ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ದಾವಣಗೆರೆ–ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಿ: ಯಡಿಯೂರಪ್ಪ ಮನವಿ

On: March 23, 2026 10:27 PM
Follow Us:

ದಾವಣಗೆರೆ, ಮಾ.23: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮತದಾರರಿಗೆ ಮಹತ್ವದ ಮನವಿ ಮಾಡಿದ್ದಾರೆ. ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಬೇಕೆಂದು ಅವರು ಕರೆ ನೀಡಿದ್ದಾರೆ.

ಇಂದು ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಎರಡೂ ಉಪಚುನಾವಣೆ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಜನರು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯಿಂದ ಬೇಸತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. “ಕಾಂಗ್ರೆಸ್ಸಿಗೆ ಈಗಾಗಲೇ ಅಪಾರ ಬಹುಮತವಿದೆ. ಆದರೆ ಆ ಬಹುಮತ ಜನಪರ ಆಡಳಿತಕ್ಕೆ ಬಳಸಲಾಗುತ್ತಿಲ್ಲ. ಇದರಿಂದ ಜನರಲ್ಲಿ ಅಸಮಾಧಾನ ಹೆಚ್ಚಾಗಿದೆ,” ಎಂದು ಅವರು ಹೇಳಿದರು.

ರಾಜ್ಯದ ಜನತೆ ಬದಲಾವಣೆಯನ್ನು ಬಯಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಎರಡೂ ಕ್ಷೇತ್ರಗಳ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಗೆಲ್ಲಿಸುವ ಮೂಲಕ ಆಡಳಿತದ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದರು. “ಕೈಜೋಡಿಸಿ ವಿನಂತಿಸುತ್ತೇನೆ, ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ, ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಿ,” ಎಂದು ಅವರು ಹೇಳಿದರು.

ಇದೇ ವೇಳೆ ಮುಸ್ಲಿಂ ಸಮುದಾಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ಸಿನ ವಿಶ್ವಾಸದ್ರೋಹ ಈಗಾಗಲೇ ಮುಸ್ಲಿಂ ಸಮುದಾಯಕ್ಕೂ ಮನವರಿಕೆಯಾಗಿದೆ ಎಂದು ಹೇಳಿದರು. “ಮುಸ್ಲಿಂ ಬಂಧುಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತವನ್ನು ಗಮನಿಸಿ, ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಗೆ ಬೆಂಬಲ ನೀಡಬೇಕು,” ಎಂದು ಮನವಿ ಮಾಡಿದರು.

ಮುಖ್ಯಮಂತ್ರಿಗಳ ಇತ್ತೀಚಿನ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಈ ಚುನಾವಣೆಯಲ್ಲಿ ಸೋಲು ಖಚಿತವೆಂದು ತಿಳಿದಿರುವ ಕಾರಣವೇ ಮುಖ್ಯಮಂತ್ರಿಗಳು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ,” ಎಂದು ಟೀಕಿಸಿದರು. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ನಿರೀಕ್ಷೆಗೂ ಮೀರಿ ಉತ್ತಮವಾಗಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಇನ್ನೂ ಅಭ್ಯರ್ಥಿಗಳ ಬಗ್ಗೆ ಮಾತನಾಡಿದ ಅವರು, “ನಮ್ಮ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ,” ಎಂದು ದೃಢ ವಿಶ್ವಾಸ ವ್ಯಕ್ತಪಡಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಪಶುವೈದ್ಯೆಯ ದುರಂತ ಸಾವು: ನೀರಾನೆ ದಾಳಿ ಪ್ರಕರಣಕ್ಕೆ ಉನ್ನತ ಮಟ್ಟದ ತನಿಖೆ – ಸಚಿವ ಮಧು ಬಂಗಾರಪ್ಪ

ಮೇ 17ಕ್ಕೆ ಶಿವಮೊಗ್ಗ ಸಜ್ಜು: ಇತಿಹಾಸ ನಿರ್ಮಿಸಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಗೊಂದಲಕ್ಕೆ ಅಂತ್ಯ: ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಟಿಕೆಟ್ ಗದ್ದಲಕ್ಕೆ ಬ್ರೇಕ್: ದಾವಣಗೆರೆ ದಕ್ಷಿಣಕ್ಕೆ ಸಮರ್ಥ್ ಶಾಮನೂರು ಫಿಕ್ಸ್, ಬಾಗಲಕೋಟೆಗೆ ಉಮೇಶ್ ಮೇಟಿ ಫೈನಲ್!

ಶಿವಮೊಗ್ಗ ಜೈಲಿನಲ್ಲಿ ಸೌಹಾರ್ದದ ಹಬ್ಬ: ಕೈದಿಗಳ ಜೊತೆ ಯುಗಾದಿ–ರಂಜಾನ್ ಆಚರಿಸಿದ ಜೆಸಿ ಶಿವಮೊಗ್ಗ ಮೆಟ್ರೋ

ಏತ ನೀರಾವರಿ ಯೋಜನೆಗಳ ಮಾದರಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಯಶಸ್ಸಿನತ್ತ: ತರಳಬಾಳು ಜಗದ್ಗುರುಗಳ ನೇತೃತ್ವಕ್ಕೆ ಡಾ. ಕೆ.ಪಿ. ಬಸವರಾಜಪ್ಪ ವಿಶ್ವಾಸ

Leave a Comment