ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ರಾಜ್ಯದಲ್ಲಿ ಸಿಎಂ ಯಾರು? ಸಿದ್ದರಾಮಯ್ಯನಾ, ಡಿಕೆ ಶಿವಕುಮಾರನಾ?”:ಹೆಚ್.ಡಿ.ಕೆ. ಪ್ರಶ್ನೆ

On: November 2, 2025 3:07 PM
Follow Us:

ಬೆಂಗಳೂರು: “ನಗರದ ರಸ್ತೆ ಗುಂಡಿಗಳ ಕುರಿತು ಕೇಳಿದ್ದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಶನಿವಾರ ತೀವ್ರವಾಗಿ ಟೀಕಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರ ಹೇಳಿಕೆ ಸಂಪೂರ್ಣ ಬೇಜವಾಬ್ದಾರಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ ಅಥವಾ ಡಿ.ಕೆ. ಶಿವಕುಮಾರ್ ಅವರಾ ಎಂಬ ಪ್ರಶ್ನೆ ಜನರ ಮನಸ್ಸಿನಲ್ಲಿ ಮೂಡುತ್ತಿದೆ” ಎಂದರು.

“ರಸ್ತೆ ಗುಂಡಿ ಸಮಸ್ಯೆ ಪರಿಹರಿಸಲು ಸಿಎಂ ಸಭೆ ನಡೆಸಿ ಡೆಡ್‌ಲೈನ್ ನೀಡಿದ್ದರು. ಆದರೆ ಇಂದಿಗೂ ರಸ್ತೆಗಳ ಪರಿಸ್ಥಿತಿ ಯಥಾಸ್ಥಿತಿ. ಅಧಿಕಾರಿಗಳು ಸಿಎಂ ಮಾತಿಗೆ ಎಷ್ಟು ಬೆಲೆ ಕೊಡುತ್ತಾರೆಂಬುದು ಇದರಿಂದ ಸ್ಪಷ್ಟವಾಗಿದೆ,” ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಜಾತಿ ಗಣತಿಯ ಕುರಿತು ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ರಾಜ್ಯದ ಜನರ ಹಿತಕ್ಕಾಗಿ ಅಲ್ಲ, ತಮ್ಮ ರಾಜಕೀಯ ಉದ್ದೇಶಕ್ಕಾಗಿ ಸಮೀಕ್ಷೆ ನಡೆಸಿದ್ದಾರೆ. ಈ ಸಮೀಕ್ಷೆಯಿಂದ ಸರ್ಕಾರ ಏನನ್ನು ಸಾಧಿಸಲಿದೆ? ಎಲ್ಲಾ ಜಾತಿಗಳಲ್ಲಿಯೂ ಬಡವರು, ಅನಕ್ಷರಸ್ಥರು ಇದ್ದಾರೆ. ಮೊದಲು ಶಿಕ್ಷಣದ ಗುಣಮಟ್ಟ ಸುಧಾರಿಸುವತ್ತ ಸರ್ಕಾರ ಗಮನ ಹರಿಸಬೇಕು,” ಎಂದು ಹೇಳಿದರು.

ತ್ಯಾಜ್ಯ ವಿಲೇವಾರಿ ಕುರಿತು ಟೀಕಿಸಿದ ಅವರು, “ಸರ್ಕಾರ ವೈಜ್ಞಾನಿಕ ಕಸ ವಿಲೇವಾರಿ ಕ್ರಮ ಕೈಗೊಳ್ಳದೆ, ಮನೆಗಳ ಮುಂದೆ ಕಸ ಸುರಿಯುವ ವಿನೂತನ ಪ್ರಯೋಗ ಮಾಡುತ್ತಿದೆ. ಇದು ಜನರ ಮೇಲಿನ ಅವಮಾನ,” ಎಂದು ತರಾಟೆಗೆ ತೆಗೆದುಕೊಂಡರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment