ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಹೈಕಮಾಂಡ್‌ ಕರೆದಾಗ ಸಿಎಂ ಜತೆ ದೆಹಲಿಗೆ ಹೋಗುತ್ತೇವೆ; ಕದ್ದುಮುಚ್ಚಿ ಹೋಗಲ್ಲ: ಡಿ.ಕೆ. ಶಿವಕುಮಾರ್

On: December 20, 2025 11:24 PM
Follow Us:

ಬೆಂಗಳೂರು, ಡಿ.20: ಹೈಕಮಾಂಡ್‌ ನಾಯಕರು ಸೂಕ್ತ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನಗೆ ಕರೆಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಆ ವೇಳೆ ಇಬ್ಬರೂ ಒಟ್ಟಾಗಿ ದೆಹಲಿಗೆ ತೆರಳುತ್ತೇವೆ. ಇದರಲ್ಲಿ ಯಾವುದೇ ಗುಪ್ತತೆಯ ಪ್ರಶ್ನೆಯೇ ಇಲ್ಲ. ನಾನು ಕದ್ದುಮುಚ್ಚಿ ಹೋಗುವ ವ್ಯಕ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ನಾಯಕರು ಆಹ್ವಾನ ನೀಡಿದರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. “ಹೈಕಮಾಂಡ್‌ ನಾಯಕರು ನಮ್ಮಿಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಆಗ ನಾವು ದೆಹಲಿಗೆ ಹೋಗುತ್ತೇವೆ” ಎಂದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಚಾರ್ಜ್‌ಶೀಟ್ ಕೋರ್ಟ್‌ನಲ್ಲಿ ತಿರಸ್ಕೃತಗೊಂಡಿದೆ. ಈಗ ಒಂದು ಎಫ್‌ಐಆರ್ ಮಾತ್ರ ಬಾಕಿ ಉಳಿದಿದೆ. ನಮ್ಮ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯ ವಿರುದ್ಧವೇ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ವಿಧಾನ ಮಂಡಲ ಅಧಿವೇಶನದ ಬಳಿಕ ತಾವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಕುರಿತು ಚರ್ಚೆ ನಡೆಯುತ್ತಿದೆ ಎಂಬ ಪ್ರಶ್ನೆಗೆ, “ಆ ರೀತಿ ಏನಾದರೂ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ” ಎಂದು ಹೇಳಿದರು.

ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಕುರಿತು ಕೇಳಿದಾಗ, “ನಾನು ಮಂಗಳವಾರ ದೆಹಲಿಗೆ ತೆರಳುತ್ತೇನೆ. ಆ ವೇಳೆ ದೆಹಲಿ ಪೊಲೀಸರನ್ನು ಭೇಟಿ ಮಾಡುತ್ತೇನೆ. ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಕರೆದಿರುವ ಸಭೆಯಲ್ಲಿ ಭಾಗವಹಿಸುತ್ತೇನೆ” ಎಂದರು.

ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಕೇಂದ್ರ ಅರಣ್ಯ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರನ್ನು ಭೇಟಿಯಾಗಲು ಸಮಯ ಕೋರಿರುವುದಾಗಿ ಹೇಳಿದರು. “ರಾಜ್ಯದ ಹಿತಾಸಕ್ತಿಗಾಗಿ ಈ ಭೇಟಿಗಳು ಅಗತ್ಯ. ಎಲ್ಲ ಕಾರ್ಯ ಕ್ರಮಗಳು ಮುಗಿದ ಬಳಿಕ ಅವಕಾಶ ದೊರೆತರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ” ಎಂದು ಹೇಳಿದರು.

ನಾಗಸಾಧುಗಳು ಆಶೀರ್ವಾದ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಅವರು ಮನೆಗೆ ಬಂದಿದ್ದಾರೆ. ಮನೆಗೆ ಬಂದವರನ್ನು ತಿರಸ್ಕರಿಸಲು ಸಾಧ್ಯವಿಲ್ಲ. ರಾಜಕೀಯದಲ್ಲಿರುವ ಕಾರಣ ಸಾಧು–ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲ ವರ್ಗದ ಜನರ ಆಶೀರ್ವಾದ ನಮಗೆ ಅಗತ್ಯ” ಎಂದರು.
“ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯನ್ನು ನಿರ್ವಹಿಸುತ್ತಿದ್ದು, ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸಹಾಯ ಮಾಡುತ್ತಿದೆ” ಎಂದು ಅವರು ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment