ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಧರ್ಮಸ್ಥಳದ ವಿರುದ್ಧ ನಡೆದ ಷಡ್ಯಂತ್ರ ಬಯಲು: ಬಿ.ವೈ.ವಿಜಯೇಂದ್ರ ವಾಗ್ದಾಳಿ

On: August 23, 2025 1:46 PM
Follow Us:

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ನಡೆದಿದೆ ಎಂಬ ನಮ್ಮ ಮಾತು ಇದೀಗ ಸತ್ಯವಾಗಿದೆ. ಧರ್ಮಸ್ಥಳದ ಪವಿತ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಕಪೋಲ ಕಲ್ಪಿತ ದೂರು ಸಲ್ಲಿಸಿದ್ದ ದೂರುದಾರ ಮುಸುಕುಧಾರಿಯ ಬಂಧನವೇ ಇದಕ್ಕೆ ಸಾಕ್ಷಿಯಾಗಿದೆ.

ಈತನ ಹಿಂದೆ ಕೆಲಸ ಮಾಡಿದ ಶಕ್ತಿಗಳು ಯಾವವು? ಷಡ್ಯಂತ್ರ ರೂಪಿಸಿದ ವಿಕೃತಿಗಳು ಯಾರು? ಇವರ ಮುಖವಾಡಗಳು ಬಯಲಾಗಬೇಕಿದೆ. ರಾಜ್ಯ ಹಾಗೂ ದೇಶದಾದ್ಯಂತ ಗೌರವಿಸಲ್ಪಟ್ಟಿರುವ ಈ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ಅಪವಿತ್ರಗೊಳಿಸಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗಿದೆ.

ಈ ಸುಳ್ಳು ಪ್ರಚಾರ ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಸಾರವಾದ ಹಿನ್ನೆಲೆಯಲ್ಲಿ, ಇದರ ಹಿಂದೆ ವಿದೇಶಿ ಶಕ್ತಿಗಳ ಕೈವಾಡವಿರುವ ಸಾಧ್ಯತೆ ತಳ್ಳಿಹಾಕಲಾಗದು. ಆದ್ದರಿಂದ ಈ ಪ್ರಕರಣವನ್ನು ಧರ್ಮಸ್ಥಳದ ವಿರುದ್ಧ ನಡೆದ ಒಂದು ಘಟನೆ ಎಂದೇ ಸೀಮಿತಗೊಳಿಸದೆ, ಇದು ಭಾರತೀಯರ ಭಾವನೆಗಳು ಹಾಗೂ ಸಂಸ್ಕೃತಿಯ ಮೇಲೆ ನಡೆದ ಪಿತೂರಿ ಎಂದು ಪರಿಗಣಿಸಬೇಕಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಎಡಪಂಥೀಯರ ಒತ್ತಡಕ್ಕೆ ಮಣಿದು ಹೇಗೆ ಎಸ್‌ಐಟಿ ರಚಿಸಿ ತನಿಖೆ ನಡೆಸಿತೋ, ಅದೇ ರೀತಿಯಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಿದವರನ್ನೂ ಪತ್ತೆಹಚ್ಚಿ, ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment