ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಸರ್ಕಾರ ಕೈಬಿಟ್ಟ ಜವಾಬ್ದಾರಿ ಮಠಗಳು ನಿಭಾಯಿಸುತ್ತಿವೆ”: ಕೇಂದ್ರ ಸಚಿವ HDK

On: November 21, 2025 11:36 PM
Follow Us:

ಬೆಂಗಳೂರು: ರಾಜ್ಯ ಸರ್ಕಾರ ಶಾಲೆಗಳನ್ನು ಮುಚ್ಚುವ ಕಾರ್ಯದಲ್ಲಿ ತೊಡಗಿರುವ ಸಂದರ್ಭದಲ್ಲಿ, ರಾಜ್ಯದ ಮಠಮಾನ್ಯಗಳು ಬಡವರು, ದುರ್ಬಲ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುತ್ತಿವೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಖಂಡಿಸಿ ಹೇಳಿದರು.
ನಗರದಲ್ಲಿ ಶ್ರೀ ಆದಿಚುನಚಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆದ 17ನೇ ಬಿಜಿಎಸ್ ಸಂಸ್ಥಾಪನಾ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ನಡೆಸಲಾಗದೆ ಅನೇಕ ಶಾಲೆಗಳಿಗೆ ಬೀಗ ಹಾಕುತ್ತಿರುವುದು ದುರ್ಬಲ ವರ್ಗದ ಮಕ್ಕಳ ಭವಿಷ್ಯವನ್ನು ಪ್ರಶ್ನೆಯಡಿ ತಂದಿದೆ ಎಂದು ಆರೋಪಿಸಿದ ಅವರು, ಇಂತಹ ಸಂದರ್ಭದಲ್ಲಿ ಮಠಗಳು ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡುವ ಮಹತ್ತರ ಸೇವೆ ಸಲ್ಲಿಸುತ್ತಿವೆ ಎಂದು ಹೇಳಿದರು.

ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಸುಲಭವಾದರೂ, ಅವುಗಳನ್ನು ನಿರ್ವಹಿಸಿ ಯಶಸ್ವಿಯಾಗಿ ನಡೆಸುವುದು ಸುಲಭವಲ್ಲ. ಆದರೆ ಮಠಗಳು ದಕ್ಷತೆ ಮತ್ತು ಕ್ಷಮತೆಯಿಂದ ಈ ಕಾರ್ಯವನ್ನು ಸುಗಮವಾಗಿ ಕೈಬಿಟ್ಟಿವೆ. ದೂರದೃಷ್ಟಿ ಹಾಗೂ ಸಮಾಜದ ಕುರಿತ ಕಾಳಜಿ ಮಠಗಳ ಯಶಸ್ಸಿನ ಮೂಲ ಕಾರಣಗಳಾಗಿದೆ ಎಂದು ಸಚಿವರು ಪ್ರಶಂಸಿಸಿದರು.

ಮಠಗಳು ಕೇವಲ ಶಿಕ್ಷಣ ನೀಡುವುದಲ್ಲ; ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಜೊತೆಗೆ ಸಮಾಜ ಸೇವೆ ಮತ್ತು ಆಧ್ಯಾತ್ಮಿಕ ಕಾರ್ಯಗಳಲ್ಲಿಯೂ ನಿಸ್ವಾರ್ಥವಾಗಿ ತೊಡಗಿಸಿಕೊಂಡಿವೆ. ಮುಂದಿನ ಪೀಳಿಗೆಗೆ ಗಟ್ಟಿಯಾದ ಮೌಲ್ಯಾಧಾರಿತ ಶಿಕ್ಷಣ ಅಗತ್ಯವಿರುವ ಈ ಸಂದರ್ಭದಲ್ಲಿ, ಆದಿಚುನಚಗಿರಿ ಮಠವು ಸಮಾಜದಲ್ಲಿ ಅರಿವು ಮೂಡಿಸುವಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಆದಿಚುನಚಗಿರಿ ಮಠದ ಡಾ. ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಟ್ರಸ್ಟ್ ಮುಖ್ಯಸ್ಥರಾದ ಶ್ರೀ ಪ್ರಕಾಶನಾಥ ಸ್ವಾಮೀಜಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್‌.ಆರ್. ರಂಗನಾಥ್, ಗ್ಯಾರಂಟಿ ನ್ಯೂಸ್ ಮುಖ್ಯಸ್ಥ ಶಿವಸ್ವಾಮಿ, ಹಿರಿಯ ನಟಿ ಮಾಲಾಶ್ರೀ, ನಟಿ ಆರಾಧನಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Leave a Comment