ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸುವರ್ಣಸೌಧದ ಬಳಿ ಸರಣಿ ಪ್ರತಿಭಟನೆಗಳಿಗೆ ಸಚಿವರಿಂದ ಭೇಟಿ: ಗಡಿಭಾಗ, ರೈತ ಹಾಗೂ ಕನ್ನಡ ಶಾಲೆಗಳ ಬೇಡಿಕೆಗಳಿಗೆ ಭರವಸೆ

On: December 11, 2025 6:41 PM
Follow Us:

ಬೆಳಗಾವಿ: ಸುವರ್ಣಸೌಧದ ಬಳಿ ವಿವಿಧ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನಾ ಕಾರ್ಯಕ್ರಮಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಭೇಟಿ ನೀಡಿ, ಮೂರು ಪ್ರಮುಖ ಬೇಡಿಕೆಗಳ ಕುರಿತಂತೆ ಅಹವಾಲುಗಳನ್ನು ಸ್ವೀಕರಿಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಿದರು.

ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ

ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಚಿವರು, ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿ ಸರ್ಕಾರದ ಮೊದಲ ಆಧ್ಯತೆ ಎಂದು ಹೇಳಿದರು.
“ಗಡಿಭಾಗದ ಕನ್ನಡ ಮಕ್ಕಳಿಗೆ ಶಿಕ್ಷಣದಲ್ಲಿ ಯಾವುದೇ ಕೊರತೆಯಾಗದಂತೆ ಹೊಸ ಕಾನೂನು ಜಾರಿಗೊಳಿಸಲಾಗಿದೆ. ಕನ್ನಡ ಶಾಲೆಗಳ ಬಲವರ್ಧನೆಗೆ ಸರ್ಕಾರ ಸಂಪೂರ್ಣ ಬದ್ಧ,” ಎಂದು ಅವರು ತಿಳಿಸಿದ್ದಾರೆ.

ಕರವೇ ಪ್ರತಿನಿಧಿಗಳು ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂ.ಇ.ಎಸ್.) ನಿಷೇಧ ಹೇರಬೇಕೆಂದು ಒತ್ತಾಯಿಸಿದಾಗ, ಸರ್ಕಾರ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಸಚಿವರು ಭರವಸೆ ನೀಡಿದರು. ಜೊತೆಗೆ ಸುವರ್ಣಸೌಧವನ್ನು ನಿಜವಾದ ಆಡಳಿತ ಶಕ್ತಿ ಕೇಂದ್ರವಾಗಿಸಲು ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸುವ ಮನವಿಗೂ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ರೈತರ ಬೇಡಿಕೆಗಳ ಕುರಿತು ಪರಿಷ್ಕರಿಸುವ ಭರವಸೆ

‘ಬೆಳಗಾವಿ ಚಲೋ’ ಚಳವಳಿಯಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಡೆಸುತ್ತಿದ್ದ ಪ್ರತಿಭಟನಾ ವೇದಿಕೆಯಲ್ಲಿ ಸಚಿವರು ರೈತರ ಬೇಡಿಕೆಗಳನ್ನು ಆಲಿಸಿದರು. ಬೆಲೆಸಹಾಯ, ಬೆಳೆನಷ್ಟ ಪರಿಹಾರ, ನೀರೆರಿವು ಹಾಗೂ ಕೃಷಿ ನೀತಿ ಸುಧಾರಣೆ ಕುರಿತ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ತ್ವರಿತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಾದ್ಯಂತದ ಸಾವಿರಾರು ರೈತರು, ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಪ್ರಮುಖ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕನ್ನಡ ಶಾಲೆ ಉಳಿಸಿ ಅಭಿಯಾನಕ್ಕೆ ಬೆಂಬಲ

ಅನುದಾನ ರಹಿತ ಶಾಲಾ–ಕಾಲೇಜುಗಳ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟ ಹಮ್ಮಿಕೊಂಡಿದ್ದ “ನಮ್ಮ ಕನ್ನಡ ಶಾಲೆ ಉಳಿಸಿ” ಅಭಿಯಾನದಲ್ಲೂ ಸಚಿವರು ಪಾಲ್ಗೊಂಡರು. 1995–2005ರ ನಡುವೆ ಸ್ಥಾಪಿತವಾದ ಕನ್ನಡ ಶಾಲೆಗಳಿಗೆ ವೇತನಾನುದಾನ ನೀಡುವ ಬೇಡಿಕೆಯನ್ನು ಕುರಿತು ಮಾತನಾಡಿದ ಅವರು, “ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆಯಲು ಸರ್ಕಾರ ಗಂಭೀರ ಪ್ರಯತ್ನ ಕೈಗೊಳ್ಳಲಿದೆ,” ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಭೋಜೆಗೌಡ್ರು ಎಸ್.ವಿ. ಸಂಕನೂರ, ಡಿ.ಟಿ. ಶ್ರೀನಿವಾಸ್, ಹಣಮಂತ ನಿರಾಣಿ, ಧನಂಜಯ್ ಸರ್ಜಿ ಸೇರಿದಂತೆ ಹಲವು ನಾಯಕರು ಹಾಗೂ ರಾಜ್ಯದ ಶಿಕ್ಷಕರು ಹಾಜರಿದ್ದರು.

ಸುವರ್ಣಸೌಧದ ಬಳಿ ನಡೆದ ಈ ಸರಣಿ ಪ್ರತಿಭಟನೆಗಳಿಗೆ ಭೇಟಿ ನೀಡಿದ ಸಚಿವರು, ಗಡಿಭಾಗದ ಕನ್ನಡ ಶಿಕ್ಷಣ, ರೈತರ ಕಲ್ಯಾಣ ಹಾಗೂ ಕನ್ನಡ ಶಾಲೆಗಳ ರಕ್ಷಣೆಯ ಕಡೆ ಸರ್ಕಾರ ಗಂಭೀರವಾಗಿದೆ ಎಂದು ಪುನರುಚ್ಚರಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment