ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ದುರಂತ: ದೇವಸ್ಥಾನದಲ್ಲಿ ಕಾಲ್ತುಳಿತ, 9 ಮಂದಿ ಭಕ್ತರ ದುರ್ಮರಣ

On: November 1, 2025 6:27 PM
Follow Us:

ಶ್ರೀಕಾಕುಳಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 9 ಮಂದಿ ಭಕ್ತರು ದುರ್ಮರಣ ಹೊಂದಿದ್ದಾರೆ. ಕಾರ್ತಿಕ ಮಾಸದ ‘ಏಕಾದಶಿ’ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರಿಂದ ಭಾರೀ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ.

ಅಧಿಕಾರಿಗಳ ಪ್ರಕಾರ, ದೇವಾಲಯದ ಒಳಭಾಗದಲ್ಲಿ ಭಕ್ತರ ನಿಯಂತ್ರಣ ತಪ್ಪಿ ಗೊಂದಲದ ಸ್ಥಿತಿ ಉಂಟಾಗಿತ್ತು. ಅದರ ಪರಿಣಾಮ ಹಲವರು ಕಾಲ್ತುಳಿತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಟ್ವೀಟ್ ಮೂಲಕ ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದು, ಸರ್ಕಾರದಿಂದ ಎಲ್ಲ ರೀತಿಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ.

ಆಂಧ್ರದಲ್ಲಿ ಕಾಲ್ತುಳಿತವಾಗಿ 10 ಜನ ಸಾವು; ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಆಂಧ್ರಪ್ರದೇಶದ ಶ್ರೀಕಾಕುಳಂನ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಉಂಟಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಏಕಾದಶಿ ಸಂದರ್ಭದಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರಿ ಜನಸಮೂಹ ಜಮಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ. ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಅಮಿತ್ ಶಾ ಸಂತಾಪ:

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಮೃತರ ಕುಟುಂಬಸ್ಥರಿಗೆ ಈ ಆಘಾತ ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪ್ರತಿಕ್ರಿಯಿಸಿದ್ದಾರೆ.

ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ದುಃಖ ವ್ಯಕ್ತಪಡಿಸಿದ್ದಾರೆ. ಎಕ್ಸ್​ನಲ್ಲಿ ಈ ಬಗ್ಗೆ ಮಾಡಿದ ಪೋಸ್ಟ್‌ನಲ್ಲಿ ಅವರು ಈ ದುರಂತ ಘಟನೆಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಹೇಳಿದ್ದಾರೆ. ಅವರು ದುಃಖಿತ ಕುಟುಂಬಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

ಏಕಾದಶಿಯ ಸಂದರ್ಭದಲ್ಲಿ ಸಾವಿರಾರು ಭಕ್ತರು ದೇವಾಲಯದಲ್ಲಿ ದೇಚರ ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ 10 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಸುಮಾರು 3,000ರಿಂದ 5,000 ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಬಹುದಾದ ದೇವಾಲಯದ ಆವರಣದಲ್ಲಿ 25,000ಕ್ಕೂ ಹೆಚ್ಚು ಜನರು ಪಾದಯಾತ್ರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ರೀತಿಯ ಕಾಲ್ತುಳಿತ ಘಟನೆಗಳು ಹೊಸದಿಲ್ಲ. ಇತ್ತೀಚಿನ ವರ್ಷಗಳಲ್ಲಿ ತಿರುಮಲ ತಿರುಪತಿ ದೇವಾಲಯದ ಆವರಣದಲ್ಲಿಯೂ ಇದೇ ರೀತಿಯ ದುರಂತ ಸಂಭವಿಸಿತ್ತು. ದೇವಸ್ಥಾನಗಳಲ್ಲಿ ಸರಿಯಾದ ಜನನಿಯಂತ್ರಣ ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳದ ಕಾರಣದಿಂದ ನಿರಪರಾಧ ಭಕ್ತರ ಪ್ರಾಣಹಾನಿ ಸಂಭವಿಸುತ್ತಿದೆ ಎಂಬ ಟೀಕೆಗಳು ಕೇಳಿಬಂದಿವೆ.

ಆಂಧ್ರ ಸರ್ಕಾರವು ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ದೇವಾಲಯ ನಿರ್ವಹಣಾ ವ್ಯವಸ್ಥೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪೊಲೀಸ್ ಇಲಾಖೆಯಲ್ಲಿ ‘ಮೇಜರ್ ಸರ್ಜರಿ’: 129 ಇನ್ಸ್‌ಪೆಕ್ಟರ್‌, 23 ಡಿವೈಎಸ್ಪಿಗಳಿಗೆ ವರ್ಗಾವಣೆ; ಬೆಂಗಳೂರು ಸಿಟಿ ಪಟ್ಟಿ ಇನ್ನೂ ಬಾಕಿ

ಸೂಡಾ ಕಾಮಗಾರಿಗಳ ಮೇಲೆ ಭ್ರಷ್ಟಾಚಾರ ನೆರಳು; ಡಿಸಿ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

Leave a Comment