ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ಆರ್‌.ಎಸ್‌.ಐಗಳಿಗೆ ಶಿವಮೊಗ್ಗ ಪೊಲೀಸರಿಂದ ಗೌರವ ನಮನ; ಕುಟುಂಬಕ್ಕೆ ಸಾಂತ್ವನ ತಿಳಿಸಿದ ಎಸ್‌.ಪಿ ನಿಖಿಲ್ ಬಿ.

On: March 16, 2026 8:22 PM
Follow Us:

ಶಿವಮೊಗ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ದುರ್ಘಟನೆಯ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ದುರ್ಭಾಗ್ಯವಶಾತ್ ಪ್ರಾಣ ಕಳೆದುಕೊಂಡ ಘಟನೆ ರಾಜ್ಯದೆಲ್ಲೆಡೆ ದುಃಖದ ವಾತಾವರಣವನ್ನುಂಟುಮಾಡಿದೆ. ಈ ಅಪಘಾತದಲ್ಲಿ ಅಮರೇಶ್ ಬಿ. (ಆರ್.ಎಸ್‌.ಐ), ಮಂಜುನಾಥ್ ದಾರಿಮನಿ (ಆರ್.ಎಸ್‌.ಐ) ಹಾಗೂ ಸಚಿನ್ ವಿ. (ಆರ್.ಎಸ್‌.ಐ) ರವರು ಮೃತಪಟ್ಟಿದ್ದಾರೆ.

ಮೃತರಾದ ಪೊಲೀಸ್ ಅಧಿಕಾರಿಗಳಿಗೆ ಗೌರವ ನಮನ ಸಲ್ಲಿಸುವ ಉದ್ದೇಶದಿಂದ 16-03-2026 ರಂದು ಬೆಳಿಗ್ಗೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ., ಐಪಿಎಸ್ ಅವರು, ಶಿವಮೊಗ್ಗ ಜಿಲ್ಲೆಯ ಕುಡುವಳ್ಳಿ ಗ್ರಾಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ದಿವಂಗತ ಸಚಿನ್ ವಿ. (ಆರ್‌.ಎಸ್‌.ಐ) ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ವಂದನೆಗಳನ್ನು ಅರ್ಪಿಸಿದರು.

ಅದರ ಜೊತೆಗೆ, ಮೃತ ಅಧಿಕಾರಿಯ ಕುಟುಂಬಸ್ಥರನ್ನು ಭೇಟಿ ಮಾಡಿದ ಪೊಲೀಸ್ ಅಧೀಕ್ಷಕರು ಅವರಿಗೆ ಸಾಂತ್ವಾನ ಹೇಳಿ, ಈ ದುಃಖದ ಸಮಯದಲ್ಲಿ ಪೊಲೀಸ್ ಇಲಾಖೆ ಸದಾ ಅವರೊಂದಿಗೇ ನಿಲ್ಲುತ್ತದೆ ಎಂದು ಭರವಸೆ ನೀಡಿದರು. ಕುಟುಂಬದ ಸದಸ್ಯರು ಮತ್ತು ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ಸೇವಾ ನಿಷ್ಠೆ ಮತ್ತು ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದ ಸಚಿನ್ ವಿ. ಅವರ ಸೇವೆಯನ್ನು ಸ್ಮರಿಸಿ, ಅವರ ಅಗಲಿಕೆ ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು.

ಈ ವೇಳೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೂವರು ಆರ್‌.ಎಸ್‌.ಐ ಅಧಿಕಾರಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಮೌನಾಚರಣೆ ನಡೆಸಿ, ಮೃತ ಆತ್ಮಗಳಿಗೆ ಶಾಂತಿಸಿಗಲೆಂದು ಪ್ರಾರ್ಥಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment