ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬೆಂಗಳೂರಿನಿಂದಾಚೆಗೂ ಕೈಗಾರಿಕಾ ಬೆಳವಣಿಗೆ; ಕರ್ನಾಟಕಕ್ಕೆ ಹೊಸ ಹೂಡಿಕೆ ಆಕರ್ಷಿಸುವ ಸಂಕಲ್ಪ: ಸಿಎಂ ಡಿ.ಕೆ. ಶಿವಕುಮಾರ್

On: November 23, 2026 2:02 PM
Follow Us:

ಮೊತೊಮಚಿ (ಜಪಾನ್), ನವೆಂಬರ್ 23: ಕರ್ನಾಟಕದಲ್ಲಿ ಹೊಸ ಹೂಡಿಕೆಗಳನ್ನು ಆಕರ್ಷಿಸುವುದರ ಜತೆಗೆ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೈಗಾರಿಕಾ ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳನ್ನು ವಿಸ್ತರಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ರಾಜ್ಯದಲ್ಲಿ ಕೈಗಾರಿಕಾ ಹೂಡಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಾಣಿಜ್ಯ ಸಚಿವ ಎಂ.ಬಿ. ಪಾಟೀಲ್ ಮತ್ತು ಅಧಿಕಾರಿಗಳ ನಿಯೋಗದೊಂದಿಗೆ ಜಪಾನ್‌ನ ಮೊತೊಮಚಿಯಲ್ಲಿರುವ ಟೊಯೊಟಾ ಮೋಟಾರ್ ಕಾರ್ಪೊರೇಷನ್‌ನ ಘಟಕಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಟೊಯೊಟಾ ಮೋಟಾರ್ ಕಾರ್ಪೊರೇಷನ್‌ನ ಪ್ರಮುಖರೊಂದಿಗೆ ಸಭೆ ನಡೆಸಿ, ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡುವ ಸಾಧ್ಯತೆಗಳು, ಕೈಗಾರಿಕಾ ಸಹಭಾಗಿತ್ವ, ತಂತ್ರಜ್ಞಾನ ವಿನಿಮಯ ಹಾಗೂ ಉದ್ಯೋಗ ಸೃಷ್ಟಿಯ ಕುರಿತು ಚರ್ಚಿಸಿದರು.

ಇದೇ ವೇಳೆ ಟೊಯೊಟಾದ ‘ಗ್ಲೋಬಲ್ ಸ್ಕಿಲ್-ಅಪ್’ (Global Skill-up) ಕಾರ್ಯಕ್ರಮದಡಿ ಜಪಾನ್‌ನಲ್ಲಿ ವಿಶೇಷ ತರಬೇತಿ ಪಡೆಯುತ್ತಿರುವ ಬಿಡದಿಯ ಟೊಯೊಟಾ ಘಟಕದ 20ಕ್ಕೂ ಹೆಚ್ಚು ಐಟಿಐ ಪ್ರಶಿಕ್ಷಣಾರ್ಥಿಗಳೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಿದರು.

ಪ್ರಶಿಕ್ಷಣಾರ್ಥಿಗಳಿಂದ ಜಪಾನ್‌ನಲ್ಲಿ ದೊರೆಯುತ್ತಿರುವ ತರಬೇತಿ, ಅಲ್ಲಿನ ತಾಂತ್ರಿಕ ವ್ಯವಸ್ಥೆ ಹಾಗೂ ಕಲಿಕೆಯ ಅನುಭವಗಳ ಕುರಿತು ಮಾಹಿತಿ ಪಡೆದರು. ವಿದೇಶದಲ್ಲಿ ದೊರೆತಿರುವ ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ತಾಂತ್ರಿಕ ಕೌಶಲ್ಯ, ವೃತ್ತಿಪರ ಪರಿಣತಿ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಬೇಕು. ತರಬೇತಿಯ ಮೂಲಕ ಗಳಿಸುವ ಜ್ಞಾನವನ್ನು ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ಯುವಕರಿಗೆ ಸಲಹೆ ನೀಡಿ ಪ್ರೋತ್ಸಾಹಿಸಿದರು.

ಕರ್ನಾಟಕಕ್ಕೆ ಹೊಸ ಹೂಡಿಕೆಗಳನ್ನು ಸೆಳೆಯುವುದು, ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಹಾಗೂ ವಿದೇಶಿ ನೇರ ಹೂಡಿಕೆ (FDI) ಆಕರ್ಷಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕದ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸುವುದು ಜಪಾನ್ ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ‘ಬಿಯಾಂಡ್ ಬೆಂಗಳೂರು’ ಯೋಜನೆಯ ಮೂಲಕ ಕೈಗಾರಿಕಾ ಅಭಿವೃದ್ಧಿ ಮತ್ತು ಹೂಡಿಕೆಗಳನ್ನು ರಾಜಧಾನಿ ಬೆಂಗಳೂರಿನಿಂದ ರಾಜ್ಯದ ಇತರ ಭಾಗಗಳಿಗೂ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಪ್ರಾದೇಶಿಕ ಅಸಮಾನತೆ ಕಡಿಮೆಯಾಗಿ, ಎಲ್ಲ ಜಿಲ್ಲೆಗಳಲ್ಲಿಯೂ ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಹೇಳಿದರು.

ಕೈಗಾರಿಕೆಗಳನ್ನು ಆಕರ್ಷಿಸುವುದಷ್ಟೇ ಸರ್ಕಾರದ ಉದ್ದೇಶವಲ್ಲ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿಯೂ ಆರ್ಥಿಕ ಅವಕಾಶಗಳನ್ನು ಸೃಷ್ಟಿಸಿ, ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸುವುದು ಹಾಗೂ ಆಯಾ ಭಾಗಗಳ ಸಂಪನ್ಮೂಲ ಮತ್ತು ಮಾನವ ಸಂಪನ್ಮೂಲವನ್ನು ಅಭಿವೃದ್ಧಿಗೆ ಬಳಸಿಕೊಳ್ಳುವುದು ಮುಖ್ಯವಾಗಿದೆ. ಬೆಂಗಳೂರಿನಾಚೆಗೂ ಹೂಡಿಕೆ ಮತ್ತು ಕೈಗಾರಿಕಾ ಬೆಳವಣಿಗೆ ವಿಸ್ತರಿಸುವ ಮೂಲಕ ಕರ್ನಾಟಕದ ಎಲ್ಲ ಪ್ರದೇಶಗಳನ್ನೂ ರಾಜ್ಯದ ಪ್ರಗತಿಯ ಪಾಲುದಾರರನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಡಾನ್ ಟೆಂಡರ್‌ನಲ್ಲಿ ಸ್ಥಾನ; ವಿಮಾನಯಾನ ಸೇವೆಗೆ ಹೊಸ ಭರವಸೆ! ಮೂರು ತಿಂಗಳ ಮಧ್ಯಂತರದಲ್ಲಿ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ವಿಜಿ‌ಎಫ್ ನೆರವಿಗೆ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯ

ಘೋಷಣೆಗಳ ಸರ್ಕಾರಕ್ಕೆ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಬಿಸಿ ಮುಟ್ಟಿಸಲಿದೆ; ಡಿ.ಕೆ. ಶಿವಕುಮಾರ್ ಆಡಳಿತದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಸಹಿಸಲಾಗದು; ಅವಹೇಳನಕಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಬೆಕ್ಕಿನಕಲ್ಮಠ ಶ್ರೀಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ₹350 ಕೋಟಿ ನೀಡಲು ಹಿಂದೇಟು; ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ಯಾಬಿನೆಟ್ ಭಾಗ್ಯ! ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಜಾತಿ, ಧರ್ಮದ ಗೋಡೆಗಳನ್ನು ಮೀರಿ ಮನುಷ್ಯತ್ವದ ಸಮಾಜ ನಿರ್ಮಾಣವೇ ಬಸವಣ್ಣನವರ ಆಶಯ; ಮಾತಿನಲ್ಲಿ ಬಸವತತ್ವವಲ್ಲ, ಬದುಕಿನಲ್ಲಿ ಬಸವತತ್ವ ಅಳವಡಿಸಿಕೊಳ್ಳಬೇಕು: ಕೆ.ಪಿ. ಶ್ರೀಪಾಲ್

ನೌಕರರ ಬೇಡಿಕೆಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಅಸ್ತು; ₹50 ಸಾವಿರ ಹಬ್ಬದ ಮುಂಗಡ ಘೋಷಣೆ, ಒಪಿಎಸ್-ಎನ್‌ಪಿಎಸ್ ಕುರಿತು ಮಹತ್ವದ ಭರವಸೆ

Leave a Comment