ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸ್ಪಂದನೆ: ಬೆಂಬಲ ಬೆಲೆಯಲ್ಲಿ ಐದು ಪ್ರಮುಖ ಧಾನ್ಯ ಖರೀದಿ

On: September 20, 2025 6:16 PM
Follow Us:

ದೆಹಲಿ, ಸೆಪ್ಟೆಂಬರ್ 20, 2025: ಕರ್ನಾಟಕದ ರೈತರು 2025-26ನೇ ಸಾಲಿನ ಮುಂಗಾರದಲ್ಲಿ ಅತಿವೃಷ್ಟಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ರಾಜ್ಯದಲ್ಲಿ ಬೆಳೆಯಲ್ಪಟ್ಟ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ (ಶೇಂಗಾ), ಸೋಯಾಬಿನ್ ಮತ್ತು ಸೂರ್ಯಕಾಂತಿ ಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ.

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದ ರೈತ ಸಮಸ್ಯೆಗೆ ತಕ್ಷಣ ಸ್ಪಂದಿಸಿ, ಸರ್ಕಾರಕ್ಕೆ ಧಾನ್ಯ ಖರೀದಿ ಕ್ರಮವನ್ನು ತಕ್ಷಣ ಆರಂಭಿಸಲು ಸೂಚಿಸಿದ್ದಾರೆ. ಈ ಯೋಜನೆಯಡಿ:

  • ಹೆಸರು ಕಾಳು: 38,000 ಮೆಟ್ರಿಕ್ ಟನ್
  • ಉದ್ದು: 60,810 ಮೆಟ್ರಿಕ್ ಟನ್
  • ಕಡಲೆಬೀಜ: 61,148 ಮೆಟ್ರಿಕ್ ಟನ್
  • ಸೋಯಾಬಿನ್: 1,15,000 ಮೆಟ್ರಿಕ್ ಟನ್
  • ಸೂರ್ಯಕಾಂತಿ: 15,650 ಮೆಟ್ರಿಕ್ ಟನ್

ತ್ವರಿತವಾಗಿ ತೆರೆಯಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಕೇಂದ್ರದ ನಿರ್ಧಾರಕ್ಕೆ ಕರ್ನಾಟಕದ ರೈತರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವೆ ಶಿವರಾಜ್ ಸಿಂಗ್ ಚೌಹಾಣ್ ಅವರು ತಕ್ಷಣ ಸ್ಪಂದಿಸಿ, ರಾಜ್ಯದ ರೈತರ ನೆರವಿಗೆ ಮುಂದಾಗಿದ್ದು, ಈ ಕ್ರಮವು ರೈತರ ಸಂಕಷ್ಟವನ್ನು ತಕ್ಷಣ ಕಡಿಮೆ ಮಾಡಲು ಸಹಾಯ ಮಾಡಲಿದೆ. ಸಚಿವ ಜೋಶಿ ಅವರು ಕೇಂದ್ರದ ಈ ತ್ವರಿತ ನೆರವಿಗೆ ರಾಜ್ಯದ ರೈತರ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

ಈ ನಿರ್ಧಾರವು ಅತಿವೃಷ್ಟಿಯಿಂದ ಸಂಕಷ್ಟದಲ್ಲಿ ಸಿಲುಕಿದ ರೈತರಿಗೆ ನವರಾತ್ರಿ ಉಡುಗೊರೆ ಎಂಬಂತೆ ಮಹತ್ವದ ನೆರವಿನ ಸಮಾನವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಿಂದ ರೈತರಿಗೆ ತಕ್ಷಣ ನೆರವು ದೊರಕಲಿದೆ ಎಂಬ ನಿರೀಕ್ಷೆ ಇದೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment