ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಿದ್ದರಾಮಯ್ಯ ವಿಮಾನ–ಹೆಲಿಕಾಪ್ಟರ್ ಓಡಾಟಕ್ಕೆ 47 ಕೋಟಿ ವೆಚ್ಚ ಬಹಿರಂಗ,.!

On: December 11, 2025 10:26 PM
Follow Us:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಮತ್ತು ವಿಶೇಷ ವಿಮಾನ ಬಳಕೆಗೆ ಸಂಬಂಧಿಸಿದ ವೆಚ್ಚದ ವಿವರಗಳು ಬೆಳಕಿಗೆ ಬಿದ್ದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ‘ಅಹಿಂದ ನಾಯಕ’ ಎಂದು ರಾಜ್ಯ ರಾಜಕೀಯದಲ್ಲಿ ಗುರುತಿಸಲ್ಪಟ್ಟಿರುವ ಸಿದ್ದರಾಮಯ್ಯ ಅವರು 2023ರಲ್ಲಿ ಮುಖ್ಯಮಂತ್ರಿ ಆದ ನಂತರದಿಂದ 2025ರ ನವೆಂಬರ್ ವರೆಗೆ ಅಧಿಕೃತ ಪ್ರವಾಸಗಳಿಗೆ ಸರ್ಕಾರದ ಖಜಾನೆಯಿಂದ ಒಟ್ಟು 47,38,24,347 ರೂಪಾಯಿ ಖರ್ಚಾಗಿದೆ ಎಂದು ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಸ್ಪಷ್ಟಪಡಿಸಿದೆ. ಪರಿಷತ್ ಸದಸ್ಯ ಎನ್. ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ನೀಡಲಾದ ಈ ಅಂಕಿಅಂಶವು, ಸಿಎಂ ರಾಜ್ಯದ ಹಲವು ಜಿಲ್ಲೆಗಳ ಪರಿಶೀಲನಾ ಪ್ರವಾಸಗಳು, ಕಾರ್ಯಕ್ರಮಗಳು ಹಾಗೂ ದೆಹಲಿ, ಹೈದ್ರಾಬಾದ್, ಚೆನ್ನೈ ಮೊದಲಾದ ನಗರಗಳಿಗೆ ನಡೆದ ಅಧಿಕೃತ ಸಭೆ–ಸಮಾಲೋಚನೆಗಳಿಗೆ ಹೆಲಿಕಾಪ್ಟರ್ ಮತ್ತು ವಿಶೇಷ ವಿಮಾನ ಬಳಸಿರುವುದನ್ನು ಸೂಚಿಸುತ್ತದೆ.

ಮೈಸೂರಿನ ಕಾರ್ಯಕ್ರಮಗಳ ನಿಮಿತ್ತ ನಡೆದ ಸಿಎಂ ಪ್ರವಾಸಗಳಿಗೆ ಮಾತ್ರ 5 ಕೋಟಿಗೂ ಹೆಚ್ಚು ಹಣ ವೆಚ್ಚವಾಗಿರುವುದು ದಾಖಲೆಗಳಿಂದ ತಿಳಿದುಬಂದಿದೆ. ಈ ಮಾಹಿತಿ ಬಹಿರಂಗವಾದ ನಂತರ ವಿರೋಧಪಕ್ಷಗಳು “ಸಾರ್ವಜನಿಕ ಹಣದ ದುರುಪಯೋಗ”, “ಸರ್ಕಾರದ ಬೊಕ್ಕಸಕ್ಕೆ ಅನಗತ್ಯ ಹೊರೆ” ಎಂಬ ಟೀಕೆಗಳನ್ನು ಮಾಡುತ್ತಿವೆ. ಅಹಿಂದ ಹಿತಾಸಕ್ತಿ ಮತ್ತು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಮಾತನಾಡುವ ನಾಯಕನಾಗಿ, ಸಿಎಂ ವೆಚ್ಚದ ವಿಷಯದಲ್ಲಿ ಹೆಚ್ಚು ಜವಾಬ್ದಾರಿ ತೋರಬೇಕಿತ್ತು ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಇದರ ವಿರುದ್ಧವಾಗಿ, ಸರ್ಕಾರ “ಪ್ರತಿಯೊಂದು ವಿಮಾನಯಾನವೂ ಅಧಿಕೃತ ಕರ್ತವ್ಯ, ಆಡಳಿತ ಚಟುವಟಿಕೆಗಳ ಪರಿಶೀಲನೆ ಮತ್ತು ಕೇಂದ್ರದೊಂದಿಗೆ ಸಮಾಲೋಚನೆಗಾಗಿ ನಡೆಸಲಾಗಿದೆ. ಸಿಎಂ ಪ್ರವಾಸಗಳು ಆಡಳಿತಾತ್ಮಕ ಅಗತ್ಯ” ಎಂದು ಸ್ಪಷ್ಟಪಡಿಸಿದೆ. ಈ ಅಂಕಿಅಂಶಗಳು ಹೊರಬಿದ್ದ ಹಿನ್ನೆಲೆಯಲ್ಲಿ ಸಿಎಂನ ಪ್ರವಾಸ ವೆಚ್ಚ, ಅದರ ಅವಶ್ಯಕತೆ ಮತ್ತು ಸಾರ್ವಜನಿಕ ಹಣದ ಬಳಕೆಯ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ಮತ್ತಷ್ಟು ತೀವ್ರವಾಗಿದೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment