ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮಹಿಳಾ ಮೋರ್ಚಾ ಸಂಘಟನೆಯನ್ನು ಬಲಪಡಿಸಿ, ಭವಿಷ್ಯದ ನಾಯಕತ್ವಕ್ಕೆ ಸಿದ್ಧರಾಗಿ: ರೂಪಾಕುಮಾರಿ ಚೌಧರಿ

On: November 18, 2026 5:52 PM
Follow Us:

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾ ಸಂಘಟನೆಯನ್ನು ರಾಜ್ಯದಿಂದ ಮಂಡಲ ಮಟ್ಟದವರೆಗೆ ಮತ್ತಷ್ಟು ಬಲಪಡಿಸಿ, ಮಹಿಳೆಯರನ್ನು ರಾಜಕೀಯ ನಾಯಕತ್ವಕ್ಕೆ ಸಜ್ಜುಗೊಳಿಸುವಂತೆ ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಸಂಸದೆ ರೂಪಾಕುಮಾರಿ ಚೌಧರಿ ಕರೆ ನೀಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಆಯೋಜಿಸಿದ್ದ ರಾಜ್ಯ ಮಹಿಳಾ ಮೋರ್ಚಾದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಸಂಘಟನೆಯ ಕಾರ್ಯಚಟುವಟಿಕೆಗಳನ್ನು ವ್ಯವಸ್ಥಿತವಾಗಿ ರೂಪಿಸುವ ಮೂಲಕ ಮಹಿಳಾ ಮೋರ್ಚಾವನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಬೇಕು ಎಂದು ಸಲಹೆ ನೀಡಿದರು.

ಸಂಘಟನೆಯಲ್ಲಿ ನಿರಂತರ ಸಭೆ, ಸಮನ್ವಯ ಹಾಗೂ ಕಾರ್ಯಕರ್ತರೊಂದಿಗೆ ಸಂಪರ್ಕ ಅತ್ಯಗತ್ಯ. ಈ ನಿಟ್ಟಿನಲ್ಲಿ ಪ್ರತಿ ತಿಂಗಳ ಮೊದಲ ವಾರದಲ್ಲಿ ರಾಜ್ಯಮಟ್ಟದ ಸಭೆ, ಎರಡನೇ ವಾರದಲ್ಲಿ ಜಿಲ್ಲಾ ಮಟ್ಟದ ಸಭೆ ಹಾಗೂ ಮೂರನೇ ವಾರದಲ್ಲಿ ಮಂಡಲ ಮಟ್ಟದ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು. ನಾಲ್ಕನೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ಆಲಿಸಿದ ಬಳಿಕ ಸಭೆ ನಡೆಸಿ, ಸಂಘಟನೆಯ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಬೇಕು ಎಂದು ಸೂಚಿಸಿದರು.

ಮಹಿಳಾ ಮೀಸಲಾತಿ ಜಾರಿಯಾದ ಸಂದರ್ಭದಲ್ಲಿ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ದೊರೆಯಲಿದ್ದು, ಯಾರು ಸಂಸದ ಸ್ಥಾನಕ್ಕೆ ಹಾಗೂ ಯಾರು ಶಾಸಕ ಸ್ಥಾನಕ್ಕೆ ಸ್ಪರ್ಧಿಸಬೇಕು ಎಂಬುದರ ಕುರಿತು ಸೂಕ್ತ ಚರ್ಚೆ, ನಾಯಕತ್ವ ಗುರುತಿಸುವಿಕೆ ಮತ್ತು ಅಭ್ಯರ್ಥಿಗಳ ಸಿದ್ಧತೆಗೆ ಇಂತಹ ಸಂಘಟನಾ ಸಭೆಗಳು ವೇದಿಕೆಯಾಗಲಿವೆ ಎಂದು ಹೇಳಿದರು.

ಕರ್ನಾಟಕ ಬಿಜೆಪಿ ಮಹಿಳಾ ಮೋರ್ಚಾ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘಟನೆಯ ಕಾರ್ಯವೈಖರಿ ಮತ್ತು ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದೇ ಉತ್ಸಾಹವನ್ನು ಮುಂದುವರಿಸಿ ಮಹಿಳಾ ಶಕ್ತಿಯನ್ನು ಪಕ್ಷದ ಸಂಘಟನೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಕರೆ ನೀಡಿದರು.

ಸಭೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು.ಸಿ. ಮಂಜುಳಾ ಸೇರಿದಂತೆ ರಾಜ್ಯ ಮಹಿಳಾ ಮೋರ್ಚಾದ ಪ್ರಮುಖ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಏರ್‌ಪೋರ್ಟ್ ಸಂಪರ್ಕಕ್ಕೆ ಹೆಬ್ಬಾಳ ಮಾದರಿಯ ಹೊಸ ಫ್ಲೈಓವರ್ ನಿರ್ಮಾಣದ ಚಿಂತನೆ: ಸಿಎಂ ಡಿ.ಕೆ. ಶಿವಕುಮಾರ್

ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿ: ಅರವಣ ಪ್ರಸಾದಕ್ಕೆ ಕೊರತೆಯಿಲ್ಲ, ವೆಂಡಿಂಗ್ ಯಂತ್ರಗಳ ಮೂಲಕ ಸುಲಭ ವಿತರಣೆ

ಬೆಂಗಳೂರಿನ ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: 5 ಹೊಸ ಪೊಲೀಸ್ ಕಮಿಷನರೇಟ್‌ಗಳ ರಚನೆ, ಮುಖ್ಯ ಆಯುಕ್ತರಾಗಿ ಆರ್. ಹಿತೇಂದ್ರ ನೇಮಕ

ರೈತರ ಬಗ್ಗೆ ಮಾತನಾಡುವ ಮೊದಲು ನಿಮ್ಮ ಸಾಧನೆಗಳ ಪಟ್ಟಿ ಕೊಡಿ; ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಸಚಿವ ಮಧು ಬಂಗಾರಪ್ಪಗೆ ಸಂಸದ ಬಿ.ವೈ. ರಾಘವೇಂದ್ರ ತಿರುಗೇಟು

ಅಡಿಕೆ ತೋಟ ತೆರವು ಪ್ರಕರಣದಲ್ಲಿ ಬಿಜೆಪಿಯ ರಾಜಕೀಯ ಬಣ್ಣ ಬಯಲು: ಮಧು ಬಂಗಾರಪ್ಪ ವಾಗ್ದಾಳಿ

ಭದ್ರಾ ನೀರು ಹಂಚಿಕೆ ವಿವಾದಕ್ಕೆ ಕಾಂಗ್ರೆಸ್‌ನಲ್ಲಿ ಭಿನ್ನಮತದ ಬಿಸಿ; ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಾಂತನಗೌಡ ಸಜ್ಜು!

Leave a Comment