ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಹಿಂದೂ ಮಹಾಸಭಾ ಗಣೇಶ – ಈದ್ ಮಿಲಾದ್ ಮೆರವಣಿಗೆ: ಪೊಲೀಸ್‌ ಅಧಿಕಾರಿಗಳಿಗೆ ಎಡಿಜಿಪಿ ಹಿತೇಂದ್ರ ಎಚ್ಚರಿಕೆ

On: September 2, 2025 4:40 PM
Follow Us:

ಶಿವಮೊಗ್ಗ: ಗಣೇಶ ಮೂರ್ತಿಗಳ ವಿಸರ್ಜನೆ ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆಗಳ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲು ರಾಜ್ಯ ಪೊಲೀಸ್ ಇಲಾಖೆಯ ಕಾನೂನು-ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಆರ್. ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಸೆಪ್ಟೆಂಬರ್ 1ರ ಸಂಜೆ, ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆಯೋಜಿಸಲಾದ ವಿಮರ್ಶಾ ಸಭೆಯಲ್ಲಿ ಅವರು ಮಾತನಾಡಿ, “ಬಂದೋಬಸ್ತ್ ಕರ್ತವ್ಯವನ್ನು ನಿರ್ಲಕ್ಷ್ಯದಿಂದ ಮಾಡಬಾರದು. ಪ್ರತಿಯೊಬ್ಬ ಅಧಿಕಾರಿಯೂ ತಮಗೆ ನೀಡಲಾದ ಜವಾಬ್ದಾರಿಯನ್ನು ನಿಷ್ಠೆಯಿಂದ, ನಿಯಮಾನುಸಾರ ಹಾಗೂ ಕಾನೂನುಬದ್ಧವಾಗಿ ನಿರ್ವಹಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು” ಎಂದು ಖಡಕ್ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಎಡಿಜಿಪಿ ಹಿತೇಂದ್ರ ನೀಡಿದ ಮುಖ್ಯ ಸೂಚನೆಗಳು

ವಿಸರ್ಜನೆ ಹಾಗೂ ಮೆರವಣಿಗೆಗಳಲ್ಲಿ ಎಚ್ಚರಿಕೆ ಅಗತ್ಯ

ಈಗಾಗಲೇ 5 ದಿನಗಳ ಗಣೇಶ ಮೂರ್ತಿಗಳ ವಿಸರ್ಜನೆ ಪ್ರಕ್ರಿಯೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

ಮುಂದಿನ ದಿನಗಳಲ್ಲಿ ಭದ್ರಾವತಿ, ಶಿವಮೊಗ್ಗ, ರಿಪ್ಪನ್ ಪೇಟೆ ಹಾಗೂ ಸಾಗರದ ಹಿಂದೂ ಮಹಾಸಭಾ ಗಣಪತಿ ಮೂರ್ತಿಗಳ ವಿಸರ್ಜನಾ ಮೆರವಣಿಗೆಗಳು ನಡೆಯಲಿವೆ.

ಈ ಮೆರವಣಿಗೆಗಳು ಹೆಚ್ಚಿನ ಜನಸಮೂಹವನ್ನು ಸೆಳೆಯುವ ಹಿನ್ನೆಲೆಯಲ್ಲಿ, ಪ್ರತಿಯೊಂದು ಹಂತದಲ್ಲಿಯೂ ಕಟ್ಟುನಿಟ್ಟಿನ ಬಂದೋಬಸ್ತ್ ಅಗತ್ಯವಿದೆ.

ಸ್ಥಳೀಯ ಹಾಗೂ ಹೊರಜಿಲ್ಲೆ ಅಧಿಕಾರಿಗಳ ಜವಾಬ್ದಾರಿ

ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ತಮ್ಮ ಸೆಕ್ಟರ್ ವ್ಯಾಪ್ತಿಯಲ್ಲೇ ನಿರಂತರವಾಗಿ ಕಾರ್ಯನಿರ್ವಹಿಸಬೇಕು.

ಯಾವುದೇ ಕಾರಣಕ್ಕೂ ಕರ್ತವ್ಯದ ಸ್ಥಳವನ್ನು ಬಿಟ್ಟು ಹೊರಡುವಂತಿಲ್ಲ.

ಸ್ಥಳೀಯ ಅಧಿಕಾರಿಗಳೂ ಸಹ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

ಮುಂಜಾಗ್ರತಾ ಕ್ರಮಗಳು

ಬೈಲೈನ್ ಪೆಟ್ರೋಲಿಂಗ್ ಹೆಚ್ಚಿಸಬೇಕು.

ಮೆರವಣಿಗೆಗಳ ವೇಳೆ ಘೋಷಣೆಗಳನ್ನು ಕೂಗುವವರ ಮೇಲೆ ಹೆಚ್ಚಿನ ನಿಗಾವಹಿಸಬೇಕು.

ಪ್ರಮುಖ ಸ್ಥಳಗಳಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ನಿಗಾದ್ದಳ ವಹಿಸಬೇಕು.

ರಾತ್ರಿ ಹೊತ್ತಿನ ಮೆರವಣಿಗೆಗಳಲ್ಲಿ ವಿಶೇಷ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು.

ಶಬ್ದ ನಿಯಂತ್ರಣ ಕುರಿತು ಕಟ್ಟುನಿಟ್ಟಿನ ಕ್ರಮ

ಸುಪ್ರೀಂ ಕೋರ್ಟ್ ಆದೇಶದಂತೆ, ಮೆರವಣಿಗೆಯಲ್ಲಿ 75 ಡೆಸಿಬೆಲ್ ಗಿಂತ ಹೆಚ್ಚು ಶಬ್ದ ಮಾಡುವವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು.

ಧ್ವನಿವರ್ಧಕಗಳ ಅತಿಯಾದ ಬಳಕೆಯನ್ನು ತಡೆಗಟ್ಟಬೇಕು.

ಸಭೆಯಲ್ಲಿ ಹಾಜರಿದ್ದವರು

ಸಭೆಯಲ್ಲಿ ಪೂರ್ವ ವಲಯ ಐಜಿಪಿ ಡಾ. ರವಿಕಾಂತೇ ಗೌಡ, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ.ಕೆ, ಬಿಎಂಟಿಎಫ್ ಪೊಲೀಸ್ ಅಧೀಕ್ಷಕ ಮುತ್ತುರಾಜ್, ಹುಬ್ಬಳ್ಳಿಯ ಐಎಸ್’ಡಿ ವಿಭಾಗದ ರಾಜೀವ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ.ಜಿ ಹಾಗೂ ಎಸ್. ರಮೇಶ್ ಕುಮಾರ್, ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ಅಂತ್ಯದಲ್ಲಿ ಎಡಿಜಿಪಿ ಹಿತೇಂದ್ರ ಆರ್. ಅವರು ಮತ್ತೊಮ್ಮೆ ಅಧಿಕಾರಿಗಳಿಗೆ ಖಡಕ್ ಸಂದೇಶ ನೀಡಿದರು:
“ಬಂದೋಬಸ್ತ್ ಕರ್ತವ್ಯದಲ್ಲಿ ಅಜಾಗರೂಕತೆ ತೋರಿದರೆ, ಯಾರ ಮೇಲಾದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಜನರ ಜೀವ-ಆಸ್ತಿಪಾಸ್ತಿಗಳ ರಕ್ಷಣೆ ನಮ್ಮ ಮೊದಲ ಆದ್ಯತೆ. ಶಾಂತಿ-ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯ ಧರ್ಮ” ಎಂದು ತೀವ್ರ ಎಚ್ಚರಿಕೆ ನೀಡಿದರು.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment