ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಗೃಹಲಕ್ಷ್ಮಿ ಯೋಜನೆ ಹಣ ಬಾಕಿ: ಸಚಿವೆ ಹೆಬ್ಬಾಳ್ಕರ್ ಉತ್ತರಕ್ಕೆ ವಿಪಕ್ಷಗಳ ತೀವ್ರ ಆಕ್ರೋಶ

On: December 17, 2025 6:32 PM
Follow Us:

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಹಣ ಬಾಕಿ ವಿಚಾರವಾಗಿ ವಿಧಾನಸಭೆಯಲ್ಲಿ ಇಂದು ಭಾರೀ ಗಲಾಟೆ ನಡೆಯಿತು. ವಿಪಕ್ಷಗಳ ತೀವ್ರ ಆಕ್ರೋಶಕ್ಕೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಈವರೆಗೆ 52,400.16 ಕೋಟಿ ರೂಪಾಯಿಗಳನ್ನು ಮಹಿಳೆಯರಿಗೆ ತಲುಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮಾಹಿತಿಯಲ್ಲಿ ವ್ಯತ್ಯಾಸ ಉಂಟಾದ ಹಿನ್ನೆಲೆಯಲ್ಲಿ ಈಗಾಗಲೇ ವಿಷಾದ ವ್ಯಕ್ತಪಡಿಸಿರುವುದಾಗಿ ತಿಳಿಸಿದ ಸಚಿವೆ, ತಮ್ಮ ಪದ ಬಳಕೆಯಿಂದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರಿಗೆ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧಳಿರುವುದಾಗಿ ಹೇಳಿದರು. ಇದೇ ವೇಳೆ, “ನಾನು ಮಹಿಳೆ ಎಂಬ ಕಾರಣಕ್ಕೆ ಈ ಮಟ್ಟಿಗೆ ನನ್ನನ್ನು ಗುರಿ ಮಾಡಲಾಗುತ್ತಿದೆಯೇ?” ಎಂದು ಪ್ರಶ್ನಿಸುವ ಮೂಲಕ ಭಾವುಕರಾಗಿ ಪ್ರತಿಕ್ರಿಯಿಸಿದರು.

ಇದಕ್ಕೆ ತೀವ್ರ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್. ಅಶೋಕ್, “ಸಚಿವೆಯ ಉತ್ತರಗಳು ಸ್ಪಷ್ಟವಾಗಿಲ್ಲ. ಸದನಕ್ಕೆ ತಪ್ಪು ಮಾಹಿತಿ ನೀಡಿದ ಅಧಿಕಾರಿ ಯಾರು ಎಂಬುದನ್ನು ಬಹಿರಂಗಪಡಿಸಬೇಕು. ಡಿಬಿಟಿ ವ್ಯವಸ್ಥೆಯನ್ನು ನಾವು ಜಾರಿಗೆ ತಂದಿದ್ದೇವೆ. ಆದರೆ ಸರ್ಕಾರ ತಂದಿರುವ ‘ಫ್ರೂಟ್ಸ್’ ಸಾಫ್ಟ್‌ವೇರ್ ಈಗ ಸಂಪೂರ್ಣವಾಗಿ ವಿಫಲವಾಗಿದೆ. ಎರಡು ತಿಂಗಳ ಹಣ ಎಲ್ಲಿಗೆ ಹೋಯಿತು? ಸರ್ಕಾರ ಬಿಕಾರಿಯಾಗಿದೆಯೇ? ಮಹಿಳೆಯರಿಗೆ ಯಾಕೆ ದ್ರೋಹ ಮಾಡಲಾಗುತ್ತಿದೆ?” ಎಂದು ಕಟುವಾಗಿ ಟೀಕಿಸಿದರು.

ಸಚಿವೆ ‘ಮಹಿಳಾ ಕಾರ್ಡ್’ ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಶೋಕ್, “ಸದನದಲ್ಲಿ ಮಹಿಳೆ–ಪುರುಷ ಎಂಬ ಭೇದವಿಲ್ಲ. ಇಲ್ಲಿ ಮಂತ್ರಿ ಎಂಬ ಸ್ಥಾನ ಮಾತ್ರ ಮುಖ್ಯ. ಮಂತ್ರಿಯಾಗಿ ಜವಾಬ್ದಾರಿಯುತ ಉತ್ತರ ನೀಡಬೇಕು. ಬಾಕಿ ಇರುವ ಎರಡು ತಿಂಗಳ ಕಂತನ್ನು ಯಾವಾಗ ಪಾವತಿಸುತ್ತೀರಿ ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು” ಎಂದು ಆಗ್ರಹಿಸಿದರು.

ಸಚಿವೆಯ ಉತ್ತರದಿಂದ ತೃಪ್ತರಾಗದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. “ಸದನ ಮುಗಿಯುವೊಳಗೆ ಬಾಕಿ ಹಣ ಪಾವತಿಸುವುದಾಗಿ ಸರ್ಕಾರ ಘೋಷಿಸಬೇಕಿತ್ತು. ಆದರೆ ಅಸ್ಪಷ್ಟ ಉತ್ತರ ನೀಡಲಾಗಿದೆ” ಎಂದು ಆರೋಪಿಸಿ, ಎರಡೂ ಪಕ್ಷಗಳ ಸದಸ್ಯರು ಒಟ್ಟಾಗಿ ಸಭಾತ್ಯಾಗ ಮಾಡಿದರು.

ವಿಪಕ್ಷಗಳ ಸಭಾತ್ಯಾಗದ ಬಳಿಕ, ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮುಂದಿನ ಪ್ರಶ್ನೋತ್ತರ ಕಲಾಪವನ್ನು ಆರಂಭಿಸಿದರು. ಗೃಹಲಕ್ಷ್ಮಿ ಯೋಜನೆ ಕುರಿತಾದ ಸುದೀರ್ಘ ಗಲಾಟೆ ಈ ಮೂಲಕ ಒಂದು ಹಂತಕ್ಕೆ ಅಂತ್ಯವಾಯಿತು.

K.M.Sathish Gowda

Join WhatsApp

Join Now

Facebook

Join Now

Read more

ಸಾವಿನ ಬಲೆ ಹೆಣೆಯುತ್ತಿರುವ ಕೇಬಲ್‌ಗಳು: ವಿದ್ಯುತ್ ಇಲಾಖೆ–ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಕೋಟೆ ರಸ್ತೆಯಲ್ಲಿ ಹಸು ಬಲಿ; ನಗರದ ವಿದ್ಯುತ್ ಕಂಬಗಳಲ್ಲೇ ಸಾಕ್ಷಾತ್ ಯಮನ ದರ್ಶನ!

ಸಮಾಜಮುಖಿ ಸೇವೆಯಲ್ಲಿ ಶಿವಮೊಗ್ಗ ಸರ್ವೋದಯ ಮಂಡಳಿ ರಾಜ್ಯಕ್ಕೆ ಮಾದರಿ: ಡಾ. ಎಚ್.ಎಸ್. ಸುರೇಶ್

​ವಿದ್ಯೆಯ ಜೊತೆಗೆ ಸಂಸ್ಕಾರಯುತ ಶಿಕ್ಷಣ ಇಂದಿನ ತುರ್ತು ಅಗತ್ಯ; ಸಿದ್ಧಗಂಗಾ ಶ್ರೀಗಳ ದಾಸೋಹ ಪರಂಪರೆಯೇ ನಮಗೆ ಪ್ರೇರಣೆ: ಸಿ.ಎಸ್. ಷಡಾಕ್ಷರಿ

ಶಿವಮೊಗ್ಗದ ನೀರಾವರಿ ಯೋಜನೆಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಿ; ರೈತರ ಹಿತಕ್ಕೆ ಆದ್ಯತೆ ನೀಡಿ: ಸಚಿವ ರಾಮಲಿಂಗಾರೆಡ್ಡಿಗೆ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯ

‘ಎಂಪಿ, ಎಂಎಲ್‌ಎ ಆಗುವುದಕ್ಕಿಂತ ನೌಕರರ ವಿಶ್ವಾಸ ಗಳಿಸುವುದೇ ದೊಡ್ಡ ಸಾಧನೆ’: ಸಿ.ಎಸ್. ಷಡಾಕ್ಷರಿ ಕಾರ್ಯವೈಖರಿಗೆ ಸಂಸದ ಬಿ.ವೈ. ರಾಘವೇಂದ್ರ ಮೆಚ್ಚುಗೆ

ಜರ್ಮನಿಯಲ್ಲೂ ಶರಣ ಸಂಸ್ಕೃತಿಯ ವೈಭವ: “ವಿದೇಶದಲ್ಲೂ ತಾಯ್ನಾಡಿನ ಸಂಸ್ಕಾರ ಉಳಿಸಿಕೊಳ್ಳುವುದೇ ನಿಜವಾದ ಧರ್ಮನಿಷ್ಠೆ” – ಮ್ಯೂನಿಚ್‌ನಲ್ಲಿ ತರಳಬಾಳು ಶ್ರೀಗಳ ಜಾಗತಿಕ ಕರೆ

Leave a Comment