ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬಜೆಟ್ 2026: ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

On: March 6, 2026 9:52 PM
Follow Us:

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ‘ಖಾಲಿ ಚೊಂಬಿನಂತಿದೆ’ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ನಾಯಕರು ಇಂದು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಸೇರಿದಂತೆ ಮಾಜಿ ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.

“ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ” ಎಂಬ ಫಲಕಗಳನ್ನು ಹಿಡಿದು ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಲವರು ಕೈಯಲ್ಲಿ ಖಾಲಿ ಚೊಂಬುಗಳನ್ನು ಹಿಡಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ವೇಳೆ “ಯುವಕರಿಗೆ ಮೋಸ ಮಾಡಿದ ಸರ್ಕಾರಕ್ಕೆ ಧಿಕ್ಕಾರ”, “ಮೂರು ವರ್ಷಗಳಲ್ಲಿ ಮೂರೂವರೆ ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರಕ್ಕೆ ಧಿಕ್ಕಾರ”, “ಬಜೆಟ್‌ ಹೆಸರಿನಲ್ಲಿ ಖಾಲಿ ಚೊಂಬು ನೀಡಿದ ಸರ್ಕಾರಕ್ಕೆ ಧಿಕ್ಕಾರ” ಎಂಬ ಘೋಷಣೆಗಳನ್ನು ಕೂಗಿದರು.

ಇದೇ ವೇಳೆ “ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ”, “ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಸರ್ಕಾರಕ್ಕೆ ಧಿಕ್ಕಾರ”, “ರಾಜ್ಯದ ರೈತರಿಗೆ ಖಾಲಿ ಚೊಂಬು ಕೊಟ್ಟ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment