ಶಿವಮೊಗ್ಗ: ನಗರದ ಸಮೀಪದ ಪುರಲೆ ಗ್ರಾಮದಲ್ಲಿ ಶ್ರೀ ಜಗದ್ಗುರು ಪಂಚಪೀಠಾಧೀಶ್ವರರ ಭವ್ಯ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಭೆ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಭಿನಂದನಾ ಸಮಾರಂಭದ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು.
ಮುಂಬರುವ ಮೇ 17, 2026 ರಂದು ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮವನ್ನು ಅಭೂತಪೂರ್ವ ರೀತಿಯಲ್ಲಿ ಸಂಘಟಿಸುವ ಕುರಿತು ಸಮಾಜದ ಮುಖಂಡರು ಸುದೀರ್ಘ ಚರ್ಚೆ ನಡೆಸಿದರು.

ಕಾರ್ಯಕ್ರಮದ ರೂಪುರೇಷೆಗಳು
ಸಭೆಯಲ್ಲಿ ಭಾಗವಹಿಸಿದ್ದ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಸ್. ಷಡಾಕ್ಷರಿ ಅವರು ಮಾತನಾಡಿ, “ಪಂಚಪೀಠಗಳ ಜಗದ್ಗುರುಗಳ ಆಗಮನವು ನಮ್ಮಗಳಿಗೆ ದೊರೆತ ಸೌಭಾಗ್ಯ. ಈ ಕಾರ್ಯಕ್ರಮವು ಕೇವಲ ಒಂದು ಸಮಾರಂಭವಾಗದೆ, ಧರ್ಮ ಜಾಗೃತಿಯ ಸಂಕೇತವಾಗಬೇಕು. ಪ್ರತಿಯೊಬ್ಬ ಭಕ್ತರೂ ಸ್ವಯಂಪ್ರೇರಿತರಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು,” ಎಂದು ಕರೆ ನೀಡಿದರು.
ಈ ಸಭೆಯಲ್ಲಿ ಬಳ್ಳೇಕೆರೆ ಸಂತೋಷ್ ಅವರು ಮಾತನಾಡಿ, ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆ, ಸ್ವಯಂಸೇವಕರ ನಿಯೋಜನೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಉಪಯುಕ್ತ ಸಲಹೆಗಳನ್ನು ನೀಡಿದರು. ಪುರಲೆ ಗ್ರಾಮದ ಭಕ್ತಾದಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಲಾಯಿತು.

ಈ ಸಂಧರ್ಭದಲ್ಲಿ ಸಮಾಜದ ಮುಖಂಡರಾದ ಡಾ. ಹಿರೇಮಠ್, ಮೋಹನ್ ಕುಮಾರ್, ಲೋಕೇಶ್ ಹಾಗೂ ಮಲ್ಲಿಕಾರ್ಜುನ್, ಚೇತನ್ ದುಮಳ್ಳಿ, ನವೀನ್, ರಾಜಶೇಖರ್ ಸೇರಿದಂತೆ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಭಾಗವಹಿಸಿದ್ದರು.











