ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ವಶಕ್ಕೆ ಪಡೆಯುವಾಗ ಬೆಂಬಲಿಗರಿಂದ ಭಾರೀ ಹೈಡ್ರಾಮಾ

On: August 21, 2025 11:07 AM
Follow Us:

ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಇಂದು ಪೊಲೀಸರು ಆತನ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ. ಅವರ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆ ಅವರ ನಿವಾಸಕ್ಕೆ ಆಗಮಿಸಿದ ಪೊಲೀಸರು ವಶಕ್ಕೆ ಪಡೆದು ಅವರದ್ದೇ ಕಾರಿನಲ್ಲಿ ಕರೆದೊಯ್ದಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌  ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿರುವ ಕುರಿತು ದೂರು ಸಲ್ಲಿಸಲಾಗಿತ್ತು.

ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಆತನನ್ನು ವಶಕ್ಕೆ ಪಡೆಯಲು ಉಡುಪಿ ಪೊಲೀಸರ ತಂಡ ಉಜಿರೆಯ ತಿಮರೋಡಿಯಲ್ಲಿರುವ ಮಹೇಶ್‌ ಶೆಟ್ಟಿ ನಿವಾಸಕ್ಕೆ ಆಗಮಿಸಿತ್ತು. ಈ ವೇಳೆ ಅವರನ್ನು ಬಂಧಿಸದಂತೆ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಮಹೇಶ್‌ ಶೆಟ್ಟಿ ಪರ ಘೋಷಣೆ ಕೂಗಿ ಕೆಲ ಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಬಂಧನದ ವೇಳೆ ಮಹೇಶ್‌ ಶೆಟ್ಟಿ, ನನ್ನ ಜೀವಕ್ಕೆ ಏನಾದರೂ ಅಪಾಯ ಆದರೆ ಅದಕ್ಕೆ ರಾಜ್ಯ ಸರ್ಕಾರ ಮತ್ತು ಬಿಜೆಪಿಯೇ ಕಾರಣವಾಗುತ್ತದೆ. ನೊಟೀಸ್‌ ನೀಡದೇ ನನ್ನನ್ನು ಬಂಧಿಸಲಾಗುತ್ತಿದೆ. ಹೀಗೆ ಕರೆದೊಯ್ದು ನನ್ನನ್ನು ಏನು ಬೇಕಾದರೂ ಮಾಡುವ ಸಾಧ್ಯತೆ ಇದೆ ಎಂದು ಕೂಗಾಡಿದ್ದಾರೆ.

ಏನಿದು ಪ್ರಕರಣ?

ಆಗಸ್ಟ್‌ 16ರಂದು ಫೇಸ್‌ಬುಕ್‌ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್‌ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

K.M.Sathish Gowda

Join WhatsApp

Join Now

Facebook

Join Now

Read more

ಕೆಂಪೇಗೌಡರ ಆದರ್ಶ, ವಾಲ್ಮೀಕಿ ಮಹರ್ಷಿಗಳ ಮೌಲ್ಯಗಳು ಸಮಾಜಕ್ಕೆ ದಾರಿದೀಪ: ಬಿ.ವೈ. ರಾಘವೇಂದ್ರ

​ನಾಡಪ್ರಭುವಿನ ಕೊಡುಗೆ ಅಪ್ರತಿಮ ಎಂದ ವಿಜಯೇಂದ್ರ; ಕೆಂಪೇಗೌಡರ ಕೀರ್ತಿ ಜಗತ್ತಿಗೆ ಸಾರಿದ್ದು ಬಿ.ಎಸ್.ವೈ ಎಂದ ಅಶ್ವತ್ಥನಾರಾಯಣ್

ನಾಡಪ್ರಭು ಕೆಂಪೇಗೌಡರಿಗೆ ನಮ್ಮೂರ ಬಳಗದಿಂದ ಗೌರವ ನಮನ; ಅವರ ದೂರದೃಷ್ಟಿಯೇ ಬೆಂಗಳೂರಿನ ವೈಭವ, ಆದರ್ಶಗಳೇ ಇಂದಿನ ಸಮಾಜಕ್ಕೆ ದಾರಿದೀಪ: ಎಂ. ಶ್ರೀಕಾಂತ್

​ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ಶನಿವಾರದ ಅವಧಿಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ ಏಕರೂಪದ ಶಾಲಾ ಸಮಯ ಜಾರಿ

ಗ್ರಾಮೀಣ ಮಹಿಳೆಯರ ಬದುಕಿಗೆ ಆಸರೆಯಾದ ಪುಷ್ಪಗಿರಿ ಸಂಸ್ಥೆ: ಜೂನ್ 29ರಂದು ಶಿವಮೊಗ್ಗದಲ್ಲಿ ಬೃಹತ್ ಮಹಿಳಾ ಸಮಾವೇಶ ಹಾಗೂ ‘ವಿದ್ಯಾಚೇತನ’ ಪ್ರಶಸ್ತಿ ಪ್ರದಾನ

​ದುಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಒಗ್ಗಟ್ಟಿನ ಹೋರಾಟ; ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡುವುದಿಲ್ಲ: ಬಿ.ವೈ. ವಿಜಯೇಂದ್ರ

Leave a Comment