸೂಚನೆ

ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಹೊರಟವರು ತಾವೇ ಮಸಿಯಾಗುತ್ತಾರೆ: ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿಗಳು

ಹತ್ತು ಲಕ್ಷ ಅಭಿಮಾನಿಗಳ ಸಂಭ್ರಮಕ್ಕೆ ಶ್ರೀ ತರಳಬಾಳು ಜಗದ್ಗುರುಗಳ ಸಾನ್ನಿಧ್ಯ; ‘ಧನ್ಯವಾದ ಕರ್ನಾಟಕ’ ವೇದಿಕೆಯಲ್ಲಿ ಜ್ಞಾನ–ವಿಜ್ಞಾನದ ಚಿಂತನಾಮೃತ

ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ನೂತನ ನಿರ್ದೇಶಕ ಎಚ್.ಪಿ. ಗಿರೀಶ್ ಅವರಿಗೆ ಗೌರವದ ಸನ್ಮಾನ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ ನೀರು ಹರಿಸುವ ನಿರ್ಧಾರ! ರೈತರ ಸತತ ಪ್ರಯತ್ನಕ್ಕೆ ಫಲ, ಭದ್ರಾ ನಾಲೆಗಳಿಗೆ ನೀರು ಬಿಡುಗಡೆ: ಹೆಚ್.ಆರ್. ಬಸವರಾಜಪ್ಪ

Leave a Comment