ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

On: February 11, 2026 2:21 PM
Follow Us:

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಸತ್‌ನಲ್ಲಿ ಉತ್ತರ ನೀಡದೆ ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, “ಪ್ರಧಾನಿ ನರೇಂದ್ರ ಮೋದಿ ಜೀ ಎಲ್ಲಿಯೂ ತಪ್ಪಿಸಿಕೊಂಡು ಹೋಗಿಲ್ಲ. ಅವರು ಸಂಸತ್‌ ಭವನದಲ್ಲೇ ಇದ್ದು ರಾಜ್ಯಸಭೆಯಲ್ಲಿ ನಿಮ್ಮ ಪಕ್ಷ ಹಾಗೂ ವಿರೋಧ ಪಕ್ಷಗಳ ನಡವಳಿಕೆ, ಧೋರಣೆಗಳನ್ನು ಬಯಲಿಗೆಳೆದು ದಿಟ್ಟವಾಗಿ ಮಾತನಾಡಿದ್ದಾರೆ.

ಲೋಕಸಭೆಯಲ್ಲಿ ನಿಮ್ಮ ಪಕ್ಷದ ಸದಸ್ಯರು ತೋರಿದ ಅಸಂಸದೀಯ ನಡವಳಿಕೆ ಮತ್ತು ಕುಚೇಷ್ಟೆಗಳ ಬಗ್ಗೆ ಸ್ಪಷ್ಟವಾಗಿ ಉತ್ತರ ನೀಡಿದ್ದಾರೆ” ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಮೇಲೆಯೇ “ತಪ್ಪಿಸಿಕೊಳ್ಳುವ ಸಂಸ್ಕೃತಿ” ಇದೆ ಎಂದು ಆರೋಪಿಸಿದ ವಿಜಯೇಂದ್ರ, “ಇಂತಹ ಸಂಸ್ಕೃತಿ ನಿಮ್ಮ ಕಾಂಗ್ರೆಸ್‌ನ ನೆಲೆಯಿಂದಲೇ ಹುಟ್ಟಿಕೊಂಡಿದೆ. ಇದಕ್ಕೆ ಸಾಕ್ಷಿಯಾಗಿ ನಿಮ್ಮ ನಾಯಕ ರಾಹುಲ್ ಗಾಂಧಿಯವರೇ ನಮ್ಮ ಕಣ್ಣ ಮುಂದೆ ಇದ್ದಾರೆ” ಎಂದು ಟೀಕಿಸಿದ್ದಾರೆ.

“ಕರ್ನಾಟಕದಲ್ಲಿ ಅರಾಜಕತೆ, ಆಡಳಿತ ಯಂತ್ರ ಸ್ಥಗಿತ”

ರಾಜ್ಯ ಆಡಳಿತದ ಕುರಿತು ಕಟುವಾಗಿ ಮಾತನಾಡಿದ ವಿಜಯೇಂದ್ರ, “ಕರ್ನಾಟಕದಲ್ಲಿ ನಿಮ್ಮ ಆಡಳಿತದ ಪ್ರತಿಫಲವಾಗಿ ಅರಾಜಕತೆ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಳೆದ ಒಂದು ವರ್ಷದಿಂದಲೂ ಹಗ್ಗಜಗ್ಗಾಟ ನಡೆಯುತ್ತಿದೆ. ಇದರ ಪರಿಣಾಮವಾಗಿ ಆಡಳಿತ ಯಂತ್ರವೇ ಸ್ಥಗಿತಗೊಂಡಿದೆ” ಎಂದು ದೂರಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಕಮೀಷನ್ ದಂಧೆ ತಾಂಡವವಾಡುತ್ತಿದೆ ಎಂದು ಆರೋಪಿಸಿದ ಅವರು, “ಜನರ ಗೋಳು ಹೇಳತೀರದಾಗಿದೆ. ಸಮಸ್ಯೆಗಳನ್ನು ಬಗೆಹರಿಸಬೇಕಾದ ನಿಮ್ಮ ಹೈಕಮಾಂಡ್‌ ರೂವಾರಿ ರಾಹುಲ್ ಗಾಂಧಿಯವರು ಕೈಗೆ ಸಿಗದೇ ತಪ್ಪಿಸಿಕೊಂಡಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಡಿಕೆಶಿ ದೆಹಲಿಗೆ ಅಲೆದಾಟ”

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುರಿತು ಪ್ರಸ್ತಾಪಿಸಿದ ವಿಜಯೇಂದ್ರ, “ರಾಹುಲ್ ಗಾಂಧಿಯವರನ್ನು ಹುಡುಕಿಕೊಂಡು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಿನಬಿಟ್ಟು ದಿನ ದೆಹಲಿಗೆ ದೈನೇಸಿ ಸ್ಥಿತಿಯಲ್ಲಿ ಅಲೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಮೊದಲು ನೀವು ಮತ್ತು ಉಪ ಮುಖ್ಯಮಂತ್ರಿ ಸೇರಿ ರಾಹುಲ್ ಗಾಂಧಿಯವರು ಎಲ್ಲಿದ್ದಾರೆ ಎಂದು ಹುಡುಕಿಕೊಳ್ಳಿ. ಮುಖ್ಯಮಂತ್ರಿ ಸ್ಥಾನದ ಕಗ್ಗಂಟನ್ನು ಬಿಡಿಸಿಕೊಳ್ಳಿ. ಬಳಿಕ ಪ್ರಧಾನಿ ಮೋದಿ ಬಗ್ಗೆ ಮಾತನಾಡಿ” ಎಂದು ಸವಾಲು ಹಾಕಿದ್ದಾರೆ.

“ಜನತೆ ತಕ್ಕ ಪಾಠ ಕಲಿಸುತ್ತಾರೆ”

ಕಾಂಗ್ರೆಸ್ ಸರ್ಕಾರದ ವಿರುದ್ಧ ಜನತೆ ತೀವ್ರ ಅಸಮಾಧಾನ ಹೊಂದಿದ್ದಾರೆ ಎಂದು ಹೇಳಿದ ವಿಜಯೇಂದ್ರ, “ಕರ್ನಾಟಕ ಜನತೆಯ ಶಾಪದಿಂದ ಮುಕ್ತರಾಗಿರಿ. ಇಲ್ಲವಾದರೆ ಅತೀ ಶೀಘ್ರದಲ್ಲೇ ಕರ್ನಾಟಕ ಜನತೆ ನಿಮಗೂ ನಿಮ್ಮ ಕಾಂಗ್ರೆಸ್ ಪಕ್ಷಕ್ಕೂ ಅಡ್ರೆಸ್‌ ಸಿಗದ ಪರಿಸ್ಥಿತಿಯನ್ನು ತಳ್ಳುವ ಭಾಗ್ಯ ನಿಮಗೆ ಗ್ಯಾರಂಟಿಯಾಗಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಬಿಎಸ್‌ವೈ ವಿಧಾನಸಭೆಯಲ್ಲಿ ಒಂಟಿ ಸಲಗನಂತೆ ಹೋರಾಡಿದ ನಾಯಕ: ಗೋವಿಂದ ಕಾರಜೋಳ

‘ಅಭಿಮಾನೋತ್ಸವ’ ಯಶಸ್ವಿ, ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಇಂದಿನಿಂದಲೇ ಶ್ರಮಿಸಿ: ಬಿ.ವೈ.ರಾಘವೇಂದ್ರ ಕರೆ

ನೀಟ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಅಪಪ್ರಚಾರ, ಹಿಜಾಬ್ ಮೂಲಕ ಮತಬ್ಯಾಂಕ್ ರಾಜಕಾರಣ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ ಆರೋಪ

​ಶಿವಮೊಗ್ಗದಲ್ಲಿ ಹರಿದುಬರಲಿದೆ ಭಕ್ತಿಯ ಮಹಾಪೂರ: 34 ವರ್ಷಗಳ ಬಳಿಕ ಜಗದ್ಗುರುಗಳ ಭವ್ಯ ಅಡ್ಡಪಲ್ಲಕ್ಕಿ ಉತ್ಸವ, ಬಿಎಸ್‌ವೈಗೆ ಅಭಿನಂದನೆ ಹಾಗೂ ಬಸವೇಶ್ವರ ಸೊಸೈಟಿಯ ಶತಮಾನೋತ್ಸವದ ತ್ರಿವೇಣಿ ಸಂಗಮ!

​ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ಗೆ ಸುಪ್ರೀಂ ‘ಶಾಕ್’; ಇನ್ನೂ ಒಂದು ವರ್ಷ ಜೈಲೇ ಫಿಕ್ಸ್!

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಚುನಾವಣಾ ಆಯೋಗದ ‘ಮಹಾ ಮಾಸ್ಟರ್ ಪ್ಲಾನ್’: ಜೂನ್ 30ರಿಂದ ಮನೆ-ಮನೆಗೆ ಅಧಿಕಾರಿಗಳ ಭೇಟಿ ಆರಂಭ

Leave a Comment