ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಆರೋಪಿತರಿಗೆ ಎಫ್‌ಐಆರ್ ಪ್ರತಿ ಕಡ್ಡಾಯ: ಪೊಲೀಸರಿಗೆ ಹೈಕೋರ್ಟ್ ತರಾಟೆ

On: April 12, 2026 10:28 PM
Follow Us:

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ದಾಖಲಾಗುವ ಎಫ್‌ಐಆರ್ (FIR) ಪ್ರತಿಯನ್ನು ಆರೋಪಿತರಿಗೆ ಒದಗಿಸದಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಹೈಕೋರ್ಟ್ ಕಠಿಣ ನಿಲುವು ತಾಳಿದ್ದು, ಇಂತಹ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಎಫ್‌ಐಆರ್ ದಾಖಲಾದ ತಕ್ಷಣವೇ ಅದರ ಪ್ರತಿಯನ್ನು ಪಡೆಯುವುದು ಆರೋಪಿತರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆನ್‌ಲೈನ್‌ನಲ್ಲಿ ಎಫ್‌ಐಆರ್ ಲಭ್ಯವಿದೆ ಎಂಬ ನೆಪವನ್ನು ಹೇಳಿ ಪೊಲೀಸರು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೋರ್ಟ್ ತಾಕೀತು ಮಾಡಿದೆ.

ಎಫ್‌ಐಆರ್‌ಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ನೀಡಲು ನಿರಾಕರಿಸುವುದು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದ್ದು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ನ್ಯಾಯಪೀಠ ಎಚ್ಚರಿಸಿದೆ. ಎಫ್‌ಐಆರ್ ಪ್ರತಿ ನೀಡದ ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇದೇ ವೇಳೆ, ಸಂಬಂಧಿತ ಠಾಣಾಧಿಕಾರಿ ಹಾಗೂ ಉಸ್ತುವಾರಿ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುವ ಅವಕಾಶ ಇರುವುದಾಗಿ ಕೋರ್ಟ್ ಸೂಚನೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಜಮೀನಿನಲ್ಲಿ ಡ್ರೋನ್ ಕ್ಯಾಮೆರಾ ಬಿದ್ದ ಹಿನ್ನೆಲೆ, ಜಮೀನು ಅತಿಕ್ರಮ ಪ್ರವೇಶ ಮತ್ತು ಮಾಲೀಕರಿಗೆ ಅಪಾಯ ಉಂಟುಮಾಡಿದ ಆರೋಪದಡಿ ದೊಡ್ಡಬಳ್ಳಾಪುರ ಗ್ರಾಮೀಣ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸುವಂತೆ, ಸೇನಾ ಬಳಕೆಗೆ ಡ್ರೋನ್ ಪೂರೈಸುವ ಸಂಸ್ಥೆಯಾದ “ನ್ಯೂ ಸ್ಪೇಸ್ ರಿಸರ್ಚ್ ಅಂಡ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್” ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

K.M.Sathish Gowda

Join WhatsApp

Join Now

Facebook

Join Now

Leave a Comment