ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕರ್ನಾಟಕ ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಹೈಕಮ್ಯಾಂಡ್ ಒಪ್ಪಿಗೆ

On: August 25, 2025 11:09 PM
Follow Us:

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ಗೆ ನಾಲ್ವರನ್ನು ನಾಮನಿರ್ದೇಶನ ಮಾಡುವಂತೆ ಕಾಂಗ್ರೆಸ್ ಹೈಕಮ್ಯಾಂಡ್ ಅಂತಿಮ ಅನುಮೋದನೆ ನೀಡಿದೆ. ಹಲವು ದಿನಗಳಿಂದ ನಡೆದ ಹಗ್ಗಜಗ್ಗಾಟಕ್ಕೆ ತೆರೆ ಬೀಳುತ್ತಾ, ಜಕ್ಕಪ್ಪ, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ಅವರಿಗೆ ಸ್ಥಾನ ಸಿಕ್ಕಿದೆ.

ಹೈಕಮ್ಯಾಂಡ್ ಕೋಟಾದಿಂದ: ಹುಬ್ಬಳ್ಳಿ–ಧಾರವಾಡದ ದಲಿತ ಮುಖಂಡ ಜಕ್ಕಪ್ಪ ಹಾಗೂ ಶೃಂಗೇರಿ ಮೂಲದ ಆರತಿ ಕೃಷ್ಣ

ಸಿಎಂ ಕೋಟಾದಿಂದ: ಕಾಂಗ್ರೆಸ್ ಮಾಧ್ಯಮ ವಕ್ತಾರ ರಮೇಶ್ ಬಾಬು ಮತ್ತು ಮೈಸೂರಿನ ಹಿರಿಯ ಪತ್ರಕರ್ತ ಶಿವಕುಮಾರ್

ಆಯ್ಕೆಯಾದವರ ಪರಿಚಯ

 ಜಕ್ಕಪ್ಪ: ಕಾಂಗ್ರೆಸ್‌ನ ದಲಿತ ಮುಖಂಡ, ಸಮಾಜ ಸೇವೆಯಲ್ಲಿ ಸಕ್ರಿಯರು.

 ಆರತಿ ಕೃಷ್ಣ: ಒಕ್ಕಲಿಗ ಸಮುದಾಯದವರು, ಮಾಜಿ ಸಚಿವ ಬೇಗಾನೆ ರಾಮಯ್ಯ ಅವರ ಮಗಳು, ಪ್ರಸ್ತುತ ಎನ್‌ಆರ್‌ಐ ಸೆಲ್ ಉಪಾಧ್ಯಕ್ಷೆ.

ರಮೇಶ್ ಬಾಬು: ವೃತ್ತಿಯಲ್ಲಿ ವಕೀಲರು, ಒಬಿಸಿ ಸಮುದಾಯದವರು. ಹಿಂದೆ ಜೆಡಿಎಸ್ ಪಕ್ಷದಿಂದ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾಗಿದ್ದರು. ನಂತರ ಕಾಂಗ್ರೆಸ್ ಸೇರ್ಪಡೆಯಾದವರು, ಪ್ರಸ್ತುತ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರು.

ಶಿವಕುಮಾರ್: ದಲಿತ ಬಲಗೈ ಸಮುದಾಯದ ಹಿರಿಯ ಪತ್ರಕರ್ತ, ಮೈಸೂರಿನಲ್ಲಿ ಇಂಗ್ಲಿಷ್ ದಿನಪತ್ರಿಕೆಯಲ್ಲಿ ಸೇವೆ.

ಸ್ಥಾನ ಸಿಗದವರು

ಹಿಂದಿನ ಪಟ್ಟಿ ಪ್ರಕಾರ ದಲಿತ ಹೋರಾಟಗಾರ ಡಿ.ಜಿ. ಸಾಗರ್ ಮತ್ತು ಹಿರಿಯ ಪತ್ರಕರ್ತ ದಿನೇಶ್ ಅಮೀನುಮಟ್ಟು ಹೆಸರುಗಳಿದ್ದರೂ, ಆ ಪಟ್ಟಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಡೆಹಿಡಿಯಲ್ಪಟ್ಟಿತು. ಅಂತಿಮವಾಗಿ ಅವರಿಗೆ ಅವಕಾಶ ಸಿಗದೆ, ಜಕ್ಕಪ್ಪ ಮತ್ತು ಶಿವಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ.

ಈ ನಿರ್ಣಯದೊಂದಿಗೆ ಕಾಂಗ್ರೆಸ್ ಹೈಕಮ್ಯಾಂಡ್ ಹಾಗೂ ಸಿಎಂ ಶಿಫಾರಸ್ಸಿನ ನಾಲ್ವರ ಹೆಸರುಗಳೂ ಸ್ಪಷ್ಟಗೊಂಡಿವೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment