ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಗಡಿಗಳಿಲ್ಲ: ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಸಚಿವ ಮಧು ಬಂಗಾರಪ್ಪ

On: January 16, 2026 5:08 PM
Follow Us:

ಚೆನ್ನೈ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು 2026ರ 4ನೇ ಚೆನ್ನೈ ಅಂತರಾಷ್ಟ್ರೀಯ ಪುಸ್ತಕ ಮೇಳ (CIBF) ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಸಾಹಿತ್ಯಾಸಕ್ತರು ಹಾಗೂ ಗಣ್ಯರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ತಮಿಳುನಾಡು ಶಾಲಾ ಶಿಕ್ಷಣ ಸಚಿವರಾದ ಡಾ. ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ನೀಡಿದ ಪ್ರೀತಿಯ ಆಹ್ವಾನ ಮತ್ತು ಆತ್ಮೀಯ ಆತಿಥ್ಯಕ್ಕೆ ಹೃತ್ಪೂರ್ವಕವಾಗಿ ಕೃತಜ್ಞತೆ ಸಲ್ಲಿಸಿದ ಸಚಿವರು, ಇಂತಹ ಸಾಹಿತ್ಯಿಕ ವೇದಿಕೆಗಳು ರಾಜ್ಯಗಳ ನಡುವೆ ಸಾಂಸ್ಕೃತಿಕ ಸೇತುವೆಗಳನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಸಮಾರಂಭದಲ್ಲಿ ಮಾತನಾಡಿದ ಅವರು, ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಯಾವುದೇ ಗಡಿಗಳಿಲ್ಲ. ರಾಜ್ಯಗಳು ಹಾಗೂ ರಾಷ್ಟ್ರಗಳನ್ನು ಮೀರಿ ಸಾಹಿತ್ಯ ನಮ್ಮೆಲ್ಲರನ್ನೂ ಒಟ್ಟಿಗೆ ಬೆಸೆಯುವ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟರು. ದಕ್ಷಿಣ ಭಾರತದ ಶ್ರೀಮಂತ ಸಾಂಸ್ಕೃತಿಕ ಮತ್ತು ಭಾಷಾ ಪರಂಪರೆ ವಿಶ್ವಕ್ಕೆ ಮಾದರಿಯಾಗಿದ್ದು, ಅದನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸಲು ಎಲ್ಲರೂ ಸಂಯುಕ್ತವಾಗಿ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ವಿಚಾರಗಳ ವಿನಿಮಯ, ಅಕ್ಷರ ಲೋಕದ ಶಕ್ತಿ ಹಾಗೂ ಪುಸ್ತಕ ಸಂಸ್ಕೃತಿಯ ಆಚರಣೆ ಇಂತಹ ಅಂತರಾಷ್ಟ್ರೀಯ ವೇದಿಕೆಗಳ ಮೂಲಕ ನಿರಂತರವಾಗಿ ಮುಂದುವರಿಯಬೇಕು. ಪುಸ್ತಕಗಳು ಮಾನವೀಯ ಮೌಲ್ಯಗಳನ್ನು ಬಲಪಡಿಸುವುದರ ಜೊತೆಗೆ, ಜ್ಞಾನ ವಿಸ್ತರಣೆಗೆ ದಾರಿಯಾಗುತ್ತವೆ ಎಂದು ಸಚಿವರು ಹೇಳಿದರು.

ಈ ಉದ್ಘಾಟನಾ ಸಮಾರಂಭದಲ್ಲಿ ತಮಿಳುನಾಡು ಶಾಲಾ ಶಿಕ್ಷಣ ಸಚಿವರಾದ ಡಾ. ಅನ್ಬಿಲ್ ಮಹೇಶ್ ಪೊಯ್ಯಮೊಳಿ, ಸಂಸದರಾದ ಶ್ರೀಮತಿ ಕನಿಮೊಳಿ ಕರುಣಾನಿಧಿ, ಫ್ರಾಂಕ್‌ಫರ್ಟ್ ಪುಸ್ತಕ ಮೇಳದ ಉಪಾಧ್ಯಕ್ಷರಾದ ಕ್ಲೌಡಿಯಾ ಕೈಸರ್, ಫ್ರಾನ್ಸ್‌ನ ಕಾನ್ಸುಲ್ ಜನರಲ್ ಎಟಿಯೆನ್ ರೋಲ್ಯಾಂಡ್–ಪೀಗ್, ತಮಿಳುನಾಡು ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಬಿ. ಚಂದ್ರಮೋಹನ್, ಕೇರಳ ಶಾಲಾ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಾಸುಕಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ಇತಿಹಾಸಕಾರರಾದ ಡಾ. ಎ.ಆರ್. ವೆಂಕಟಾಚಲಪತಿ, ಚೆನ್ನೈ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಮನುಷ್ಯಪುತ್ತಿರನ್, ತಮಿಳುನಾಡು ಪಠ್ಯಪುಸ್ತಕ ಮತ್ತು ಶೈಕ್ಷಣಿಕ ಸೇವೆಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ. ಆರತಿ, ಸಾರ್ವಜನಿಕ ಗ್ರಂಥಾಲಯಗಳ ನಿರ್ದೇಶಕಿ ಎಸ್. ಜಯಂತಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ನೀಟ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಅಪಪ್ರಚಾರ, ಹಿಜಾಬ್ ಮೂಲಕ ಮತಬ್ಯಾಂಕ್ ರಾಜಕಾರಣ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ ಆರೋಪ

​ಶಿವಮೊಗ್ಗದಲ್ಲಿ ಹರಿದುಬರಲಿದೆ ಭಕ್ತಿಯ ಮಹಾಪೂರ: 34 ವರ್ಷಗಳ ಬಳಿಕ ಜಗದ್ಗುರುಗಳ ಭವ್ಯ ಅಡ್ಡಪಲ್ಲಕ್ಕಿ ಉತ್ಸವ, ಬಿಎಸ್‌ವೈಗೆ ಅಭಿನಂದನೆ ಹಾಗೂ ಬಸವೇಶ್ವರ ಸೊಸೈಟಿಯ ಶತಮಾನೋತ್ಸವದ ತ್ರಿವೇಣಿ ಸಂಗಮ!

​ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ಗೆ ಸುಪ್ರೀಂ ‘ಶಾಕ್’; ಇನ್ನೂ ಒಂದು ವರ್ಷ ಜೈಲೇ ಫಿಕ್ಸ್!

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಚುನಾವಣಾ ಆಯೋಗದ ‘ಮಹಾ ಮಾಸ್ಟರ್ ಪ್ಲಾನ್’: ಜೂನ್ 30ರಿಂದ ಮನೆ-ಮನೆಗೆ ಅಧಿಕಾರಿಗಳ ಭೇಟಿ ಆರಂಭ

ನೀಟ್ ಅಕ್ರಮದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಲೆಗಳಲ್ಲಿ ಹಿಜಾಬ್ ಕಿಡಿ: ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಕೆಂಡಾಮಂಡಲ

Leave a Comment