ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಧರ್ಮಸ್ಥಳ ಪ್ರಕರಣ: ಅನಾಮಿಕ ಚಿನ್ನಯ್ಯ ಬಂಧನ

On: August 23, 2025 10:37 AM
Follow Us:

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಸುಳ್ಳು ದೂರು ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಸಿಎನ್‌ ಚಿನ್ನಯ್ಯ ಬಂಧಿಸಿದ್ದಾರೆ.

ಸಾಕ್ಷಿ ಸಂರಕ್ಷಣಾ ಯೋಜನೆಯಡಿ ರಕ್ಷಣೆ ಪಡೆದಿದ್ದ ಅನಾಮಿಕ ದೂರುದಾರನನ್ನು ಎಸ್‌ಐಟಿ ಬಂಧಿಸಿದೆ. ದೂರಿನಲ್ಲಿ ಸುಳ್ಳು ಮಾಹಿತಿ ಮತ್ತು ತನಿಖೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಾಗಿದೆ. ಸಮಾಧಿ ಸ್ಥಳಗಳಲ್ಲಿ ಅಸ್ತಿಪಂಜರಗಳು ಪತ್ತೆಯಾಗಿಲ್ಲ. ಬಂಧಿತನ ವಿಚಾರಣೆ ಮುಂದುವರೆದಿದೆ.

ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ವಿಷಯದ ಕುರಿತು ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದಾರೆ. ತಲೆಬುರುಡೆ ತಂದ ಈ ಪ್ರಕರಣದಲ್ಲಿ ಸಾಕ್ಷಿ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅವನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಇಂದು ಬೆಳ್ತಂಗಡಿ ಕೋರ್ಟ್‌ಗೆ ಮಾಸ್ಕ್‌ಮ್ಯಾನ್‌ನ್ನು ಹಾಜರುಪಡಿಸಲಿದ್ದರೆ. ಅದಕ್ಕೂ ಮುನ್ನ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಬಳಿಕ ಕೋರ್ಟ್ ಮುಂದೆ ಅವನನ್ನು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಸಲ್ಲಿಸಲಿದೆ.

ಎಸ್‌ಐಟಿ ತನಿಖೆ ಇನ್ನಷ್ಟು ಆಳಕ್ಕೆ ಮುಂದುವರಿಯುವ ಸಾಧ್ಯತೆ ಇದೆ.

K.M.Sathish Gowda

Join WhatsApp

Join Now

Facebook

Join Now

Leave a Comment