ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗದಲ್ಲಿ ಮಳೆಯ ಅಬ್ಬರ: ಅಡಿಕೆ-ತೆಂಗಿನ ತೋಟಗಳಿಗೆ ಭಾರಿ ಹಾನಿ;’ರಾಷ್ಟ್ರೀಯ ಪ್ರಕೃತಿ ವಿಕೋಪ’ ಎಂದು ಘೋಷಿಸಿ – ಹೆಚ್.ಆರ್. ಬಸವರಾಜಪ್ಪ ಆಗ್ರಹ

On: April 27, 2026 8:11 PM
Follow Us:

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮತ್ತು ಕೂಡ್ಲಿಗೆರೆ ಹೋಬಳಿಗಳಲ್ಲಿ ಸಂಭವಿಸಿದ ಭೀಕರ ಮಳೆ ಹಾಗೂ ಬಿರುಗಾಳಿಯು ರೈತರ ಬದುಕನ್ನು ಬೀದಿಗೆ ತಂದಿದೆ. ಹಿಂದೆಂದೂ ಕಂಡರಿಯದ ಈ ನೈಸರ್ಗಿಕ ವಿಕೋಪವನ್ನು ‘ರಾಷ್ಟ್ರೀಯ ಪ್ರಕೃತಿ ವಿಕೋಪ’ ಎಂದು ಘೋಷಿಸಿ, ಸಂತ್ರಸ್ತರಿಗೆ ತಕ್ಷಣವೇ ಗರಿಷ್ಠ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೊಳೆಹೊನ್ನೂರು ಹೋಬಳಿಯ ಬಹುತೇಕ ಎಲ್ಲಾ ಗ್ರಾಮಗಳು ಹಾಗೂ ಕೂಡ್ಲಿಗೆರೆ ಹೋಬಳಿಯ ಹಲವು ಹಳ್ಳಿಗಳಲ್ಲಿ ಪ್ರಕೃತಿಯ ವಿಕೋಪಕ್ಕೆ ರೈತರು ಕಂಗಾಲಾಗಿದ್ದಾರೆ. ಅಡಿಕೆ, ತೆಂಗು, ಬಾಳೆ ಹಾಗೂ ತೇಗದ ಮರಗಳು ಬುಡಸಮೇತ ಉರುಳಿವೆ. ಸರಾಸರಿ ಒಂದು ಎಕರೆಯಲ್ಲಿದ್ದ 600 ಮರಗಳ ಪೈಕಿ 300ಕ್ಕೂ ಹೆಚ್ಚು ಮರಗಳು ನೆಲಸಮವಾಗಿವೆ. ಇದು ಕೇವಲ ಬೆಳೆ ಹಾನಿಯಲ್ಲ, ರೈತರ ದಶಕಗಳ ಪರಿಶ್ರಮ ಹಾಗೂ ಭವಿಷ್ಯದ ಆದಾಯದ ಮೂಲವೇ ಕಸಿದುಕೊಂಡಂತಾಗಿದೆ.

ಅನೇಕ ಕುಟುಂಬಗಳು ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿವೆ. ಸಂಜೆ 6 ಗಂಟೆಯಿಂದ ಮರುದಿನ ಮಧ್ಯಾಹ್ನದವರೆಗೆ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿದ್ದರಿಂದ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತಗೊಂಡಿತ್ತು. ಇಡೀ ಭಾಗವು ಕತ್ತಲೆಯಲ್ಲಿ ಮುಳುಗಿದ್ದು, ಜನರ ಜನಜೀವನ ದುಸ್ತರವಾಗಿದೆ.

  1. ​ಜಿಲ್ಲಾಧಿಕಾರಿಗಳ ವರದಿ: ಜಿಲ್ಲಾಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ವೈಜ್ಞಾನಿಕ ಸಮೀಕ್ಷೆ ನಡೆಸಿ, ಇದನ್ನು ‘ರಾಷ್ಟ್ರೀಯ ಪ್ರಕೃತಿ ವಿಕೋಪ’ ಎಂದು ಪರಿಗಣಿಸಲು ಕೇಂದ್ರಕ್ಕೆ ವರದಿ ಕಳುಹಿಸಬೇಕು.
  2. ​ರಾಜ್ಯ ಸರ್ಕಾರದ ನಿರ್ಣಯ: ರಾಜ್ಯ ಸರ್ಕಾರವು ವಿಶೇಷ ಸಂಪುಟ ಸಭೆಯ ಮೂಲಕ ಈ ಭಾಗದ ಹಾನಿಯನ್ನು ರಾಷ್ಟ್ರೀಯ ವಿಕೋಪವೆಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು.
  3. ​ತಕ್ಷಣದ ಪರಿಹಾರ: ಮನೆ ಕಳೆದುಕೊಂಡವರಿಗೆ ಮತ್ತು ಬೆಳೆ ಕಳೆದುಕೊಂಡ ರೈತರಿಗೆ ಯಾವುದೇ ವಿಳಂಬವಿಲ್ಲದೆ ತಕ್ಷಣದ ಪರಿಹಾರ ಧನ ವಿತರಿಸಬೇಕು.

​ರೈತರು ಕಷ್ಟಪಟ್ಟು ಬೆಳೆಸಿದ ತೋಟಗಳು ಕಣ್ಣೆದುರೇ ಮಣ್ಣು ಪಾಲಾಗಿವೆ. ಇದು ಕೇವಲ ಮಳೆಯಲ್ಲ, ರೈತರ ಪಾಲಿನ ಮೃತ್ಯು ಬಂದಂತಾಗಿದೆ. ಸರ್ಕಾರ ಕೇವಲ ಭರವಸೆ ನೀಡದೆ, ಸಮರೋಪಾದಿಯಲ್ಲಿ ಸ್ಪಂದಿಸಬೇಕು ಎಂದು ಹೆಚ್.ಆರ್. ಬಸವರಾಜಪ್ಪ ಅವರು ಆಗ್ರಹಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment