ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಆತಂಕ ಬೇಡ, ನಿಮ್ಮ ಜೊತೆಗೆ ನಾವು ಇದ್ದೇವೆ”: ದುಬೈನಲ್ಲಿ ಸಿಲುಕಿದ ಕನ್ನಡಿಗರಿಗೆ ಧೈರ್ಯ ತುಂಬಿದ ಬಿ.ವೈ.ವಿಜಯೇಂದ್ರ

On: March 3, 2026 7:23 PM
Follow Us:

ಬೆಂಗಳೂರು: ಅಮೆರಿಕ, ಇಸ್ರೇಲ್–ಇರಾನ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ನಡುವೆಯೇ ದುಬೈಯಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ.ವಿಜಯೇಂದ್ರ ಇಂದು ದೂರವಾಣಿ ಮೂಲಕ ಮಾತನಾಡಿ ಧೈರ್ಯ ತುಂಬಿದರು.

ಪ್ರಶಸ್ತಿ ಸ್ವೀಕಾರಕ್ಕಾಗಿ ತೆರಳಿದ್ದ ಒಟ್ಟು 61 ಸದಸ್ಯರ ತಂಡವು ದುಬೈಯಲ್ಲಿ ವಾಸ್ತವ್ಯವಿದ್ದು, ಇತ್ತೀಚಿನ ಯುದ್ಧ ಪರಿಸ್ಥಿತಿಯಿಂದಾಗಿ ವಾಪಸ್ಸು ಪ್ರಯಾಣ ಸಾಧ್ಯವಾಗದೆ ಆತಂಕದಲ್ಲಿದೆ. ಅರಸೀಕೆರೆಯ ಐವರು ಕೂಡ ಈ ತಂಡದಲ್ಲಿದ್ದು, ಹೋಟೆಲ್‌ನಲ್ಲಿ ತಂಗಿರುವುದಾಗಿ ತಿಳಿಸಿದರು. ಈಗಾಗಲೇ ಏಳು ದಿನಗಳು ಕಳೆದಿದ್ದು, ಇಂದು ರಾತ್ರಿ ನಿಗದಿಯಾಗಿದ್ದ ವಿಮಾನಯಾನವೂ ರದ್ದಾಗಿದೆ ಎಂದು ಅವರು ವಿವರಿಸಿದರು.

ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರನ್ನು ತಕ್ಷಣ ಸುರಕ್ಷಿತವಾಗಿ ಕರ್ನಾಟಕಕ್ಕೆ ಕರೆತರಲು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ವಿಜಯೇಂದ್ರ ಭರವಸೆ ನೀಡಿದರು. ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗಮನಕ್ಕೂ ವಿಷಯವನ್ನು ತರಲಾಗುವುದು ಎಂದು ಹೇಳಿದರು.

ಹಿಂದೆ ಉಕ್ರೇನ್‌ನಲ್ಲಿ ಯುದ್ಧ ಪರಿಸ್ಥಿತಿ ಉದ್ಭವಿಸಿದಾಗ ಕೇಂದ್ರ ಸರ್ಕಾರವು ತಕ್ಷಣ ಕ್ರಮ ಕೈಗೊಂಡು ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಲು ವ್ಯವಸ್ಥೆ ಮಾಡಿತ್ತು. ಇದೇ ರೀತಿಯಲ್ಲಿ ಈಗಲೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

“ಆತಂಕಗೊಳ್ಳಬೇಡಿ. ನೀವು ಎಲ್ಲರೂ ಸುರಕ್ಷಿತವಾಗಿ ವಾಪಸ್ ಬರಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಾನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ,” ಎಂದು ವಿಜಯೇಂದ್ರ ತಂಡದ ಸದಸ್ಯರಿಗೆ ಧೈರ್ಯ ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment