ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ವಿಚಾರ: ಜನರಲ್ಲಿ ಅನಾವಶ್ಯಕ ಆತಂಕ ಬೇಡ – ಪರಿಸರ ಹಾನಿಗೆ ನಮ್ಮ ಸ್ಪಷ್ಟ ವಿರೋಧ : ಸಂಸದ ಬಿ.ವೈ. ರಾಘವೇಂದ್ರ

On: April 26, 2026 7:02 PM
Follow Us:

ಸಾಗರ: ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತಂತೆ ಇತ್ತೀಚೆಗೆ ಕೆಲವು ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವುದು ಗಮನಕ್ಕೆ ಬಂದಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿದ ಅವರು, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎನ್.ಟಿ.ಪಿ.ಸಿ (National Thermal Power Corporation) ಸಂಸ್ಥೆಯು ರಾಜ್ಯದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ವಿಜಯಪುರ, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ರಾಯಚೂರು ಜಿಲ್ಲೆಗಳನ್ನು ಪ್ರಾಥಮಿಕವಾಗಿ ಗುರುತಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು. ಈ ಜಿಲ್ಲೆಗಳಲ್ಲಿ ಸೂಕ್ತ ಸ್ಥಳಗಳ ಆಯ್ಕೆಗಾಗಿ ಭೂ-ವೈಜ್ಞಾನಿಕ ಅಧ್ಯಯನಗಳು ಹಾಗೂ ಪ್ರಾಥಮಿಕ ಪರಿಶೀಲನೆಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ವಿಷಯ ಗಮನಕ್ಕೆ ಬಂದ ತಕ್ಷಣ ಶಿವಮೊಗ್ಗ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕೃತ ಪ್ರಸ್ತಾವನೆ ಸಲ್ಲಿಸಲಾಗಿಲ್ಲವೆಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ ಎಂದು ರಾಘವೇಂದ್ರ ತಿಳಿಸಿದ್ದಾರೆ. ಇದರಿಂದ ಜಿಲ್ಲೆಯ ಯಾವುದೇ ಭಾಗದಲ್ಲಿ ತಕ್ಷಣದ ಯೋಜನೆ ಜಾರಿಯಾಗುವ ಸಾಧ್ಯತೆ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಇದರಿಂದಾಗಿ ಜನರು ಅನಾವಶ್ಯಕವಾಗಿ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಜಿಲ್ಲೆಯ ಹಿಂದಿನ ಅನುಭವಗಳನ್ನು ಪರಿಗಣಿಸಿದಾಗ ಜನರ ಆತಂಕ ಸಹಜವೆಂಬುದನ್ನು ಅವರು ಒಪ್ಪಿಕೊಂಡರು. ವಿಶೇಷವಾಗಿ ಶರಾವತಿ ಯೋಜನೆಯಿಂದ ಸಂತ್ರಸ್ತರಾದವರಿಗೆ ಇಂದಿಗೂ ಸಮರ್ಪಕ ಭೂಪರಿಹಾರ ದೊರಕದಿರುವುದು ಜನರಲ್ಲಿ ಅಸಮಾಧಾನ ಉಂಟುಮಾಡಿದೆ. ಅಲ್ಲದೆ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪರಿಸರ ಪ್ರೇಮಿಗಳು, ಬುದ್ಧಿಜೀವಿಗಳು ಹಾಗೂ ಸ್ಥಳೀಯರು ವ್ಯಾಪಕ ವಿರೋಧ ವ್ಯಕ್ತಪಡಿಸಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಪರಿಸರ ಸಮತೋಲನ ಮತ್ತು ಜನರ ಹಿತಾಸಕ್ತಿಗೆ ಹಾನಿಯಾಗುವ ಯಾವುದೇ ಯೋಜನೆಗೂ ತಮ್ಮ ಸ್ಪಷ್ಟ ವಿರೋಧವಿದೆ ಎಂದು ಸಂಸದರು ತಿಳಿಸಿದ್ದಾರೆ. ಅಗತ್ಯವಿದ್ದಲ್ಲಿ ಕೇಂದ್ರ ಸರ್ಕಾರದ ಸಂಬಂಧಿತ ಸಚಿವರಿಗೆ ಮನವರಿಕೆ ಮಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದ ಯಾವುದೇ ಪ್ರಸ್ತಾವನೆ ಮುಂದುವರಿಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲೆಯ ಜನರು ಈ ವಿಷಯದಲ್ಲಿ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಜನರ ಹಿತಾಸಕ್ತಿ ಮತ್ತು ಪರಿಸರ ಸಂರಕ್ಷಣೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸುವುದು ನಮ್ಮ ಬದ್ಧತೆಯಾಗಿದೆ. ಸಾರ್ವಜನಿಕರ ವಿಶ್ವಾಸ ಕಾಪಾಡುವಲ್ಲಿ ಜವಾಬ್ದಾರಿಯುತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment