ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕರ್ತವ್ಯ–ಭಕ್ತಿ ಎರಡಕ್ಕೂ ಮನ್ನಣೆ: VISL ಮತ್ತು ಗೀತಾ ಸಮರ್ಪಣೆ ಕಾರ್ಯಕ್ರಮಗಳಲ್ಲಿ ಭಾಗಿಯಾದ ಕೇಂದ್ರ ಸಚಿವ ಕುಮಾರಸ್ವಾಮಿ

On: November 30, 2025 10:24 PM
Follow Us:

ಶಿವಮೊಗ್ಗ: ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಶಿವಮೊಗ್ಗ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಅಭಿವೃದ್ಧಿ, ಧಾರ್ಮಿಕ–ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕೈಗಾರಿಕಾ ವಲಯದ ಪ್ರಗತಿ ಕುರಿತು ಮಹತ್ವದ ಸಂದೇಶಗಳನ್ನು ನೀಡಿದರು.

ಮೈಸೂರು ಮಹಾಸಂಸ್ಥಾನದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯಿಂದ ಸ್ಥಾಪಿತವಾದ, ಸ್ಟೀಲ್ ಮಿನಿಸ್ಟ್ರಿ ಅಧೀನದ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL)ಗೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಖಾನೆಯ ಸದ್ಯದ ಪರಿಸ್ಥಿತಿ, ಉತ್ಪಾದನಾ ಸಾಮರ್ಥ್ಯ, ನವೀಕರಣ ಅಗತ್ಯತೆಗಳ ಬಗ್ಗೆ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದ ಅವರು, ಕೈಗಾರಿಕಾಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿರುವುದನ್ನು ಪುನರುಚ್ಚರಿಸಿದರು.

ಉನ್ನತ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಕಾರ್ಖಾನೆಯ ಪ್ರಸ್ತುತ ಸ್ಥಿತಿಗತಿ ಕುರಿತು ಸಮಗ್ರ ಅವಲೋಕನ ನಡೆಯಿತು. ಈ ಸಂದರ್ಭದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎಲ್. ಭೋಜೇಗೌಡ, ಶ್ರೀಮತಿ ಶಾರದಾ ಪೂರ್ಯಾನಾಯಕ, ಕಾರ್ಮಿಕ ನಾಯಕಿ ಶ್ರೀಮತಿ ಶಾರದಾ ಅಪ್ಪಾಜಿಗೌಡ ಸೇರಿದಂತೆ ಹಲವರು ಭಾಗವಹಿಸಿದರು.

ತದನಂತರ, ಶಿವಮೊಗ್ಗದಲ್ಲಿ ನಡೆದ ಶ್ರೀ ಭಗವದ್ಗೀತಾ ಅಭಿಯಾನ 2025 – ರಾಜ್ಯಮಟ್ಟದ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಸಚಿವ ಕುಮಾರಸ್ವಾಮಿ ಭಕ್ತಿಪೂರ್ವಕವಾಗಿ ಪಾಲ್ಗೊಂಡರು. ಈ ಧಾರ್ಮಿಕ ಮಹಾಸಭೆಗೆ ಅನೇಕ ಪೀಠಾಧೀಶರು ದಿವ್ಯ ಸಾನ್ನಿಧ್ಯ ವಹಿಸಿ ಕಾರ್ಯಕ್ರಮದ ಗಂಭೀರತೆ ಹೆಚ್ಚಿಸಿದರು. ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು, ಹರಿಹರಪುರದ ಶಾರದಾ ಪೀಠದ ಪರಮಪೂಜ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು, ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಿವಮೊಗ್ಗ ಆದಿಚುಂಚನಗಿರಿ ಶಾಖಾಮಠದ ಪರಮಪೂಜ್ಯ ಶ್ರೀ ನಾದಮಯಾನಂದನಾಥ ಮಹಾಸ್ವಾಮಿಗಳು ಸೇರಿದಂತೆ ಅನೇಕರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯದ ಹಿರಿಯ ನಾಯಕರು ಮತ್ತು ಗಣ್ಯರು ಭಾಗವಹಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ತಾಲೂಕು–ಜಿಲ್ಲಾ ಮಟ್ಟದ ಜನಪ್ರತಿನಿಧಿಗಳು, ಸಾವಿರಾರು ಭಕ್ತರು, ತಾಯಂದಿರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮಹಾಸಮರ್ಪಣೆಯ ಮಹೋತ್ಸವಕ್ಕೆ ಸಾಕ್ಷಿಯಾದರು.

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ವಿವಿಧ ಕ್ಷೇತ್ರಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಹಕಾರ ದೊರಕುವ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment