ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ದುಬೈನಲ್ಲಿ ಶಿವಮೊಗ್ಗದ ಪ್ರತಿಭೆಗೆ ಅಂತರರಾಷ್ಟ್ರೀಯ ಗೌರವ: ಪ್ರದೀಪ್ ವಿ. ಎಲಿ ಅವರಿಗೆ ‘ವಿಜಯರತ್ನ 2026’ ಪ್ರಶಸ್ತಿ

On: March 2, 2026 7:39 PM
Follow Us:

ದುಬೈ: ಉದ್ಯಮ ಕ್ಷೇತ್ರದಲ್ಲಿನ ಸಾಧನೆ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ವಿಶಿಷ್ಟ ಗುರುತಿಸಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಉದ್ಯಮಿ ಪ್ರದೀಪ್ ವಿ. ಎಲಿ ಅವರಿಗೆ ದುಬೈನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ “ವಿಜಯರತ್ನ ಇಂಟರ್‌ನ್ಯಾಷನಲ್ 2026” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಫೆಬ್ರವರಿ 28, 2026ರಂದು ದುಬೈನಲ್ಲಿ ಆಯೋಜಿಸಲಾದ ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ಉದ್ಯಮ ಕ್ಷೇತ್ರದಲ್ಲಿ ಸತತ ಪರಿಶ್ರಮ, ನಿಷ್ಠೆ ಮತ್ತು ಸಮಾಜಪರ ಬದ್ಧತೆಯ ಮೂಲಕ ಗಮನಾರ್ಹ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಪ್ರದೀಪ್ ವಿ. ಎಲಿ ಅವರನ್ನು “ವಿಜಯರತ್ನ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರದೀಪ್ ವಿ. ಎಲಿ ಅವರು ಗಣೇಶ್ ರೂಫಿಂಗ್ ಸಂಸ್ಥೆಯ ಮಾಲೀಕರಾಗಿದ್ದು, ತಮ್ಮ ವ್ಯವಹಾರದಲ್ಲಿ ಗುಣಮಟ್ಟ, ನಂಬಿಕೆ ಮತ್ತು ಸೇವಾ ಮನೋಭಾವವನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾರೆ. ಉದ್ಯಮ ಕ್ಷೇತ್ರದಲ್ಲಿ ಮಾತ್ರವಲ್ಲದೆ, ಸಾಮಾಜಿಕ ಸೇವೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, ಶಿವಮೊಗ್ಗ ಜಿಲ್ಲಾ ಘಟಕದ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಾಜದ ಅಭಿವೃದ್ಧಿ, ಸಂಘಟನೆಯ ಬಲವರ್ಧನೆ ಮತ್ತು ವಿವಿಧ ಸೇವಾ ಕಾರ್ಯಕ್ರಮಗಳ ಮೂಲಕ ಅವರು ಜನಮನ ಗೆದ್ದಿದ್ದಾರೆ.

ಈ ಗೌರವದ ಹಿನ್ನೆಲೆಯಲ್ಲಿ ಡಾ.ಆನಂದ್ ಶಂಕೇಶ್ವರ್, ವ್ಯವಸ್ಥಾಪಕ ನಿರ್ದೇಶಕರು, VRL ಗ್ರೂಪ್‌, ಹುಬ್ಬಳ್ಳಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. “ಉದ್ಯಮದಲ್ಲಿ ಶ್ರಮ ಹಾಗೂ ಪ್ರಾಮಾಣಿಕತೆ ಇದ್ದರೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಸಾಧ್ಯವೆಂಬುದಕ್ಕೆ ಪ್ರದೀಪ್ ವಿ. ಎಲಿ ಅವರು ಉತ್ತಮ ಉದಾಹರಣೆ” ಎಂದು ಅವರು ಶ್ಲಾಘಿಸಿದರು.

ದುಬೈನಲ್ಲಿ ನಡೆದ ಈ ಸಮಾರಂಭದಲ್ಲಿ ವಿವಿಧ ದೇಶಗಳಿಂದ ಗಣ್ಯರು ಭಾಗವಹಿಸಿದ್ದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರದೀಪ್ ವಿ. ಎಲಿ ಅವರು, “ಈ ಗೌರವ ನನ್ನೊಬ್ಬರಿಗಲ್ಲ, ನನ್ನ ಕುಟುಂಬ, ಸಹೋದ್ಯೋಗಿಗಳು ಹಾಗೂ ಸಮಾಜದ ಆಶೀರ್ವಾದದ ಫಲ. ಮುಂದೆಯೂ ಸಮಾಜಮುಖಿ ಕಾರ್ಯಗಳಲ್ಲಿ ಇನ್ನಷ್ಟು ತೊಡಗಿಸಿಕೊಳ್ಳುತ್ತೇನೆ” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಪ್ರದೀಪ್ ವಿ. ಎಲಿ ಅವರಿಗೆ ಲಭಿಸಿದ ಈ ಅಂತರರಾಷ್ಟ್ರೀಯ ಮಟ್ಟದ ಗೌರವದಿಂದ ಶಿವಮೊಗ್ಗ ಜಿಲ್ಲೆಯ ಗೌರವ ಹೆಚ್ಚಾಗಿದೆ. ಸಂಘಟನೆಯ ಎಲ್ಲಾ ಸದಸ್ಯರು, ಅಭಿಮಾನಿಗಳು ಹಾಗೂ ಗಣ್ಯರು ಅವರನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಶುಭ ಹಾರೈಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಸಾವಿನ ಬಲೆ ಹೆಣೆಯುತ್ತಿರುವ ಕೇಬಲ್‌ಗಳು: ವಿದ್ಯುತ್ ಇಲಾಖೆ–ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಕೋಟೆ ರಸ್ತೆಯಲ್ಲಿ ಹಸು ಬಲಿ; ನಗರದ ವಿದ್ಯುತ್ ಕಂಬಗಳಲ್ಲೇ ಸಾಕ್ಷಾತ್ ಯಮನ ದರ್ಶನ!

ಸಮಾಜಮುಖಿ ಸೇವೆಯಲ್ಲಿ ಶಿವಮೊಗ್ಗ ಸರ್ವೋದಯ ಮಂಡಳಿ ರಾಜ್ಯಕ್ಕೆ ಮಾದರಿ: ಡಾ. ಎಚ್.ಎಸ್. ಸುರೇಶ್

​ವಿದ್ಯೆಯ ಜೊತೆಗೆ ಸಂಸ್ಕಾರಯುತ ಶಿಕ್ಷಣ ಇಂದಿನ ತುರ್ತು ಅಗತ್ಯ; ಸಿದ್ಧಗಂಗಾ ಶ್ರೀಗಳ ದಾಸೋಹ ಪರಂಪರೆಯೇ ನಮಗೆ ಪ್ರೇರಣೆ: ಸಿ.ಎಸ್. ಷಡಾಕ್ಷರಿ

ಶಿವಮೊಗ್ಗದ ನೀರಾವರಿ ಯೋಜನೆಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಿ; ರೈತರ ಹಿತಕ್ಕೆ ಆದ್ಯತೆ ನೀಡಿ: ಸಚಿವ ರಾಮಲಿಂಗಾರೆಡ್ಡಿಗೆ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯ

‘ಎಂಪಿ, ಎಂಎಲ್‌ಎ ಆಗುವುದಕ್ಕಿಂತ ನೌಕರರ ವಿಶ್ವಾಸ ಗಳಿಸುವುದೇ ದೊಡ್ಡ ಸಾಧನೆ’: ಸಿ.ಎಸ್. ಷಡಾಕ್ಷರಿ ಕಾರ್ಯವೈಖರಿಗೆ ಸಂಸದ ಬಿ.ವೈ. ರಾಘವೇಂದ್ರ ಮೆಚ್ಚುಗೆ

ಜರ್ಮನಿಯಲ್ಲೂ ಶರಣ ಸಂಸ್ಕೃತಿಯ ವೈಭವ: “ವಿದೇಶದಲ್ಲೂ ತಾಯ್ನಾಡಿನ ಸಂಸ್ಕಾರ ಉಳಿಸಿಕೊಳ್ಳುವುದೇ ನಿಜವಾದ ಧರ್ಮನಿಷ್ಠೆ” – ಮ್ಯೂನಿಚ್‌ನಲ್ಲಿ ತರಳಬಾಳು ಶ್ರೀಗಳ ಜಾಗತಿಕ ಕರೆ

Leave a Comment