ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸೇರಿದಂತೆ ಖಾಸಗಿ ಸಂಘಗಳ ಚಟುವಟಿಕೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

On: October 28, 2025 2:04 PM
Follow Us:

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಗಳು ಅಥವಾ ಸಂಸ್ಥೆಗಳು ಯಾವುದೇ ಕಾರ್ಯಕ್ರಮ, ಮೆರವಣಿಗೆ ಅಥವಾ ಪಥಸಂಚಲನ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಈ ತೀರ್ಪು ನೀಡಿದ್ದು, “ಸಂವಿಧಾನ ನೀಡಿರುವ ಮೂಲಭೂತ ಹಕ್ಕನ್ನು ಸರ್ಕಾರದ ಒಂದು ಆದೇಶದ ಮೂಲಕ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಆದೇಶವು ಮೇಲ್ನೋಟಕ್ಕೆ ಕಾನೂನು ಬಾಹಿರವಾಗಿದೆ” ಎಂದು ಸ್ಪಷ್ಟಪಡಿಸಿದೆ.

ಈ ಹಿನ್ನೆಲೆಯಲ್ಲಿ ಚಿತ್ತಾಪುರ ಸೇರಿದಂತೆ ರಾಜ್ಯದಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಡೆಸಲು ಉದ್ದೇಶಿಸಿದ್ದ ಪಥಸಂಚಲನಗಳಿಗೆ ಉಂಟಾಗಿದ್ದ ತಡೆ ತೆರವಾಗಿದೆ.

ಪ್ರಕರಣದ ಹಿನ್ನೆಲೆ

2013ರ ಬಿಜೆಪಿ ಸರ್ಕಾರದ ಕಾಲದಲ್ಲೇ ಖಾಸಗಿ ಸಂಘಗಳು ಸರ್ಕಾರಿ ಸ್ಥಳ ಬಳಸಲು ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವಿತ್ತು. ಇದೇ ನಿಯಮವನ್ನು ಆಧಾರವಿಟ್ಟು ಪ್ರಸ್ತುತ ಸರ್ಕಾರ ಹೊಸ ಆದೇಶ ಹೊರಡಿಸಿತ್ತು. ಈ ನಿರ್ಧಾರಕ್ಕೆ ಮುನ್ನ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಗ್ರಹ ಹೇರುವಂತೆ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದರು.

ನಂತರ, ಈ ಆದೇಶವನ್ನು ಮುಂದಿಟ್ಟುಕೊಂಡು ಚಿತ್ತಾಪುರದಲ್ಲಿ ನಡೆಯಬೇಕಿದ್ದ ಆರ್‌ಎಸ್‌ಎಸ್ ಪಥಸಂಚಲನವನ್ನು ನಿರ್ಬಂಧಿಸಲಾಯಿತು. ಇದಕ್ಕೆ ವಿರುದ್ಧವಾಗಿ ಹುಬ್ಬಳ್ಳಿಯ ಪುನಃಶ್ಚೇತನ ಸೇವಾ ಸಂಸ್ಥೆ (NGO) ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿತು.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿ, “ಸರ್ಕಾರ 10 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ. ಇದು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) (ಸ್ವಾತಂತ್ರ್ಯ ಮತ್ತು ಸಭೆ ಸೇರುವ ಹಕ್ಕು) ಉಲ್ಲಂಘನೆ. ಸರ್ಕಾರದ ಆದೇಶ ಕಾನೂನುಬಾಹಿರ” ಎಂದು ವಾದಿಸಿದರು.

ಹೈಕೋರ್ಟ್ ಈ ವಾದವನ್ನು ಅಂಗೀಕರಿಸಿ, ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಸರ್ಕಾರದ ಪರ ವಕೀಲರು ವಾದ ಮಂಡಿಸಲು ಒಂದು ದಿನದ ಕಾಲಾವಕಾಶ ಕೇಳಿದ್ದಾರೆ.

ಸರ್ಕಾರದ ಆದೇಶದ ಅಂಶಗಳು

ಯಾವುದೇ ಖಾಸಗಿ ಸಂಘ, ಸಂಸ್ಥೆ ಅಥವಾ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಕಡ್ಡಾಯ.

ಸರ್ಕಾರಿ/ನಿಗಮ/ಮಂಡಳಿ/ಶಾಲೆ-ಕಾಲೇಜುಗಳು, ಉದ್ಯಾನ, ಮೈದಾನ, ಸಾರ್ವಜನಿಕ ರಸ್ತೆ, ಕೆರೆ ಅಥವಾ ಇತರ ಸರ್ಕಾರಿ ಆಸ್ತಿಗಳನ್ನು ಬಳಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಅಗತ್ಯ.

10ಕ್ಕಿಂತ ಹೆಚ್ಚು ಜನರು ಒಂದೇ ಉದ್ದೇಶಕ್ಕಾಗಿ ಒಟ್ಟಾಗಿ ಸಾಗಿದರೆ ಅದನ್ನು ಮೆರವಣಿಗೆ ಅಥವಾ ರಾಲಿ ಎಂದು ಪರಿಗಣಿಸಲಾಗುವುದು.

ಇಂತಹ ಕಾರ್ಯಕ್ರಮಗಳ ಅನುಮತಿಗಾಗಿ ಮೂರು ದಿನ ಮುಂಚಿತವಾಗಿ ಲಿಖಿತ ಅರ್ಜಿ ಸಲ್ಲಿಸಬೇಕಾಗಿತ್ತು.

ಮುಂದೇನಾಗಬಹುದು?,.ರಾಜ್ಯ ಸರ್ಕಾರದ ಪರವಾಗಿ ವಾದ ಪೂರ್ಣಗೊಂಡ ನಂತರ ಹೈಕೋರ್ಟ್ ಅಂತಿಮ ತೀರ್ಪು ನೀಡಲಿದೆ. ಮಧ್ಯಂತರ ತಡೆ ಮುಂದುವರೆದಿರುವುದರಿಂದ ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘಟನೆಗಳ ಚಟುವಟಿಕೆಗಳಿಗೆ ತಾತ್ಕಾಲಿಕವಾಗಿ ಮುಕ್ತ ಅವಕಾಶ ದೊರೆತಿದೆ.

K.M.Sathish Gowda

Join WhatsApp

Join Now

Facebook

Join Now

Read more

ಜಲಕ್ರಾಂತಿಗೆ ದೆಹಲಿಯಲ್ಲಿ ಹೊಸ ಚೈತನ್ಯ: ಶ್ರೀ ತರಳಬಾಳು ಜಗದ್ಗುರು ಮತ್ತು ಜಲತಜ್ಞ ಡಾ. ರಾಜೇಂದ್ರ ಸಿಂಗ್ ನಡುವೆ ಮಹತ್ವದ ಮಾತುಕತೆ

ಹಾಸನದಲ್ಲಿ ಗೂಂಡಾಗಿರಿ: ಬೆಟ್ಟದ ಭೈರವೇಶ್ವರ ದೇವಸ್ಥಾನ ಬಳಿ ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ, ಪ್ರಕರಣ ದಾಖಲು

ಶಿವಮೊಗ್ಗ ಪೊಲೀಸರಿಗೆ ಗೌರವ: ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್. ರಮೇಶ್ ಕುಮಾರ್ ಸೇರಿದಂತೆ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಕೇಂದ್ರವನ್ನು ಟೀಕಿಸುವುದರಲ್ಲೇ 3 ವರ್ಷ ವ್ಯರ್ಥ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಶ್ರೀ ರಾಮನವಮಿ ಸಂಭ್ರಮ: ಶಿವಮೊಗ್ಗದಲ್ಲಿ ಅದ್ಧೂರಿ ರಥೋತ್ಸವ ಹಾಗೂ ದುರ್ಗಿಗುಡಿ ಮಿತ್ರಕೂಟದಿಂದ ಪಾನಕ–ಕೋಸಂಬರಿ ವಿತರಣೆ

ಇಂಧನ ಬೆಲೆ ಏರಿಕೆ ಭೀತಿ ನಡುವೆ ಕೇಂದ್ರದ ದೊಡ್ಡ ನಿರ್ಧಾರ: ಪೆಟ್ರೋಲ್ ಸುಂಕ 3 ರೂ., ಡೀಸೆಲ್ ಸುಂಕ ಸಂಪೂರ್ಣ ರದ್ದು

Leave a Comment