ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮಕ್ಕಳ ಸಾವು ಪ್ರಕರಣದ ಬಳಿಕ ರಾಜ್ಯದಲ್ಲಿ ಕಾಫ್‌ ಸಿರಪ್‌ಗಳ ಮೇಲೂ ಅಲರ್ಟ್‌

On: October 5, 2025 2:37 PM
Follow Us:

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವನೆಯಿಂದ 12 ಮಕ್ಕಳ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಆರೋಗ್ಯ ಇಲಾಖೆ ಎಚ್ಚರಗೊಂಡಿದೆ. ರಾಜ್ಯದಾದ್ಯಂತ ವಿವಿಧ ಬ್ರ್ಯಾಂಡ್‌ಗಳ ಕಾಫ್‌ ಸಿರಪ್‌ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸುವ ಕಾರ್ಯ ಆರಂಭವಾಗಿದೆ.

ಔಷಧ ನಿಯಂತ್ರಣ ಮತ್ತು ಸರಬರಾಜು ಇಲಾಖೆ ರಾಜ್ಯದ ಫಾರ್ಮಸಿ ಹಾಗೂ ಔಷಧ ಕಂಪನಿಗಳಿಂದ ಮಾದರಿ ಕಲೆಹಾಕುತ್ತಿದ್ದು, ತಪಾಸಣೆ ವರದಿ ಬರುವವರೆಗೆ ಕಠಿಣ ನಿಗಾವಹಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹಾಗೂ ರಾಜ್ಯ ಆರೋಗ್ಯ ಇಲಾಖೆ ಸಂಯುಕ್ತವಾಗಿ ಮಾರ್ಗಸೂಚಿ ಹೊರಡಿಸಿದ್ದು, ವೈದ್ಯರ ಸಲಹೆ ಇಲ್ಲದೇ ಮಕ್ಕಳಿಗೆ ಯಾವುದೇ ಕಾಫ್‌ ಸಿರಪ್‌ ನೀಡಬಾರದು ಎಂದು ಪೋಷಕರಿಗೆ ಎಚ್ಚರಿಕೆ ನೀಡಲಾಗಿದೆ.

ಪೋಷಕರಿಗೆ ಎಚ್ಚರಿಕೆ ಮತ್ತು ಸಲಹೆ

ಆರೋಗ್ಯ ಇಲಾಖೆ ಪೋಷಕರಿಗೆ ಎಚ್ಚರಿಕೆ ನೀಡಿದ್ದು,ಲ ವೈದ್ಯರ ಸಲಹೆ ಇಲ್ಲದೇ ಯಾವುದೇ ಕಾಫ್‌ ಸಿರಪ್‌ಗಳನ್ನು ಮಕ್ಕಳಿಗೆ ನೀಡಬಾರದು. ಸಾಮಾನ್ಯ ಕೆಮ್ಮು ಅಥವಾ ಜ್ವರದ ಸಂದರ್ಭದಲ್ಲೂ ಸ್ವಯಂ ಔಷಧೋಪಚಾರದಿಂದ ದೂರವಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇವಲ ವೈದ್ಯರ ಪ್ರಿಸ್ಕ್ರಿಪ್ಷನ್‌ ಮೇರೆಗೆ ಮಾತ್ರ ಔಷಧಿ ನೀಡುವುದು ಸುರಕ್ಷಿತ ಎಂದು ಇಲಾಖೆ ಮನವಿ ಮಾಡಿದೆ. ಔಷಧಿಗಳ ಪ್ಯಾಕ್‌ ದಿನಾಂಕ, ಕಂಪನಿ ವಿವರ ಹಾಗೂ ಲಾಟ್‌ ನಂಬರ್‌ ಪರಿಶೀಲಿಸುವ ಅಭ್ಯಾಸ ಪೋಷಕರಲ್ಲಿ ಇರಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಸದ್ಯ ರಾಜ್ಯದಲ್ಲಿ ‘ಕೋಲ್ಡ್ರಿಫ್’ ಸಿರಪ್‌ ಸರಬರಾಜು ನಿಲ್ಲಿಸಲಾಗಿದೆ. ತಮಿಳುನಾಡಿನಲ್ಲಿ ಮಾತ್ರ ಈ ಸಿರಪ್‌ ಪೂರೈಕೆ ಮುಂದುವರಿದಿದ್ದು, ಇತರ ಕಂಪನಿಗಳ ಉತ್ಪನ್ನಗಳ ಮೇಲೂ ಕಣ್ಣಿಟ್ಟಿದೆ. ಪೋಷಕರು ವೈದ್ಯರ ಸಲಹೆಯ ಮೇರೆಗೆ ಮಾತ್ರ ಔಷಧಿ ಬಳಸಬೇಕು ಎಂದು ಅಧಿಕಾರಿಗಳು ವಿನಂತಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment