ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮೇ 9 ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವಕ್ಕೆ ಕೌಂಟ್‌ಡೌನ್: ಶಿವಮೊಗ್ಗದಿಂದ 50 ಸಾವಿರ ಕಾರ್ಯಕರ್ತರ ಭಾಗವಹಿಸುವ ನಿರೀಕ್ಷೆ – ಎನ್.ಕೆ. ಜಗದೀಶ್

On: April 30, 2026 2:16 PM
Follow Us:

ಶಿವಮೊಗ್ಗ: ದೇಶದಲ್ಲಿ ಪ್ರಪ್ರಥಮ ಬಾರಿಗೆ ರೈತ ಬಜೆಟ್ ಮಂಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ಜನಸೇವೆಯನ್ನು ಗೌರವಿಸಲು ಮೇ 9ರಂದು ಚಿತ್ರದುರ್ಗದಲ್ಲಿ ಬೃಹತ್ ‘ಅಭಿಮಾನೋತ್ಸವ’ ಆಯೋಜಿಸಲಾಗಿದೆ. ಈ ಕುರಿತು ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಕೆ. ಜಗದೀಶ್ ಅವರು ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಯಡಿಯೂರಪ್ಪ ಅವರು ರಾಜ್ಯ ರಾಜಕೀಯದಲ್ಲಿ ಅಪಾರ ಕೊಡುಗೆ ನೀಡಿದ್ದು, ರೈತರು, ಕಾರ್ಮಿಕರು ಹಾಗೂ ಸಮಾಜದ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಅರ್ಪಿಸಿದ ನಾಯಕರು ಎಂದು ಅವರು ಶ್ಲಾಘಿಸಿದರು. ಅವರ ಸೇವೆಯನ್ನು ಸ್ಮರಿಸುವ ಸಲುವಾಗಿ ಈ ಅಭಿಮಾನೋತ್ಸವವನ್ನು ಭವ್ಯವಾಗಿ ಹಾಗೂ ಐತಿಹಾಸಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಬೃಹತ್ ಕಾರ್ಯಕ್ರಮವು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಮಾನ್ಯ ಗೋವಿಂದ ಕಾರಜೋಳ ಅವರು ಅಧ್ಯಕ್ಷತೆ ವಹಿಸಲಿದ್ದು, ಹಲವಾರು ಗಣ್ಯರು ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯಿಂದ ಸುಮಾರು 50,000ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಮಾರ್ಗದರ್ಶನದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಚಾರ ಕಾರ್ಯವನ್ನು ಈಗಾಗಲೇ ವೇಗಗೊಳಿಸಲಾಗಿದ್ದು, ವಾಹನಗಳಿಗೆ ಅಂಟಿಸುವ ವಿಶೇಷ ಸ್ಟಿಕ್ಕರ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು.

ಶಿವಮೊಗ್ಗ ಜಿಲ್ಲೆಯ ಮಟ್ಟದಲ್ಲಿ ಈ ಕಾರ್ಯಕ್ರಮದ ಉಸ್ತುವಾರಿಯನ್ನು ಎಸ್. ಎಸ್ ಜ್ಯೋತಿ ಪ್ರಕಾಶ್ ಹಾಗೂ ಎಸ್. ದತ್ತಾತ್ರಿ ಅವರು ನಿರ್ವಹಿಸುತ್ತಿದ್ದು, ಎಲ್ಲಾ ತಾಲ್ಲೂಕುಗಳಲ್ಲಿ ಸಭೆಗಳು ಹಾಗೂ ಸಂಘಟನೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರೂ ಕಾರ್ಯಕ್ರಮದ ಯಶಸ್ಸಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.

ದಣಿವರಿಯದ ಧೀಮಂತ ರೈತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಅಂಗವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ “ಬಿಎಸ್‌ವೈ ಅಭಿಮಾನೋತ್ಸವ” ಕಾರ್ಯಕ್ರಮದ ಪೂರ್ವಭಾವಿಯಾಗಿ ಶಿವಮೊಗ್ಗದಲ್ಲಿ ಇಂದು ಪ್ರಚಾರ ಕಾರ್ಯಕ್ಕೆ ಭರ್ಜರಿ ಚಾಲನೆ ನೀಡಲಾಯಿತು.

ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ವಾಹನಗಳಿಗೆ ವಿಶೇಷ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಈ ಮೂಲಕ ಅಭಿಮಾನೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಆಹ್ವಾನ ನೀಡಲಾಯಿತು.

ಇದಲ್ಲದೆ, ಮಾಧ್ಯಮ ಪ್ರತಿನಿಧಿಗಳನ್ನು ಸಹ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಗಿದ್ದು, ಈ ಅಭಿಮಾನೋತ್ಸವವು ರಾಜ್ಯ ರಾಜಕೀಯದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದು ಜಗದೀಶ್ ಅಭಿಪ್ರಾಯಪಟ್ಟರು.

ಯಡಿಯೂರಪ್ಪ ಅವರ ಅರ್ಧ ಶತಮಾನದ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ಈ ಅಭಿಮಾನೋತ್ಸವವು ಕೇವಲ ಆಚರಣೆಯಷ್ಟೇ ಅಲ್ಲದೆ, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ಸಂಘಟನೆ ಬಲವರ್ಧನೆಗೆ ಕಾರಣವಾಗಲಿದೆ ಎಂದು ಜಿಲ್ಲಾ ಅಧ್ಯಕ್ಷರು ವಿಶ್ವಾಸ ವ್ಯಕ್ತಪಡಿಸಿದರು.

​ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಕೆ. ಜಗದೀಶ್, ಮಾಜಿ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್, ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ, ಪ್ರಮುಖರಾದ ಎಸ್.ಎಸ್. ಜ್ಯೋತಿ ಪ್ರಕಾಶ್, ಹರಿಕೃಷ್ಣ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮೋಹನ್ ರೆಡ್ಡಿ, ಎಚ್.ಸಿ. ಮಾಲತೇಶ್, ನಾಗರಾಜ್, ಮಂಗೋಟೆ ರುದ್ರೇಶ್, ರಾಹುಲ್ ಬಿದ್ರೆ, ಶ್ರೀಮತಿ ಸುರೇಖಾ ಮುರುಳೀಧರ್, ಜಿಲ್ಲಾ ಮಾಧ್ಯಮ ಪ್ರಮುಖರಾದ ಎಸ್. ಚಂದ್ರಶೇಖರ್, ಎನ್. ಮಂಜುನಾಥ್, ಶರತ್ ಕಲ್ಯಾಣಿ, ಶ್ರೀಮತಿ ಶಾಂತಾ ಸುರೇಂದ್ರ, ಹಾಗೂ ಶ್ರೀಮತಿ ಸುಮಲತಾ ಭೂಪಾಳಂ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment